ಯಾದಗಿರಿ | ಸಂವಿಧಾನದ ಮೌಲ್ಯಗಳು ಬದುಕಿಗೆ ದಾರಿದೀಪ : ಜಿಲ್ಲಾಧಿಕಾರಿ ಡಾ.ಸುಶೀಲ ಬಿ.

Date:

ಸಂವಿಧಾನದಲ್ಲಿನ ಮೌಲ್ಯಗಳು  ಜೀವನದ ಮೌಲ್ಯಗಳಾಗಿ ಅಂತರ್ಗತವಾದಾಗ ಮಾತ್ರ ಸಂವಿಧಾನ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಅಭಿಪ್ರಾಯಪಟ್ಟರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ  ದಲಿತ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ 74ನೇ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮೂರ್ತಿಗೆ ಮಾಲಾರ್ಪಣೆ ಸಲ್ಲಿಸಿ ಭಾರತದ ಸಂವಿಧಾನ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.
“ಸಂವಿಧಾನ ಓದುವುದರ ಜೊತೆಗೆ ಅದರಲ್ಲಿನ ಕರ್ತವ್ಯ, ಹಕ್ಕು ಹಾಗೂ ಮೌಲ್ಯಗಳನ್ನು ನಿಷ್ಠೆ,  ಪ್ರಾಮಾಣಿಕತೆಯಿಂದ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರರು ಕೊಟ್ಟ ಸಂವಿಧಾನವು ಅತ್ಯಂತ ಶ್ರೇಷ್ಠ ಸಂವಿಧಾನವಾಗಿದ್ದು, ನಮ್ಮೆಲ್ಲರಿಗೂ ದಾರಿ ದೀಪವಾಗಿದೆ. ಸರ್ವರೂ ಸಂವಿಧಾನದ ಹಾದಿಯಲ್ಲಿ ಸಾಗೋಣ” ಎಂದರು.
ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಡಿವೈಎಸ್ಪಿ ಬಸವೇಶ್ವರ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ನಗರಸಭೆ ಪೌರಾಯುಕ್ತ ಲಕ್ಷ್ಮೀಕಾಂತ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸರೋಜಾ ಹಾಗೂ ಸಮಾಜದ ಮುಖಂಡರಾದ ಮುಖಂಡರಾದ ಮರೆಪ್ಪ ಚಟ್ಟೇರಕರ್, ನಿಂಗಪ್ಪ ಕೊಲ್ಲೂರಕರ್, ನಗರ ಸಭೆ ಸದಸ್ಯೆ ಬಸಮ್ಮ ಮಹೇಶ್ ಕುರಕುಂಬಳ, ಮಂಜು ದಾಸನಕೇರಿ, ಸಾಮದೇವ ದಾಸನಕೇರಿ, ಹಣಮಂತ ಲಿಂಗೇರಿ, ಮಲ್ಲಣ್ಣ ದಾಸನಕೇರಿ, ಡಾ. ಭಗವಂತ ಅನ್ವಾರ್, ಮಲ್ಲಿಕಾರ್ಜುನ ಕುರಕುಂಬಳ, ಗೋಪಾಲ್ ತೆಳಗೇರಿ, ಶರಣು ನಾಟೇಕಾರ, ಭೀಮಶಪ್ಪ ಕಾಗಿ, ಮಲ್ಲಿಕಾರ್ಜುನ ಈಟೇ, ಸೈದಪ್ಪ ಸುಂಗಲಕರ್, ಪರಶುರಾಮ ಒಡೆಯರ್, ಮಲ್ಲಿನಾಥ ಸುಂಗಲಕರ್ ಸೇರಿದಂತೆ ಸಮಾಜದ ಹಲವಾರು ಮುಖಂಡರು ಉಪಸ್ಥಿತರಿದ್ದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...