ಚಿಕ್ಕಬಳ್ಳಾಪುರ | ಮೂರನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ

Date:

ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯ ಹಾಗೂ ಸೇವಾ ಸೌಲಭ್ಯ ಒದಗಿಸುವುದು ಸೇರಿದಂತೆ ಒತ್ತಾಯಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ತಾಲೂಕು ಕಚೇರಿ ಎದುರು ಸೋಮವಾರದಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಸಂಘದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಹಲವು ಬಾರಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸೆಪ್ಟೆಂಬರ್‌ನಲ್ಲಿ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸರ್ಕಾರ ಭರವಸೆಯಂತೆ ಕೈಬಿಡಲಾಗಿತ್ತು. ಆದರೆ ಬೇಡಿಕೆ ಈಡೇರಿಸಲು ರಚಿಸಿರುವ ಸಮಿತಿಯು ನಿಷ್ಕ್ರಿಯೆಗೊಂಡಿರುವುದರಿಂದ ಸಮಸ್ಯೆಗಳು ಇದುವರೆಗೂ ಬಗೆಹರಿದಿಲ್ಲ ಎಂದು ಗ್ರಾಮ ಆಡಳಿತಾಧಿಕಾರಿಗಳು ಆರೋಪಿಸಿದ್ದಾರೆ.

ನಮ್ಮ ಸಮಸ್ಯೆಗಳ ಕುರಿತು ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲು ರಾಜ್ಯ ಸಂಘದ ನಿರ್ದೇಶನದಂತೆ ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ದು, ಕರ್ತವ್ಯದ ಸಮಯದಲ್ಲಿ ಸಮರ್ಪಕವಾಗಿ ಸೇವೆಗೆ ಅಗತ್ಯವಾಗಿರುವ ಸುಸಜ್ಜಿತ ಕಚೇರಿ, ಕುರ್ಚಿ, ಟೇಬಲ್, ಲ್ಯಾಪ್‌ಟಾಪ್, ಮೊಬೈಲ್, ಸಿಮ್, ಸ್ಕಾನರ್ ಸೌಲಭ್ಯ ಒದಗಿಸಬೇಕು. ಅಂತರ ಜಿಲ್ಲಾ ವರ್ಗಾವಣೆ ಕಲ್ಪಿಸಬೇಕೆಂಬ ಬೇಡಿಕೆ ಈಡೇರಿಸಬೇಕೆಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಅಧ್ವಾನದ ಆಗರ ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆ

ಧರಣಿ ವೇಳೆ ಕಂದಾಯ ಇಲಾಖೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್, ಸಂಘದ ತಾಲೂಕು ಅಧ್ಯಕ್ಷ ಪರಶುರಾಮ್, ಗೌರವಾಧ್ಯಕ್ಷ ಶಂಕರರೆಡ್ಡಿ, ಖಜಾಂಚಿ ಮಂಜುನಾಥ್, ಕಾರ್ಯದರ್ಶಿ ಪುನೀತ್, ದೀಪ, ವಿದ್ಯಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...