ಉತ್ತರ ಕನ್ನಡ | ಏಕಕಾಲಕ್ಕೆ ಹೊನ್ನಾವರ-ಅಂಕೋಲಾ ಉಪನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Date:

ಹೊನ್ನಾವರ ಮತ್ತು ಅಂಕೋಲಾ ಉಪನೊಂದಾಣಿಧಿಕಾರಿಗಳ ಕಚೇರಿಯಲ್ಲಿ ಸ್ವತ್ತು ನೋಂದಣಿ, ಋಣಭಾರ ಪತ್ರ ಖರೀದಿ, ದಸ್ತಾವೇಜುಗಳ ದೃಢೀಕರಣ ಸೇರಿದಂತೆ ವಿವಿಧ ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರ ಹತ್ತಿರ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಹಾಗೂ ಖಾಸಗಿ ಮಧ್ಯವರ್ತಿಗಳ ಸಹಾಯದಿಂದ ಅಕ್ರಮವಾಗಿ ಹಣ ಸ್ವೀಕರಿಸುತ್ತಿರುವುದಾಗಿ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಕಡತ ಪರಿಶೀಲನೆ ನಡೆಸಿದರು.

ಸಾರ್ವಜನಿಕರಿಂದ ಬಂದಿರುವ ಈ ದೂರುಗಳಿಗೆ ಸಂಬಂಧಿಸಿದಂತೆ, ಯಾವುದೇ ಕ್ರಮವನ್ನು ಇಲಾಖೆಯ ಮೇಲ್ದರ್ಜೆಯ ಅಧಿಕಾರಿಗಳು ಕೈಗೊಂಡಿರದ ಕಾರಣ, ಕಾರವಾರ ಲೋಕಾಯುಕ್ತ ಕಚೇರಿಯ ಪೊಲೀಸ್ ಅಧೀಕ್ಷಕ ಕುಮಾರಚಂದ್ರರ ಮಾರ್ಗದರ್ಶನದಲ್ಲಿ ಡಿ.ವೈ.ಎಸ್.ಪಿ ಧನ್ಯಾ ಎನ್. ನಾಯಕ, ಪೊಲೀಸ್ ಇನ್ಸ್ಪೆಕ್ಟರ್ ರವಿ ಎನ್.ಎನ್, ವಿನಾಯಕ ಬಿಲ್ಲವ, ವಿಜಯ ಸದಾಶಿವ ಕಾಂಬ್ಳೆ ಹಾಗೂ ಸಿಬ್ಬಂದಿಗಳಿಂದಾದ ಎರಡು ತಂಡಗಳು ಸೆಪ್ಟೆಂಬರ್ 25 ರಂದು ಸಂಜೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಏಕಕಾಲದಲ್ಲಿ ಹೊನ್ನಾವರ ಮತ್ತು ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗಳ ಮೇಲೆ ದಾಳಿ ನಡೆಸಿದರು

ಈ ಸುದ್ದಿ ಓದಿದ್ದೀರಾ? ಭಟ್ಕಳ | ಮುರುಡೇಶ್ವರದಲ್ಲಿ ಯುವಕನ ಪ್ರಾಮಾಣಿಕತೆ; ಕಳೆದುಹೋದ ಬ್ಯಾಗ್‌ ಹಸ್ತಾಂತರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶೋಧನೆಯ ವೇಳೆ ಎರಡೂ ಕಚೇರಿಗಳ ಕರ್ತವ್ಯದಲ್ಲಿ ತೀವ್ರ ಅವ್ಯವಸ್ಥೆ, ನ್ಯೂನ್ಯತೆ ಹಾಗೂ ಕರ್ತವ್ಯಲೋಪ ಪತ್ತೆಯಾದ ಹಿನ್ನೆಲೆಯಲ್ಲಿ, ಈ ಕುರಿತು ಸಮಗ್ರ ವರದಿಯನ್ನು ತಯಾರಿಸಿ ಮುಂದಿನ ಕ್ರಮಕ್ಕಾಗಿ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತರಿಗೆ ಸಲ್ಲಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದಾಪುರ | ಇತಿಹಾಸದ ಹಾದಿಯಲ್ಲಿ ಹುಲ್ಕುತ್ರಿ ಶಾಲಾ ಮಕ್ಕಳು; ಜೈನ ನೆಲೆಗಳ ಅಧ್ಯಯನ

ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ ಹಿರಿಯ...

ಕಾರವಾರ | ‘ಆಪರೇಷನ್ ಕ್ಲೀನ್’ ದಾಳಿ: ಫುಟ್‌ಪಾತ್ ಅತಿಕ್ರಮಣಕಾರರಿಗೆ ಮಂಜಾನೆ ಶಾಕ್

ಕಾರವಾರ: ನಗರದ ಸೌಂದರ್ಯಕ್ಕೆ ಮುಳುವಾಗಿದ್ದ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ರಸ್ತೆ...

ಕಾರವಾರ | ನೌಕಾಬಲಕ್ಕೆ ಆನೆಬಲ: ಕಲ್ವರಿ ಸಬ್‌ಮೆರಿನ್ ನಿರ್ವಹಣಾ ಕೇಂದ್ರ ಲೋಕಾರ್ಪಣೆ

ಭಾರತೀಯ ನೌಕಾಪಡೆಯ ಇತಿಹಾಸದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ 'ಕದಂಬ' ನೌಕಾನೆಲೆಯು...

ಉತ್ತರ ಕನ್ನಡ | ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿ; ಅರ್ಜಿ ಆಹ್ವಾನ

ಉತ್ತರ ಕನ್ನಡ: ತೋಟಗಾರಿಕೆ ಇಲಾಖೆಯ ವತಿಯಿಂದ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ...