ಜೂನ್ 25ರಂದು ವಾಲ್ಮೀಕಿ ಸಮುದಾಯದ ಶಾಸಕರು-ಸಚಿವರಿಗೆ ಅಭಿನಂದನಾ ಸಮಾರಂಭ

Date:

ನೂತನ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರಿಗೆ ತುಮಕೂರು ಜಿಲ್ಲಾ ವಾಲ್ಮೀಕಿ ಸಮಾಜದ ವತಿಯಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿಯ ಪ್ರವಾಸಿ ಮಂದಿರದಲ್ಲಿ ಅಭಿನಂದನಾ ಸಮಾರಂಭದ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು, “ತುಮಕೂರಿನ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಜೂನ್ 25ರ ಭಾನುವಾರ ಬೃಹತ್ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ವಾಲ್ಮೀಕಿ ಪ್ರಸನ್ನಾಂದ ಪುರಿ ಸ್ವಾಮೀಜಿ, ಶಿಡ್ಲೇಕೋಣದ ಶ್ರೀ ಸಂಜಯ್ ಕುಮಾರ ಸ್ವಾಮೀಜಿ ಅವರು ಸಮಾರಂಭದ ಸಾನಿಧ್ಯವಹಿಸಲಿದ್ದಾರೆ” ಎಂದು ಅವರು ಹೇಳಿದರು.

“ಕಾರ್ಯಕ್ರಮದಲ್ಲಿ ರಾಜ್ಯದ ವಾಲ್ಮೀಕಿ ಸಮುದಾಯದ ನೂತನ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರನ್ನು ಅಭಿನಂದಿಸಲಾಗುವುದು. ಜಿಲ್ಲೆಯ ಪ್ರತಿಯೊಂದು ತಾಲೂಕು ಕೇಂದ್ರಗಳಲ್ಲಿರುವ ಮುಖಂಡರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ತಾಲೂಕು ಅಧ್ಯಕ್ಷ ರಂಗಶ್ಯಾಮಣ್ಣ, ಮುಖಂಡರಾದ ಗುಬ್ಬಿ ನಾಗರಾಜು, ಆಂಜನೇಯಲು, ಹನುಮಂತರಾಯಪ್ಪ, ಜಿ.ಎಸ್ ಜಗದೀಶ್ ಕುಮಾರ್, ಶಂಕರನಾರಾಯಣಬಾಬು, ಬೆಸ್ಕಾಂ ನಿವೃತ್ತ ಅಧಿಕಾರಿ ಮುದ್ದುಕೃಷ್ಣ, ದೊಡ್ಡೇರಿ ಶಿವಣ್ಣ, ರಂಜಿತ್, ನಾರಾಯಣಪ್ಪ, ಚಂದ್ರಮ್ಮ ಹಾಗೂ ಮತ್ತಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...