ಉತ್ತರ ಕನ್ನಡ | ಅವೈಜ್ಞಾನಿಕ ರಸ್ತೆ ಕಾಮಗಾರಿ; ಲಾರಿ ಹರಿದು ಶಿಕ್ಷಕ ಸಾವು

Date:

ಬೈಕ್‌ನಲ್ಲಿ ತೆರಳುತ್ತಿದ್ದ ಶಿಕ್ಷಕ ಕೆಳಗೆ ಬಿದ್ದಿದ್ದು, ಅವರ ಮೇಲೆ ಲಾರಿ ಹರಿದಿದೆ. ಪರಿಣಾಮ, ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ಕಾರವಾರದ ದೇವಳಮಕ್ಕಿ ಶಾಲೆಯ ಶಿಕ್ಷಕ ಉಮೇಶ್ ಗುನಗಿ ಮೃತ ದುರ್ದೈವಿ. ಉಮೇಶ್ ಅವರು ಶುಕ್ರವಾರ ಬೆಳಗ್ಗೆ ತಮ್ಮ ನಿವಾಸದಿಂದ ದೇವಳಮಕ್ಕಿ ಶಾಲೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ, ಹಬ್ಬುವಾಡದ ರೈಗಾ ರಸ್ತೆಯಲ್ಲಿ ಬೈಕ್‌ ನಿಯಂತ್ರಣ ತಪ್ಪಿದ್ದು, ಶಿಕ್ಷಕ ಕೆಳಗೆ ಬಿದ್ದಿದ್ದಾರೆ. ಅವರ ಮೇಲೆ ಲಾರಿ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೈಗಾ ರಸ್ತೆಯಲ್ಲಿ ಕೆಳೆದ ಎರಡು ವರ್ಷಗಳಿಂದ ರಸ್ತೆ ಕಾಮಗಾರಿ ನಡೆಯುತ್ತಿದೆ. ಆದರೂ, ಕಾಮಗಾರಿ ಪೂರ್ಣಗೊಂಡಿಲ್ಲ. ಅವೈಜ್ಞಾನಿಕವಾಗಿ ನಡೆಯುತ್ತಿರುವ ಕಾಮಗಾರಿಯಿಂದಲೇ ಶಿಕ್ಷಕ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆ ಮಧ್ಯೆ ಡಿವೈಡರ್‌ ಹಾಕದ ಕಾರಣ ಪದೇ-ಪದೇ ಅಪಘಾತಗಳು ಸಂಭವಿಸುತ್ತಿವೆ. ಆದರೂ, ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ಕಿಡಿಕಾರಿದ್ದಾರೆ.

ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಕಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...