ಉತ್ತರ ಕನ್ನಡ | ಚಾರ್ಸಿ ತುಂಡಾಗಿ ಕುಸಿದುಬಿದ್ದ ಬಸ್‌; ಹಲವರಿಗೆ ಗಾಯ

Date:

ಕೆಎಸ್‌ಆರ್‌ಟಿಸಿ ಬಸ್‌ನ ಚಾರ್ಸಿ ತುಂಡಾಗಿದ್ದು, ಚಲಿಸುತ್ತಿದ್ದ ಬಸ್‌ನ ಒಂದು ಬದಿ ನೆಲಕ್ಕೆ ಕುಸಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದ ಹಬ್ಬುವಾಡ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇತ್ತೀಚೆಗಷ್ಟೇ, ಸರ್ಕಾರಿ ಸಾರಿಗೆ ಬಸ್‌ಗಳಿಗೆ ಪ್ರತಿ ವರ್ಷ ಫಿಟಿಂಗ್ ಸರ್ಟಿಫಿಕೇಟ್ ಪಡೆಯಬೇಕು. ಉತ್ತಮವಾಗಿಲ್ಲ ಅಥವಾ ನಿರ್ದಿಷ್ಟ ಕಿಲೋಮೀಟರ್ ಓಡಿದ ಬಸ್‌ಗಳನ್ನು ರಸ್ತೆಗೆ ಇಳಿಸಬಾರದು ಎಂದು ನಿರ್ದೇಶಿಸಿದೆ. ಆದರೂ, ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದ್ದ ಬಸ್‌ಅನ್ನು ರಸ್ತೆಗಿಳಿಸಿದ್ದ ಪರಿಣಾಮ ಅವಘಡ ನಡೆದಿದೆ ಎಂದು ಹೇಳಲಾಗಿದೆ.

ಕಾರವಾದಿಂದ ಕೆರವಡಿ ಗ್ರಾಮಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಮಾರ್ಗ ಮಧ್ಯೆ ಚಾರ್ಸಿ ತುಂಡಾಗಿ ಕುಸಿದಿದೆ. ಬಸ್ಸಿನಲ್ಲಿ ಸುಮಾರು 10ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅವರಲ್ಲಿ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...