ಓವರ್‌ಟೇಕ್‌ ಮಾಡಿದ ವ್ಯಕ್ತಿಗೆ ಅನಂತ್‌ ಕುಮಾರ್‌ ಹೆಗಡೆ ಪುತ್ರನಿಂದ ಹಲ್ಲೆ; ಕಾರಿನಲ್ಲಿದ್ದ ಮಾಜಿ ಸಂಸದ

Date:

ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಅವರ ಪುತ್ರ, ಗನ್‌ಮ್ಯಾನ್‌ ಮತ್ತು ಕಾರು ಚಾಲಕ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಹಳೇ ನಿಜಗಲ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಮಾಜಿ ಸಂಸದ ಅನಂತ್​ ಕುಮಾರ್ ಹೆಗಡೆ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | 1180 ದಿನಗಳ ಚನ್ನರಾಯಪಟ್ಟಣ ಚಳವಳಿಗೆ ಸರ್ಕಾರ ಸ್ಪಂದಿಸಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ, ಅನಂತ್ ಕುಮಾರ್ ಹೆಗಡೆ ಅವರು ಇದ್ದ ಕಾರನ್ನು ಮತ್ತೊಂದು ಕಾರು ಓವರ್​​ಟೇಕ್​ ಮಾಡಿದೆ. ಓವರ್‌ಟೇಕ್‌ ಮಾಡಿದ್ದಕ್ಕೆ ಅನಂತ್ ಕುಮಾರ್ ಹೆಗಡೆ ಕಾರು ಚಾಲಕ ಮಹೇಶ್, ಗನ್ ಮ್ಯಾನ್ ಶ್ರೀಧರ್ ಮತ್ತು ಅನಂತ್ ಕುಮಾರ್ ಹೆಗಡೆ ಅವರ ಪುತ್ರ ಆಶುತೋಷ್ ಮತ್ತೊಂದು ಕಾರಿನಲ್ಲಿದ್ದ ಸಲ್ಮಾನ್, ಸೈಪ್, ಇಲಿಯಾಜ್ ಖಾನ್, ಗುಲಷಿರ್ ಉನ್ನಿಸಾ ಎಂಬುವರ ಮೇಲೆ ಹಲ್ಲೆ ಮಾಡಿರುವ ಎಂಬ ಆರೋಪ ಕೇಳಿಬಂದಿದೆ.

ಹಲ್ಲೆಯಿಂದ ಗಾಯಗೊಂಡವರನ್ನು ದಾಬಸ್‌ಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ನೆಲಮಂಗಲ ಡಿವೈಎಸ್‌ಪಿ ಕಚೇರಿಯಲ್ಲಿ ಅನಂತ್‌ ಕುಮಾರ್‌ ಹೆಗಡೆ, ಚಾಲಕ ಮತ್ತು ಗನ್​ಮ್ಯಾನ್​ನನ್ನು ಡಿವೈಎಸ್ಪಿ ಜಗದೀಶ್ ವಿಚಾರಣೆ ನಡೆಸಿದ್ದಾರೆ.

ಘಟನೆ ಸಂಬಂಧ ದಾಬಸ್ ಪೇಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...