ಉತ್ತರ ಕನ್ನಡ | ಯುವತಿ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ನಿರ್ಲಕ್ಷ್ಯದ ಆರೋಪ, ಕದ್ರಾ ಪಿಎಸ್‌ಐ ಅಮಾನತು

Date:

ಉತ್ತರ ಕನ್ನಡ ಜಿಲ್ಲೆಯ ಕದ್ರಾ ನಿವಾಸಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ನಿಷ್ಕಾಳಜಿ ವಹಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕದ್ರಾ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಬಂಡಿವಡ್ಡರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಪ್ರಕರಣದ ಹಿನ್ನೆಲೆ: ರೀನಾ ಹಾಗೂ ಕ್ರಿಸ್ತೋದ್ ಡಿಸೋಜಾ ದಂಪತಿಯ ಪುತ್ರಿಯಾದ ರಿಶೇಲ್ ಡಿಸೋಜಾ ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದರು. ಈ ಘಟನೆಗೆ ಜೆಡಿಎಸ್ ಮುಖಂಡೆಯೊಬ್ಬರ ಪುತ್ರ ಚಿರಾಗ್ ಎಂಬಾತ ನೀಡಿದ್ದ ಮಾನಸಿಕ ಕಿರುಕುಳವೇ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಪ್ರೀತಿಸುವಂತೆ ಪೀಡಿಸಿದ್ದಲ್ಲದೆ, ಯುವತಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಮೃತಳ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ತಿಳಿಯಲು ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸುವಂತೆ ಕುಟುಂಬಸ್ಥರು ಪಟ್ಟು ಹಿಡಿದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ದಾಖಲಾದ ಆರಂಭಿಕ ಹಂತದಲ್ಲೇ ತನಿಖಾಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಮತ್ತು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಮೃತ ಯುವತಿಯ ಕುಟುಂಬಸ್ಥರು ಹಾಗೂ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ತಹಶೀಲ್ದಾರ್‌ಗಳ ಹೆಗಲಿಗೆ ಉಪವಿಭಾಗಗಳ ಹೊಣೆ; ಖಾಯಂ ಅಧಿಕಾರಿಗಳ ಕೊರತೆಯಿಂದ ಅಭಿವೃದ್ಧಿಗೆ ಅಡ್ಡಿ

ಈ ಕುರಿತು ಪೊಲೀಸ್ ಮೇಲಾಧಿಕಾರಿಗಳಿಗೆ ಲಿಖಿತ ದೂರು ನೀಡಲಾಗಿತ್ತು. ಘಟನೆಯ ಸುತ್ತ ರಾಜಕೀಯ ಒತ್ತಡ ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಕರ್ತವ್ಯ ಲೋಪದ ಆಧಾರದ ಮೇಲೆ ಪಿಎಸ್‌ಐ ಸುನೀಲ್ ಬಂಡಿವಡ್ಡರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಸದ್ಯ ಪ್ರಕರಣದ ತನಿಖೆ ಮುಂದುವರಿದಿದ್ದು, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...