ಉತ್ತರ ಕನ್ನಡ | ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 8 ಮಂದಿ ದಾರುಣ ಮೃತ್ಯು

Date:

ಲಾರಿ ಪಲ್ಟಿಯಾಗಿ 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಈದಿನ ಡಾಟ್ ಕಾಮ್‌ಗೆ ತಿಳಿಸಿದ್ದಾರೆ.

ಸವಣೂರು ತಾಲೂಕಿನ 20ಕ್ಕೂ ಹೆಚ್ಚು ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಪರಿಣಾಮ 8 ಮಂದಿ ವ್ಯಾಪಾರಿಗಳು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ. ಅಲ್ಲದೆ, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತಷ್ಟು ಜನರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಘಟನೆ ವೇಳೆ ಲಾರಿಯಲ್ಲಿ ಒಟ್ಟು 28 ಮಂದಿ ವ್ಯಾಪಾರಿಗಳು ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿ ವೇಳೆ ತಿಳಿದು ಬಂದಿದೆ. ಲಾರಿಯು ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈದಿನ ಡಾಟ್ ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಎಸ್‌ಪಿ ನಾರಾಯಣ್ ಹಾಗೂ ಹಾಗೂ ಇತರೆ ಪೊಲೀಸರು, ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಣಿವೆಗೆ ಬಿದ್ದಿರುವ ಲಾರಿಯನ್ನು ಮೇಲೆತ್ತಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಲಾಗುತ್ತಿದೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...