ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗಳನ್ನು ಕೈಬಿಡಿ: ಗಂಗಾಧರೇಂದ್ರ ಸರಸ್ವತಿ ಸ್ವಾಮಿ ಆಗ್ರಹ

Date:

ಪಶ್ಚಿಮ ಘಟ್ಟಗಳ ಜೀವವೈವಿಧ್ಯಕ್ಕೆ ಅಪಾಯಕಾರಿಯಾಗಿರುವ ಬೇಡ್ತಿ-ವರದಾ ನದಿ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಬಿಡಬೇಕು ಎಂದು ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲೆಯ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹೇಳಿದ್ದಾರೆ.

ರಾಜ್ಯದಲ್ಲಿ ಪರಿಸರಾಸಕ್ತರ ವ್ಯಾಪಕ ವಿರೋಧದ ನಡುವೆಯೂ ಬೇಡ್ತಿ–ವರದಾ ನದಿಗಳ ಜೋಡಣೆಗೆ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬೇಡ್ತಿ-ಅಘನಾಶಿನಿ ಕಣಿವೆ ಸಂರಕ್ಷಣಾ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಅವರು ಪತ್ರಿಕೆ ಹೇಳಿಕೆ ನೀಡಿದ್ದು, “ಯೋಜನೆಗಳನ್ನು ವಿರೋಧಿಸಲು ಜನವರಿ 11ರಂದು ಬೃಹತ್ ಸಾರ್ವಜನಿಕ ಸಮಾವೇಶ ನಡೆಸಲಾಗುವುದು” ಎಂದು ತಿಳಿಸಿದರು.

“ಜಿಲ್ಲೆಯ ಶಿರಸಿ ಪಟ್ಟಣದ ಎಂಇಎಸ್ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಈ ಸಮಾವೇಶದಲ್ಲಿ 20,000ಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ. ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳ ನೆಪದಲ್ಲಿ ಸರ್ಕಾರಗಳು ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಯೋಜಿಸುತ್ತಿವೆ. ಆದರೆ ಇದು ಮೂರು ಬೃಹತ್ ಜಲಾಶಯಗಳು ಮತ್ತು ಬೃಹತ್ ಸುರಂಗಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ. ಈ ಯೋಜನೆಗಳು ದಟ್ಟ ಕಾಡುಗಳಿಗೆ ಮತ್ತು ಪರಿಸರಕ್ಕೆ ಅಪಾಯವನ್ನುಂಟುಮಾಡುತ್ತವೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ರಭುರಾವ ಕಂಬಳಿವಾಲೆ, ಡಾ.ಜಯದೇವಿ ತಾಯಿ ಲಿಗಾಡೆ ಹೆಸರಿನಲ್ಲಿ ಟ್ರಸ್ಟ್‌ಗಳು ರಚಿಸಿ ಸರ್ಕಾರ ಆದೇಶ

“ಸರ್ಕಾರಗಳು ಯೋಜನೆಗಳೊಂದಿಗೆ ಮುಂದುವರೆದರೆ ಉತ್ತರ ಕನ್ನಡ ಜಿಲ್ಲೆಯ ಜನರು ಆಂದೋಲನವನ್ನು ಪ್ರಾರಂಭಿಸುವುದು ಅನಿವಾರ್ಯವಾಗುತ್ತದೆ” ಎಂದು ಮಠಾಧೀಶರು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...