ಬೆಂಗಳೂರು | ʼವಚನ ದರ್ಶನʼ ಕೃತಿ ಮುಖಪುಟ ಸುಟ್ಟು ಆಕ್ರೋಶ; ಮುಟ್ಟುಗೋಲಿಗೆ ಆಗ್ರಹ

Date:

ಬಸವಾದಿ ಶರಣರ ಸಿದ್ಧಾಂತ ತಿರುಚಿ ಪ್ರಕಟಿಸಿದ ʼವಚನ ದರ್ಶನʼ ಪುಸ್ತಕವನ್ನು ರಾಜ್ಯ ಸರ್ಕಾರ ಕೂಡಲೇ ಮುಟ್ಟುಗೋಲು ಹಾಕಬೇಕೆಂದು ಆಗ್ರಹಿಸಿ ಬಸವಪರ ಸಂಘಟನೆಗಳ ಒಕ್ಕೂಟ ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು.

ಬಸವಾದಿ ಶರಣರ ವಚನಗಳನ್ನು ತಮ್ಮ ಮನಬಂದಂತೆ ಪ್ರಕಟಿಸಿ ಶರಣರ ಮೂಲ ತತ್ವ ಸಂದೇಶಗಳಿಗೆ ಮಸಿ ಬಳಿಯುವ ಹುನ್ನಾರ ನಡೆಯುತ್ತಿದೆ ಎಂದು ʼವಚನ ದರ್ಶನʼ ಪುಸ್ತಕ ಮುಖಪುಟಕ್ಕೆ ಬೆಂಕಿ ಹಚ್ಚಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2024 08 20 at 9.21.07 PM
ಪ್ರತಿಭಟನೆಯಲ್ಲಿ ವಿವಿಧ ಬಸವಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದರು.

ಪ್ರತಿಭಟನೆ ಉದ್ದೇಶಿಸಿ ಬಸವಯೋಗಿ ಪ್ರಭು ಸ್ವಾಮೀಜಿ ಮಾತನಾಡಿ, ʼಸಮಾಜದಲ್ಲಿ ನೆಲೆಯೂರಿದ್ದ ಮೌಢ್ಯ, ಕಂದಾಚಾರ ವ್ಯವಸ್ಥೆಯನ್ನು ಧಿಕ್ಕರಿಸಿ, ಬಸವಾದಿ ಶರಣರು ಸಮಸಮಾಜ ನಿರ್ಮಾಣಕ್ಕಾಗಿ ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ವೇದ, ಶಾಸ್ತ್ರ, ಆಗಮ, ಪುರಾಣ ಹಿನ್ನೆಲೆಯಲ್ಲಿ ವಚನ ಸಾಹಿತ್ಯ ಬಂದದ್ದಲ್ಲ. ಶರಣರ ಅನುಭಾವದಿಂದ ರಚನೆಯಾಗಿರುವಂತಹದ್ದು. ಆದರೆ ʼವಚನ ದರ್ಶನʼ ಪುಸ್ತಕ ಪ್ರಕಟಿಸುವ ಮೂಲಕ ಶರಣರ ವಚನಗಳ ಆಶಯಗಳನ್ನು ಅಡಗಿಸುವ ಷಡ್ಯಂತ್ರ ನಡೆಯುತ್ತಿದೆʼ ಎಂದು ಆಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯಪಾಲರ ನಡೆ ಖಂಡಿಸಿ ನಾಳೆ (ಆ.21) ಪಂಜಿನ ಮೆರವಣಿಗೆಗೆ ಶೋಷಿತ ಸಮುದಾಯಗಳ ಒಕ್ಕೂಟ ಕರೆ

ಪ್ರತಿಭಟನೆಯಲ್ಲಿ ವಿಶ್ವಗುರು ಬಸವಣ್ಣನವರ ಅನುಯಾಯಿಗಳ ಒಕ್ಕೂಟದ ಅಧ್ಯಕ್ಷ ಓಂಕಾರ್ ಚೊಂಡಿ, ಬಸವೇಶ್ವರ ಸ್ವಾಮಿಜಿ, ಸಾಹಿತಿ ಟಿ.ಆರ್.ಚಂದ್ರಶೇಖರ, ಕೆಚ್ಚೆದೆಯ ಕನ್ನಡಿಗರ ವೇದಿಕೆ ರಾಜ್ಯಾಧ್ಯಕ್ಷ ಶ್ರೀನಿವಾಸ್ ಭದ್ರಣ್ಣವರ, ಜಾಗತಿಕ ಲಿಂಗಾಯತ ಮಹಾಸಭಾ ಶಂಕ್ರಪ್ಪ ಬೇವೂರ,ವೀರಭದ್ರಪ್ಪ, ಸಂಜೀವ್ ಕಡಗದ, ಶಿವಕುಮಾರ ಸ್ವಾಮಿ, ಪ್ರಕಾಶ ಹೆಬ್ಬಳ್ಳಿ, ಎಂ.ಎಸ್.ಮಂಜುನಾಥ್, ಮಂಡ್ಯ ಲಿಂಗಾಯತ ಮಹಾಸಭಾ ಟ್ರಸ್ಟ್‌ನ ಎಂ.ಎಸ್. ಮಂಜುನಾಥ್, ಶಿವಕುಮಾರ ಸ್ವಾಮಿ, ನಾಗರಾಜ ಮೂರ್ತಿ, ಮಹಾಬಲೇಶ ಸೇರಿದಂತೆ ಜಾಗತಿಕ ಲಿಂಗಾಯತ ಮಹಾಸಭಾ, ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವದಳ ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...