ರಾಯಚೂರು | ವಾಲ್ಮೀಕಿ ವಿಶ್ವವಿದ್ಯಾಲಯ : ಐದು ತಿಂಗಳ ಕಳೆದರೂ ಪ್ರಕಟವಾಗದ ಪದವಿ ಫಲಿತಾಂಶ!

Date:

ರಾಯಚೂರು ನಗರದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ವಿದ್ಯಾರ್ಥಿಗಳ ಪರೀಕ್ಷೆ ಮುಗಿದು 160 ದಿನ ಕಳೆದರೂ ಫಲಿತಾಂಶ ಪ್ರಕಟವಾಗಿಲ್ಲ. ಫಲಿತಾಂಶದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು ಪರದಾಟ ನಡೆಸುವಂತಾಗಿದೆ.

ಪದವಿಯ ಪ್ರಥಮ ಸೆಮಿಸ್ಟರ್ ಮತ್ತು ನಾಲ್ಕನೇ ಸೆಮಿಸ್ಟರ್‌ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಐದು ತಿಂಗಳ ಗತಿಸಿದರೂ ಫಲಿತಾಂಶ ಪ್ರಕಟವಾಗಿಲ್ಲ ಎಂದು ಗೋಳು ತೋಡಿಕೊಳ್ಳುತ್ತಿದ್ದಾರೆ. ಅಂತಿಮ ವರ್ಷದ ವಿದ್ಯಾರ್ಥಿಗಳು ಮುಂದಿನ ವ್ಯಾಸಂಗಕ್ಕೆ ತೆರಳಲು ತೊಡಕು ಉಂಟಾಗಿದ್ದು, ವಿಶ್ವವಿದ್ಯಾಲಯ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಆದರೆ, ಯಾರೊಬ್ಬರೂ ವಿದ್ಯಾರ್ಥಿಗಳ ಗೋಳು ಕೇಳೋರಿಲ್ಲದಂತಾಗಿದೆ.

ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗುತ್ತಿರುವ ಈ ವಿಳಂಬ ನೀತಿಯನ್ನು ವಿದ್ಯಾರ್ಥಿಗಳು ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಫಲಿತಾಂಶಕ್ಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ವಿವಿ ನಿರಾಸೆ ಮೂಡಿಸಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚಲ್ಲಾಟವಾಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಫಲಿತಾಂಶ ವಿಳಂಬ ಕುರಿತು ವಿಶ್ವವಿದ್ಯಾಲಯದಿಂದ ಇಲ್ಲಿಯವರೆಗೆ ಯಾವುದೇ ಸ್ಪಷ್ಟನೆ ಬಂದಿಲ್ಲ. ಇದು ವಿವಿ ವ್ಯಾಪ್ತಿಯಲ್ಲಿನ ಕಾಲೇಜು ಆಡಳಿತ ಮಂಡಳಿಯವರ ಅಸಮಾಧಾನಕ್ಕೂ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಪದವಿ ವಿದ್ಯಾರ್ಥಿ ಪ್ರಶಾಂತ ಮಾತನಾಡಿ, ʼವಿದ್ಯಾರ್ಥಿಗಳು ಪ್ರಥಮ ವರ್ಷ ಮುಗಿಸಿ ದ್ವಿತೀಯ ವರ್ಷದ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದಾರೆ. ಆದರೂ ಪ್ರಥಮ ವರ್ಷದ ಮೊದಲನೇ ಸೆಮಿಸ್ಟರ್ ಫಲಿತಾಂಶವೇ ಬಂದಿಲ್ಲ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ದೊಡ್ಡ ಪರಿಣಾಮ ಬೀರುತ್ತಿದೆ. ಕೆಲ ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನಕ್ಕಾಗಿ ಅರ್ಜಿ ಹಾಕಿ ಫಲಿತಾಂಶ ಬರದಿರುವುರಿಂದ ಆತಂಕಕ್ಕೆ ಒಳಗಾಗಿದ್ದಾರೆ. ಕೂಡಲೇ ವಿವಿ ಆಡಳಿತ ಮಂಡಳಿ ಮಕ್ಕಳ ಶೈಕ್ಷಣಿಕ ಹಿತದೃಷ್ಠಿಯಿಂದ ಶೀಘ್ರದಲ್ಲಿ ಫಲಿತಾಂಶ ಪ್ರಕಟಿಸಲು ಮುಂದಾಗಬೇಕುʼ ಎಂದು ಹೇಳಿದರು.

ಮೌಲ್ಯಮಾಪನದ ಪ್ರಕ್ರಿಯೆ ವಿಳಂಬವಾಗುತ್ತಿರುವುದಕ್ಕೆ ವಿಶ್ವವಿದ್ಯಾಲಯದಿಂದ ನಿಖರವಾದ ಕಾರಣ ತಿಳಿದು ಬರುತ್ತಿಲ್ಲ. ಫಲಿತಾಂಶ ವಿಳಂಬವಾಗದಂತೆ ಕುಲಸಚಿವರಿಗೆ ಮನವಿ ಸಲ್ಲಿಸಲಾಗಿದ್ದು, ಹಲವಾರು ಬಾರಿ ಗಮನಕ್ಕೆ ತಂದರೂ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಸಿಕ್ಕಿಲ್ಲ. ಅಕಾಡೆಮಿಕ್ ಕ್ಯಾಲೆಂಡರ್‌ ಪ್ರಕಾರ ಫಲಿತಾಂಶ ಬಹಳ ಹಿಂದೆಯೇ ಪ್ರಕಟವಾಗಬೇಕಿತ್ತು. ಇದರ ಪರಿಣಾಮವಾಗಿ ಪಿಜಿ ಕೋರ್ಸ್‌ಗಳ ಪ್ರವೇಶದ ಅವಧಿಯ ಮುಕ್ತಾಯ ಹಂತದಲ್ಲಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮಿಷ್ಟದ ಕೋರ್ಸ್‌ ಸಿಗದಕ್ಕೆ ವಂಚಿತಗೊಳ್ಳುವ ಪರಿಸ್ಥಿತಿ ಇದೆʼ ಎಂದು ಹೇಳಿದರು.

ಪರೀಕ್ಷೆ ಮುಗಿದ ಎರಡು ತಿಂಗಳಲ್ಲಿ ಫಲಿತಾಂಶ ಪ್ರಕಟಿಸಬೇಕೆಂಬ ನಿಯಮ ಇದೆ. 180 ದಿನದೊಳಗೆ ಅಂಕಪಟ್ಟಿ ಪ್ರಕಟಿಸಿ ನೀಡಬೇಕು. ಆದರೆ ಇಲ್ಲಿ ಯಾವುದೇ ನಿಯಮ ಪಾಲನೆ ಆಗುತ್ತಿಲ್ಲ. ಸಕಾಲಕ್ಕೆ ಫಲಿತಾಂಶ ಸಿಗದೇ ಇರುವ ಕಾರಣಕ್ಕೆ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಕೂಡಲೇ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ (ರಿಪೀಟರ್ಸ್ ಗೆ ಹೆಚ್ಚಿನ ಆದ್ಯತೆ ನೀಡಿ) ಫಲಿತಾಂಶ ಪ್ರಕಟಿಸದಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಳು ವಿಶ್ವವಿದ್ಯಾಲಯವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಜೀಶಾನ್ ಅಖಿಲ ಮಾತನಾಡಿ, ʼವಿಶ್ವವಿದ್ಯಾಲಯಗಳಲ್ಲಿ ಪೂರ್ಣಕಾಲಿಕ ಉದ್ಯೋಗಿಗಳ ನೇಮಕಾತಿ ಇಲ್ಲದಿರುವುದರಿಂದ ಆಡಳಿತಾತ್ಮಕ ಹಾಗೂ ಅಕಾಡೆಮಿಕ್ ಕಾರ್ಯಾಚರಣೆಗಳಲ್ಲಿ ತೊಂದರೆ ಉಂಟಾಗುತ್ತಿದೆ. ಸಿಬ್ಬಂದಿ ಕೊರತೆಯಿಂದ ಸಕಾಲಕ್ಕೆ ಫಲಿತಾಂಶ ನೀಡಲು ಆಗುತ್ತಿಲ್ಲ. ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಯಿಂದ ಗುಣಮಟ್ಟದ ಕೆಲಸ ಆಗದೇ ಇರುವುದರಿಂದ ಈ ಸಮಸ್ಯೆ ಎದುರಾಗಿದೆ. ಇದರ ಬಗ್ಗೆ ಕುಲಪತಿ ಅವರೊಂದಿಗೆ ಚರ್ಚಿಸಲಾಗಿದೆ. ವಾರದೊಳಗೆ ಫಲಿತಾಂಶ ಪ್ರಕಟವಾಗುತ್ತದೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಡಿಜಿಟಲ್ ಗ್ರಂಥಾಲಯದಲ್ಲಿ ಓದಿ ವಿದೇಶದಲ್ಲಿ ನೌಕರಿ : ಹಳ್ಳಿ ಹುಡುಗನ ಸಾಧನೆಗೆ ಎಲ್ಲರೂ ದಿಲ್‌ ಖುಷ್!

ಈ ಬಗ್ಗೆ ವಿಶ್ವವಿದ್ಯಾಲಯ ಕುಲಪತಿ ದಮ್ಮ ಪ್ರಕಾಶ ಮಾತನಾಡಿ, ʼಎರಡು ಮೂರು ದಿನಗಳಲ್ಲಿ ಪದವಿ ಫಲಿತಾಂಶ ಪ್ರಕಟ ಮಾಡಲಾಗುವುದುʼ ಎಂದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...