ಉತ್ತರ ಕನ್ನಡ | ಗೃಹ ಆರೋಗ್ಯ ಯೋಜನೆಯಡಿ: ಜಿಲ್ಲೆಯ 4 ಲಕ್ಷಕ್ಕೂ ಹೆಚ್ಚು ನಾಗರಿಕರಿಗೆ ಮನೆಬಾಗಿಲಲ್ಲಿ ಆರೋಗ್ಯ ತಪಾಸಣೆ

Date:

ಉತ್ತರ ಕನ್ನಡ: ರಾಜ್ಯದಲ್ಲಿನ ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ಸಾಂಕ್ರಾಮಿಕವಲ್ಲದ ರೋಗಗಳ ಕುರಿತಂತೆ ಉಚಿತವಾಗಿ ಆರೋಗ್ಯ ಪರೀಕ್ಷೆಗಳನ್ನು ನಡೆಸುವ ಗೃಹ ಆರೋಗ್ಯ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2025 ರಿಂದ ಅಕ್ಟೋಬರ್ ವರೆಗೆ ಒಟ್ಟು 4,09,448 ಜನರ ಆರೋಗ್ಯ ತಪಾಸಣೆ ನಡೆಸಿ, ವಿವಿಧ ಕಾಯಿಲೆಗಳ ಬಗ್ಗೆ ತಪಾಸಣೆ ಮತ್ತು ಸುರಕ್ಷಿತ ಆರೋಗ್ಯ ಮಾಹಿತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಯೋಜನೆಯಡಿ ಆರೋಗ್ಯ ಕಾರ್ಯಕರ್ತರ ಒಂದು ತಂಡ ದಿನಕ್ಕೆ 15 ಮನೆಗಳ ತಪಾಸಣೆ ನಡೆಸಿದೆ. ಪ್ರತಿ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಭೇಟಿ ಕಡ್ಡಾಯವಾಗಿರಲಿದೆ. ರಕ್ತದೊತ್ತಡ ಸಮಸ್ಯೆ, ಮಧುಮೇಹ, ಬಾಯಿ, ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್, ನಿದ್ದೆಯಲ್ಲಿ ಉಸಿರುಗಟ್ಟುವಿಕೆ, ಮಾನಸಿಕ ಆರೋಗ್ಯದ ತಪಾಸಣೆ ನಡೆಸಲಿದ್ದು, ದೃಢಪಟ್ಟ ಪ್ರಕರಣಗಳಿಗೆ ಅಗತ್ಯ ಔಷಧ ವಿತರಣೆ, ಕೆಲವರಿಗೆ ಜೀವನ ಶೈಲಿ ಮಾರ್ಪಾಡಿಗೆ ಸಲಹೆ ನೀಡಿ. ಆರೈಕೆಯಲ್ಲಿರುವ ರೋಗಿಗಳಿಗೆ, ಅಂಗವಿಕಲರಿಗೆ, ಹಿರಿಯ ನಾಗರಿಕರಿಗೆ ಔಷಧೋಪಚಾರ ಮತ್ತು ಉಚಿತವಾಗಿ ಮಾತ್ರೆಗಳ ವಿತರಣೆ ಮಾಡಲಾಗಿದೆ. 

ಜಿಲ್ಲೆಯಲ್ಲಿ ಅಗಸ್ಟ್-2025ನೇ ತಿಂಗಳಿoದ ಗೃಹ ಆರೋಗ್ಯ ಕಾರ್ಯಕ್ರಮವು ಆರಂಭವಾಗಿದ್ದು , ಈ ಕುರಿತು ಎಲ್ಲಾ ಹಂತದ ಸಿಬ್ಬಂದಿಗಳಿಗೆ ಗೃಹ ಆರೋಗ್ಯ ಕಾರ್ಯಕ್ರಮದ ಕುರಿತು ತರಬೇತಿ ನೀಡಿದೆ. ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯ ಮನೆಗೆ ತೆರಳಿ ಗೃಹ ಆರೋಗ್ಯ ಅಡಿಯಲ್ಲಿ ಬರುವ ವಿವಿಧ ಬಗೆಯ 14 ಕಾಯಿಲೆಗಳ ಬಗ್ಗೆ ಮಾಹಿತಿಯನ್ನು ನೀಡಿ, ಪ್ರಾಥಮಿಕ ತಪಾಸಣೆಯನ್ನು ನಡೆಸಿ, ಸಂಶಯಾಸ್ಪದ ಪ್ರಕರಣಗಳಿದ್ದಲ್ಲಿ ಹತ್ತಿರದ ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ತಪಾಸಣೆಗಾಗಿ ಕಳುಹಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ ಎಲ್ಲಾ 14 ಕಾಯಿಲೆಗಳ ತಪಾಸಣೆಯನ್ನು ಸಮುದಾಯ ಆರೋಗ್ಯಾಧಿಕಾರಿ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮಾಡಿ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದ್ದಲ್ಲಿ ಮೇಲ್ದರ್ಜೆಯ ಆಸ್ಪತ್ರೆಗಳಿಗೆ ನಿರ್ದೇಶನ ಮಾಡುತ್ತಾರೆ. 4 ರಿಂದ 6 ತಿಂಗಳಲ್ಲಿ ಸ್ತ್ರೀನಿಂಗ್ ಕಾರ್ಯ ಪೂರ್ಣಗೊಳಿಸಿ, ನಂತರ ಹೆಚ್ಚಿನ ಆರೈಕೆಗಾಗಿ ಒಂದು ತಿಂಗಳ ನಂತರ ವಿಶೇಷ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುವುದು. ಎರಡನೇ ಹಂತದಲ್ಲಿ ಫಾಲೋಅಪ್ ಮತ್ತು ನಿಯಂತ್ರಣಕ್ಕೆ ಗಮನ ನೀಡಲಾಗುವುದು. ಆರೈಕೆಯನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸಿಕ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚಳ: ಅಬಕಾರಿ ಇಲಾಖೆಯ ನಿರ್ಲಕ್ಷ್ಯಕ್ಕೆ ಬಡ ಕುಟುಂಬಗಳು ಬೀದಿಪಾಲು

ಗೃಹ ಆರೋಗ್ಯ ಕಾರ್ಯಕ್ರಮದದಲ್ಲಿ ಜಿಲ್ಲೆಯಲ್ಲಿ ಇದುವರೆಗೆ 1,05,365 ರಕ್ತದೊತ್ತಡ, 78084 ಮಧುಮೇಹ, 3800 ಮಾನಸಿಕ ಆರೋಗ್ಯ ಸಮಸ್ಯೆ, 7106 ಅನಿಮಿಯಾ, 78042 ಬಾಯಿ ಕ್ಯಾನ್ಸರ್, 29848 ಸ್ತನ ಕ್ಯಾನ್ಸರ್, 8759 ಗರ್ಭಕಂಠದ ಕ್ಯಾನ್ಸರ್, 21498 ಮಧುಮೇಹ ಕಾಲು ,19279 ಡಯಾಬೇಟಿಕ್ ರೆಟಿನೋಪತಿ ಪರೀಕ್ಷೆ ಸೇರಿದಂತೆ 4 ಲಕ್ಷಕ್ಕೂ ಅಧಿಕ ತಪಾಸಣೆಗಳನ್ನು ಕೈಗೊಂಡಿದ್ದು, 8558 ಸಂಶಯಾಸ್ಪದ ಪ್ರಕರಣಗಳನ್ನು ಚಿಕಿತ್ಸೆಗೆ ವರದಿ ಮಾಡಿದ್ದು, 1303 ಮಂದಿಯಲ್ಲಿ ಹೊಸದಾಗಿ ರೋಗಗಳನ್ನು ಪತ್ತೆ ಹಚ್ಚಿದ್ದು, 16822 ಮಂದಿಗೆ ಉಚಿತವಾಗಿ ಔಷಧಗಳನ್ನು ವಿತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ರೋಗಗಳು ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ , ರೋಗಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯ. ಗೃಹ ಆರೋಗ್ಯ ಯೋಜನೆಯ ಮೂಲಕ ರೋಗಗಳನ್ನು ಸಾಕಷ್ಟು ಮೊದಲೇ ಪತ್ತೆ ಹಚ್ಚಲು ಸಾಧ್ಯವಾಗುವುದರಿಂದ ಗಮನಾರ್ಹ ಆರೋಗ್ಯ ಸಮಸ್ಯೆಗಳು ಉಲ್ಬಣಿಸುವುದನ್ನು ಮತ್ತು ಅಕಾಲಿಕ ಮರಣಗಳನ್ನು ತಡೆಗಟ್ಟಲು ಸಾಧ್ಯವಾಗಲಿದೆ. ಮನೆ ಭೇಟಿಯ ಸಂದರ್ಭದಲ್ಲಿ ಉಚಿತ ರೋಗ ತಪಾಸಣೆ ಮಾತ್ರವಲ್ಲದೇ ಉಚಿತವಾಗಿ ಔಷಧಗಳ ವಿತರಣೆ ಮತ್ತು ಆರೋಗ್ಯಕರ ಜೀವನಶೈಲಿಯ ಬಗ್ಗೆ ಕೂಡಾ ಮಾಹಿತಿ ನೀಡಲಾಗುತ್ತಿದೆ. ಎಂದು ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಕಾರ್ಯಕ್ರಮ ಅಧಿಕಾರಿ ಡಾಕ್ಟರ್ ಶಂಕರ್ ರಾವ್ ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...