ಮುಂಡಗೋಡ | ಮನರೇಗಾ ಕಾಯ್ದೆ ಮುಂದುವರೆಸುವಂತೆ ಗ್ರಾ.ಪಂ. ಸದಸ್ಯರ ಒಕ್ಕೂಟ ಆಗ್ರಹ

Date:

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ ಕಾಯ್ದೆ)ಯನ್ನು ಸರಳೀಕರಣ ಮಾಡಿ ಯೋಜನೆಯನ್ನು ಮುಂದುವರೆಸುವಂತೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದವರು ಮತ್ತು ವಿವಿಧ ಸಂಘಟನೆಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಶಂಕರ ಗೌಡಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

“ಕೇಂದ್ರ ಸರ್ಕಾರ ಮಹಾತ್ಮ ಗಾಂಧೀಜಿಗೆ ಅಗೌರವವನ್ನು ತೋರುವ ಮೂಲಕ, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಶೇ30ರಷ್ಟು ಹಣವನ್ನು ಕಡಿತ ಮಾಡಿದೆ. ಅಲ್ಲದೇ, 60 ಮತ್ತು 40ರ ಅನುಪಾತದಲ್ಲಿ ಹಣವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಾಕಬೇಕೆಂದು ಕಾನೂನು ರೂಪಿಸಿದ್ದಾರೆ. ಈ ಎಲ್ಲ ವಿಷಯ ಪರಿಶೀಲಿಸಿದಾಗ, ರಾಜ್ಯ ಸರ್ಕಾರಗಳು ಈ ಹಣವನ್ನು ತುಂಬಲು ಸಾಧ್ಯವೇ ಇಲ್ಲ ಎನ್ನುವುದು ಮನವರಿಕೆಯಾಗುತ್ತದೆ. ಮನರೇಗಾ ಬಂದ್‌ ಮಾಡುವ ಉದ್ದೇಶದಿಂದಲೇ ಈ ರೀತಿಯಾಗಿ ಬೇಕಾಬಿಟ್ಟಿ ಕಾನೂನನ್ನು ಕೇಂದ್ರ ಸರ್ಕಾರ ರೂಪಿಸಿದ್ದು, ಇದನ್ನು ಒಪ್ಪಲು ಆಗದು” ಎಂದು ಪ್ರತಿಭಟನಾನಿರತರು ದೂರಿದರು.

“ವಿಬಿ ಜಿ ರಾಮ್ ಜಿ ಯೋಜನೆಯನ್ನು ರದ್ದು ಮಾಡಿ, ಮೊದಲಿದ್ದಂತೆಯೇ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತರಬೇಕು. ಯೋಜನೆಯನ್ನು ನಿಲ್ಲಿಸಿದರೆ ಬಡತನ, ನಿರುದ್ಯೋಗ ಸಮಸ್ಯೆ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮಸ್ಯೆ ಉದ್ಭವವಾಗುವುದರಲ್ಲಿ ಸಂದೇಹವಿಲ್ಲ. ಕೇಂದ್ರ ಸರ್ಕಾರ ಕೂಡಲೇ ಈ ಯೋಜನೆಯನ್ನು ಮೊದಲಿದ್ದ ಹಾಗೆ ಜಾರಿಗೆ ತಂದು ಗ್ರಾಮ ಪಂಚಾಯಿತಿಗಳಿಗೆ ಬಲ ನೀಡುವ ಮುಖಾಂತರ ಅಭಿವೃದ್ಧಿಗೆ ಕೈಜೋಡಿಸಬೇಕು. ಮಹಾತ್ಮ ಗಾಂಧೀಜಿಯ ಹೆಸರಿನ ನೈತಿಕ ಬಲವೂ ಇಲ್ಲದ ವಿಬಿ ಜಿ ರಾಮ್ ಜಿ ಯೋಜನೆಯನ್ನು ಜಾರಿ ಮಾಡುತ್ತಿರುವುದು ಗ್ರಾಮೀಣ ಭಾರತದ ಆರ್ಥಿಕತೆಗೆ ನೀಡುತ್ತಿರುವ ಕೊಡಲಿ ಪೆಟ್ಟಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕನಕಪುರ | ರೇಷ್ಮೆ ಇಲಾಖೆಯಲ್ಲಿ 3 ಕೋಟಿ ಹಗರಣ; ಸಹಾಯಕ ನಿರ್ದೇಶಕನ ವಿರುದ್ಧ ದೂರು

ಒಕ್ಕೂಟದ ಅಧ್ಯಕ್ಷ ಧರ್ಮರಾಜ ನಡಗೇರ, ಡಿಎಸ್ಎಸ್ ಅಂಬೇಡ್ಕರ್ ಧ್ವನಿಯ(ಚಂದ್ರಕಾಂತ ಕಾದ್ರೊಳ್ಳಿ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಸಂಗಮೇಶ್ವರ, ಮನರೇಗಾ ಕೂಲಿ ಕಾರ್ಮಿಕರ ಸಂಘ, ಮಹಿಳಾ ಹಾಗೂ ರೈತ ಸಂಘಟನೆಗಳ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...