ಉತ್ತರ ಕನ್ನಡ | ಬಸ್‌ ಮತ್ತು ಕಾರು ನಡುವೆ ಅಪಘಾತ; ಸ್ಥಳದಲ್ಲೇ ನಾಲ್ವರ ಸಾವು

Date:

ಕಾರು ಮತ್ತು ಸರ್ಕಾರಿ ಬಸ್​ನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬಂಡಲದಲ್ಲಿ ಶುಕ್ರವಾರ(ಡಿ.08) ನಡೆದಿದೆ.

ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್​​​​​ ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಬೆಳಗ್ಗೆ 11ಗಂಟೆಗೆ ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಕಾರಿನಲ್ಲಿದ್ದ ವ್ಯಕ್ತಿಗಳು ಮಂಗಳೂರು ಸಮೀಪದವರು, ಗಂಭೀರವಾಗಿ ಗಾಯಗೊಂಡ ವ್ಯಕ್ತಿ ತಮಿಳುನಾಡಿನ ವಿಳಾಸದವರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್ಸಿನ (ಕೆಎ 31, ಎಫ್.1611) ಚಾಲಕ ಮತ್ತು ಬಸ್​ನಲ್ಲಿ 60ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನುಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮೃತರ ವಿವರವನ್ನು ಪೊಲೀಸರು ಪತ್ತೆಹಚ್ಚುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...