ಉತ್ತರ ಕನ್ನಡ | ಇನ್‌ಸ್ಟಾಗ್ರಾಂ ಸ್ನೇಹಿತನ ಕಿರುಕುಳ; ಯುವತಿ ಆತ್ಮಹತ್ಯೆ

Date:

ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹ ಬೆಳೆಸಿದ್ದ ವ್ಯಕ್ತಿ ನೀಡಿದ ಕಿರುಕುಳದಿಂದ ಬೇಸತ್ತ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ನಿವಾಸಿ, 24 ವರ್ಷದ ನೇತ್ರಾ ಗೋವಾಲಿ ಆತ್ಮಹತ್ಯೆಗೆ ಶರಣಾದ ಯುವತಿ.

ಯುವತಿಯ ತಂದೆ ಆಕೆಯ ಇನ್‌ಸ್ಟಾಗ್ರಾಮ್ ಸ್ನೇಹಿತ ಗೋವರ್ಧನ ಮೊಗೇರ್ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಸ್ನೇಹಿತನ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವತಿಗೆ ಆರೋಪಿ ಒಂದು ವರ್ಷದಿಂದ ಪರಿಚಿತನಾಗಿದ್ದಾನೆ. ಅಲ್ಲದೆ, ಇತ್ತೀಚೆಗೆ ತನ್ನನ್ನು ಪ್ರೀತಿಸುವಂತೆ ಆತ ನಿರಂತರವಾಗಿ ಒತ್ತಾಯಿಸುತ್ತಿದ್ದನ್ನು ಎಂದು ಪೊಲೀಸರು ತಿಳಿಸಿದ್ದಾರೆ.

ಆತನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಳು. ಇದರಿದಾಗಿ, ಆಕೆಗೆ ಆತ ಖರ್ಚು ಮಾಡಿದ್ದ ಎಲ್ಲ ಹಣವನ್ನು ವಾಪಸ್‌ ಕೊಡುವಂತೆ ಪೀಡಿಸುತ್ತಿದ್ದನು. ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಕೂಡ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.

ಆತನ ಕಿರುಕುಳ ಸಹಿಸಲಾರದೆ ಬುಧವಾರ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಟ್ಕಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...