ಉತ್ತರ ಕನ್ನಡ | ನಿಷೇಧವಿದ್ದರೂ ಹೆಚ್ಚಿದ ಬೆಳಕಿನ ಮೀನುಗಾರಿಕೆ

Date:

ಬೆಳಕಿನ ಮೀನುಗಾರಿಕೆ ಅವೈಜ್ಞಾನಿಕ ಪದ್ಧತಿ ಎಂಬ ಕಾರಣಕ್ಕೆ ನಿಷೇಧಿಸಲಾಗಿದೆ. ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕದ್ದುಮುಚ್ಚಿ ನಡೆಸಲಾಗುತ್ತಿದ್ದ ಬೆಳಕಿನ ಮೀನುಗಾರಿಕೆ ಇದೀಗ ಮುಕ್ತವಾಗಿ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬೈತಕೋಲದ ಬಂದರಿನಲ್ಲಿ ಬೆಳಕಿನ ಮೀನುಗಾರಿಕೆ ನಡೆಸಿ ದಡಕ್ಕೆ ಮರಳಿದ ಬೋಟ್‌ವೊಂದರ ದೃಶ್ಯಗಳನ್ನು  ಮೀನುಗಾರರೊಬ್ಬರು ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ನಿತ್ಯ ಹಲವು ಬೋಟ್‍ಗಳು ಜಿಲ್ಲೆಯ ವ್ಯಾಪ್ತಿಯಲ್ಲಿ ಬೆಳಕಿನ ಮೀನುಗಾರಿಕೆ ನಡೆಸುತ್ತಿವೆ ಎಂದು ಅವರು ದೂರಿದ್ದಾರೆ.

ಜಿಲ್ಲೆಯ ಹತ್ತಾರು ಪರ್ಸಿನ್ ಬೋಟ್‍ಗಳು ನಿರಾತಂಕವಾಗಿ ಆಳಸಮುದ್ರದಲ್ಲಿ ಬೆಳಕಿನ ಮೀನುಗಾರಿಕೆ ನಡೆಸುತ್ತಿವೆ ಎಂದು ಸಾಂಪ್ರದಾಯಿಕ ಮೀನುಗಾರರು ಆರೋಪಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಬೆಳಕಿನ ಮೀನುಗಾರಿಕೆ ನಡೆಸುವ ಬೋಟುಗಳನ್ನು ಪತ್ತೆ ಹಚ್ಚಿ ಹಿಡಿದುಕೊಡುವ ಕೆಲಸವನ್ನು ಮೀನುಗಾರರೇ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಈ ಬಾರಿ ಹಲವು ಬೋಟುಗಳ ನಿಷೇಧಿತ ಪದ್ಧತಿ ಮೂಲಕ ಮೀನುಗಾರಿಕೆ ನಡೆಸುತ್ತಿದ್ದರು ದೂರು ನೀಡಲು ಯಾರು ಮುಂದೆ ಬರುತ್ತಿಲ್ಲ. ಬೈತಕೋಲ, ಹೊನ್ನಾವರ, ಭಟ್ಕಳ ಭಾಗದಲ್ಲಿ ಹಲವು ಪರ್ಸಿನ್ ಬೋಟುಗಳು ಬೆಳಕಿನ ಮೀನುಗಾರಿಕೆಯಲ್ಲಿ ತೊಡಗಿಕೊಂಡಿವೆ ಎಂದು ಮೀನುಗಾರರು ದೂರುತ್ತಿದ್ದಾರೆ.

‘ಆಳಸಮುದ್ರದಲ್ಲಿ 250 ಕೆ.ವಿ ಸಾಮರ್ಥ್ಯದ ಜನರೇಟರ್, 12 ಎಲ್‌ಇಡಿ ಬಲ್ಬ್ ಬಳಸಿ ರಾತ್ರಿ ವೇಳೆ ಪ್ರಖರ ಬೆಳಕು ಬೀರಲಾಗುತ್ತದೆ. ಬೆಳಕಿಗೆ ಗುಂಪುಗೂಡುವ ಮೀನನ್ನು ಸಣ್ಣ ಗಾತ್ರದ ಬಲೆ ಬೀಸಿ ಹಿಡಿಯಲಾಗುತ್ತದೆ. ನಿಷೇಧಿತ ಪದ್ಧತಿಯಲ್ಲಿ ಮೀನುಗಾರಿಕೆ ನಡೆಸುತ್ತಿರುವವರನ್ನು ನಿಯಂತ್ರಿಸಲು ಮೀನುಗಾರಿಕೆ ಇಲಾಖೆಗೆ ಸಾಧ್ಯವಾಗುತ್ತಿಲ್ಲ. ಪ್ರಭಾವಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಪರ್ಸಿನ್ ಬೋಟುಗಳನ್ನು ನಡೆಸುತ್ತಿದ್ದು ಅವರೇ ಈ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಇಲ್ಲಿನ ಬೋಟ್ ಮಾಲೀಕರೊಬ್ಬರು ಆರೋಪಿಸುತ್ತಿದ್ದಾರೆ.

ಮೀನಿನ ಸಂತತಿಗೆ ಬೆಳಕಿನ ಮೀನುಗಾರಿಕೆ ಹಾನಿ ಉಂಟುಮಾಡುತ್ತದೆ ಎಂದು ನಿಷೇಧಿಸಲಾಗಿದೆ. ಮೀನಿನ ಕೊರತೆಯಿಂದ ಬೈತಕೋಲದ 75ಕ್ಕೂ ಹೆಚ್ಚು ಟ್ರಾಲರ್ ಬೋಟುಗಳು ಸಮುದ್ರಕ್ಕೆ ಇಳಿಯದಂತ ಸ್ಥಿತಿ ಇದೆ. ಮೀನು ಕೊರತೆ ಉಂಟುಮಾಡುವ ಚಟುವಟಿಕೆ ಹೆಚ್ಚುತ್ತಿರುವುದು ಕಳವಳಕಾರಿ ಎಂದು ಮೀನುಗಾರ ಮುಖಂಡ ವಿನಾಯಕ ಹರಿಕಂತ್ರ ಮಾದ್ಯಮದೆದುರು ತಮ್ಮ ಬೇಸರ ಹೊರಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...