ಯಲ್ಲಾಪುರ | ಕಾರು-ಲಾರಿ ಅಪಘಾತ: ಕಾರಲ್ಲಿದ್ದ ಪತಿ- ಪತ್ನಿ ಮತ್ತು ಏಳು ತಿಂಗಳ ಮಗು ಸಾವು

Date:

ಲಾರಿ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪತಿ, ಪತ್ನಿ ಹಾಗೂ ಏಳು ತಿಂಗಳ ಮಗ ಸೇರಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಬುಧವಾರ ರಾತ್ರಿ ನಡೆದಿದೆ.

ಕೊಪ್ಪಳ ಮೂಲಕ ಶ್ರೀಕಾಂತ ರೆಡ್ಡಿ (37), ಅವರ ಪತ್ನಿ ಚೈತ್ರಾ ಆರ್(31) ಹಾಗೂ ಅವರ ಏಳು ತಿಂಗಳ ಮಗು ಶ್ರೀಹಾನ್ ಅಪಘಾತದಲ್ಲಿ ಮೃತಟಪಟ್ಟವರು. ಕಾರು ಚಾಲಕ ಆರ್ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಟುಂಬ ಸಮೇತರಾಗಿ ಅಂಕೋಲಾದಿಂದ ಹುಬ್ಬಳ್ಳಿ ಕಡೆ ಹೊರಟ್ಟಿದ್ದರು. ಈ ವೇಳೆ ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಅಪಘಾತ ಸಂಭವಿಸಿದೆ. ಲಾರಿ ಚಾಲಕ ವೇಗವಾಗಿ ಬಂದು ಅರಬೈಲ್ ಮಾರುತಿ ದೇವಾಲಯದಿಂದ ಸ್ವಲ್ಪ ಮುಂದೆ ನಿಯಂತ್ರಣ ತಪ್ಪಿ ಬಲಕ್ಕೆ ಹೊರಳಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರಿಗೆ ರಭಸವಾಗಿ ಲಾರಿ ಡಿಕ್ಕಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಿಜಯಪುರದ ಪ್ರಶಾಂತ ಕುಂಬಾರ ಲಾರಿ ಚಾಲಕ ಎಂದು ತಿಳಿದುಬಂದಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಯಲ್ಲಾಲಿಂಗ ಕುನ್ನೂರು ತನಿಖೆ ನಡೆಸುತ್ತಿದ್ದಾರೆ. ಸಿಪಿಐ ರಮೇಶ ಹಾನಾಪುರ ಹಾಗೂ ಶಿರಸಿ ಡಿವೈಎಸ್‌ಪಿ ಗಣೇಶ ಕೆ ಎಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...