ಉತ್ತರ ಕನ್ನಡ | ಹಣಕ್ಕಾಗಿ ವೃದ್ಧ ದೊಡ್ಡಮ್ಮ-ದೊಡ್ಡಪ್ಪನ ಹತ್ಯೆ; ಅಪರಾಧಿಗೆ ಜೀವಾವಧಿ ಶಿಕ್ಷೆ

Date:

ಟ್ರಾನ್ಸ್‌ಪೋರ್ಟ್‌ ವ್ಯವಹಾರ ನಡೆಸುತ್ತಿದ್ದ ವೃದ್ಧ ದಂಪತಿಯನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿ, ಮೃತರ ತಮ್ಮನ ಮಗ ಸುಕೇಶ್ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕಾರವಾರದ ಉತ್ತರ ಕನ್ನಡ ಜಿಲ್ಲಾ ಸೆಷನ್‌ ನ್ಯಾಯಾಲಯ ಆದೇಶ ಹೊರಡಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದ ನಿವಾಸಿ ನಾರಾಯಣ ನಾಯಕ್ (78) ಮತ್ತು ಅವರ ಪತ್ನಿ ಸಾವಿತ್ರಿ ನಾಯಕ್ (74) ಎಂಬರನ್ನು 2019ರ ಡಿಸೆಂಬರ್ 20ರಂದು ಕೊಲೆ ಮಾಡಲಾಗಿತ್ತು. ಟ್ರಾನ್ಸ್‌ಪೋರ್ಟ್‌ ವ್ಯವಹಾರ ನಡೆಸುತ್ತಿದ್ದ ದಂಪತಿಗಳು ಒಂದಷ್ಟು ಹಣ ಇಟ್ಟಿದ್ದರು. ಆಗಾಗ್ಗೆ ಅವರ ಮನೆಗೆ ಬರುತ್ತಿದ್ದ ಸುಕೇಶ್, ಅವರಲ್ಲಿ ಹಣ ಇರುವುದನ್ನು ಗಮನಿಸಿದ್ದ. ದುಶ್ಚಟಗಳಿಗೆ ಬಲಿಯಾಗಿದ್ದ ಸುಕೇಶ್, ಹಣಕ್ಕಾಗಿ ತನ್ನ ಸಂಗಡಿಗರಾದ ವೆಂಕಟ್ ರಾಜ್, ನಾಗರಾಜ್ ಮತ್ತು ಭರತ ಜೊತೆ ಸೇರಿ, ದಂಪತಿಗಳನ್ನು ಕೊಲೆ ಮಾಡಿದ್ದ.

ದಂಪತಿಗಳ ಮನೆಯಲ್ಲಿದ್ದ 2 ಲಕ್ಷ ರೂ. ನಗದು ಮತ್ತು 160 ಗ್ರಾಂ ಚಿನ್ನ ತೆಗೆದುಕೊಂಡು, ಸಾಕ್ಷ್ಯನಾಶಕ್ಕಾಗಿ ಮನೆ ಮತ್ತು ಸುತ್ತಮುತ್ತ ಮೆಣಸಿನಕಾಯಿ ಪುಡಿ ಹಾಕಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳ ಪತ್ತೆಗೆ ಭಾರೀ ಕಸರತ್ತು ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಸಂಬಂಧ ಮೃತರ ಸಂಬಂಧಿಗಳ ಹೇಳಿಕೆ ಸಂಗ್ರಹಿಸಲು ಪೊಲೀಸರು ಸುಕೇಶ್‌ ಮನೆಗೆ ಹೊರಟಿದ್ದರು. ಈ ವಿಚಾರ ತಿಳಿದ ಸುಕೇಶ್ ಮನೆಯಿಂದ ಪರಾರಿಯಾಗಿದ್ದ. ಆತ ಕಾಣೆಯಾಗಿದ್ದಾನೆಂದು ಕುಟುಂಬಸ್ಥರು ದೂರು ದಾಖಲಿಸಿದ್ದರು. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಎರಡು ದಿನಗಳ ಬಳಿಕ ಆತ ಪೊಲೀಸರಿಗೆ ಸಿಕ್ಕಿದ್ದ. ಆತನ ಬಳಿ ಫೋನ್‌ ಇಲ್ಲದೇ ಇರುವುದು ಹಾಗೂ ಆತನ ಆವಭಾವಗಳನ್ನು ಗಮಿಸಿದ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ, ತಾನೇ ತನ್ನ ಸ್ನೇಹಿತರೊಂದಿಗೆ ಸೇರಿ ಕೊಲೆ ಮಾಡಿದ್ದಾಗಿ ಸುಕೇಶ್ ಒಪ್ಪಿಕೊಂಡಿದ್ದ.

ಪ್ರಕರಣದ ವಿಚಾರಣೆ ನಡೆಸಿರುವ ಉತ್ತರ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್ ಅವರು ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದಾರೆ. ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...