ರಾಯಚೂರು | ವಾಲ್ಮೀಕಿ ಆಭಿವೃದ್ದಿ ನಿಗಮ ಅನುದಾನ ದುರ್ಬಳಕೆ ಪ್ರಕರಣ; ಸಿಬಿಐಗೆ ವಹಿಸಲು ಆಗ್ರಹ

Date:

ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ 187 ಕೋಟಿ ರೂ. ಅಕ್ರಮ ವ್ಯವಹಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಸಚಿವರು, ನಿಗಮದ ಅಧ್ಯಕ್ಷರೂ ಸೇರಿದಂತೆ ಅಧಿಕಾರಿಗಳ ವಿರುದ್ದ ಸಮಗ್ರ ತನಿಖೆ ನಡೆಸಬೇಕು ಎಮದು ಹೈದ್ರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಮುಖಂಡ ಎನ್ ರಘುವೀರ ನಾಯಕ ಆಗ್ರಹಿಸಿದರು.

ರಾಯಚೂರಿನಲ್ಲಿ ಪ್ರತಿಕಾಗೋಷ್ಟಿ ನಡೆಸಿ ಅವರು ಮಾತನಾಡಿದರು. “ವಾಲ್ಮೀಕಿ ನಿಗಮದಲ್ಲಿ ನಿರಂತರ ಅವ್ಯವಹಾರಗಳು ನಡೆಯುತ್ತಿದು ಅಪಖ್ಯಾತಿಗೆ ಗುರಿಯಾಗಿದೆ. ಪ್ರತಿ ಆರ್ಥಿಕ ವರ್ಷಕ್ಕೆ ಬಿಡುಗಡೆಯಾದ ಅನುದಾನ ಪೂರ್ಣ ಪ್ರಮಾಣದಲ್ಲಿ ಸದ್ಭಳಕೆ ಮಾಡಿಕೊಳ್ಳದೇ ನಿಗಮದ ಬ್ಯಾಂಕಿನಲ್ಲಿಟ್ಟು ಅವ್ಯವಹಾರ ಮಾಡಲಾಗಿದೆ” ಎಂದು ದೂರಿದ್ದಾರೆ.

“ಸರ್ಕಾರ ತಾನೇ ರಚಿಸಿರುವ ಎಸ್‌ಐಟಿಯಿಂದ ಸಚಿವರು, ಶಾಸಕರ ವಿರುದ್ದ ಕ್ರಮ ಕೈಗೊಳ್ಳಲು ಆಗುವದಿಲ್ಲ. ಇಷ್ಡೊಂದು ದೊಡ್ಡ ಮಟ್ಟ ಅನುದಾನ ಬೇರೆ ಖಾತೆಗಳಿಗೆ ವರ್ಗಾಯಿಸಿರುವ ಕುರಿತು ಮುಖ್ಯಮಂತ್ರಿಗಳು, ನಿಗಮದ ಅಧ್ಯಕ್ಷರಿಗೆ ಗೊತ್ತಿಲ್ಲದೇ ನಡೆಯಲು ಸಾಧ್ಯವಿಲ್ಲ. ಎಸ್‌ಟಿ ಸಮುದಾಯ ಸಚಿವರು, ಶಾಸಕರುಗಳೇ ಅಕ್ರಮದ ಆರೋಪ ಎದುರಿಸುತ್ತಿರುವದು ನೋವಿನ ಸಂಗತಿ. ಸಮೂದಾಯ ಅಭಿವೃದ್ದಿಗೆ ಬದ್ದತೆ ತೋರಬೇಕಿದ್ದ ಸಮೂದಾಯ ಶಾಸಕರುಗಳೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಅದು ಸಮುದಾಯಕ್ಕೆ ಮಾಡಿದ ಅಪಮಾನ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಬಿಐ ತನಿಖೆಗೆ ಒತ್ತಾಯಿಸಿ ರಾಜ್ಯ ಮಟ್ಟದಲ್ಲಿ ಹೋರಾಟ ರೂಪಿಸುವ ಕುರಿತಂತೆ ಸಮೂದಾಯ ಸ್ವಾಮೀಜಿಗಳು ಸೇರಿದಂತೆ ಮುಖಂಡರೊಂದಿಗೆ ಚರ್ಚಿಸಲಾಗುತ್ತದೆ. ನಂತರ ಹೋರಾಟ ರೂಪಿಸಲಾಗುತ್ತದೆ. ಸರ್ಕಾರವೇ ಸಿಬಿಐ ತನಿಖೆಗೆ ವಹಿಸುವ ಮೂಲಕ ಸಮೂದಾಯ ಅಭಿವೃದ್ದಿಗೆ ಬಳಕೆಯಾಗಬೇಕಿದ್ದ ಹಣವನ್ನು ದುರ್ಬಳಕೆ ಮಾಡಲು ಕಾರಣವಾಗಿರುವ ಜನಪ್ರತಿನಿಧಿಗಳು, ಆಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಮೇಶ ನಾಯಕ, ರಾಮಕೃಷ್ಣ ನಾಯಕ ಉಪಸ್ಥಿತರಿದ್ದರು.

ವರದಿ : ಹಫಿಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...