ಬೆಂಗಳೂರು–ಧಾರವಾಡ ನಡುವೆ ‘ವಂದೇ ಭಾರತ್‌’ ಎಕ್ಸ್‌ಪ್ರೆಸ್‌ ರೈಲು ಪ್ರಾಯೋಗಿಕ ಸಂಚಾರ

Date:

ಬೆಂಗಳೂರು–ಧಾರವಾಡ ನಡುವೆ ‘ವಂದೇ ಭಾರತ್‌’ ಇಂಟರ್‌ಸಿಟಿ ಸೆಮಿ ಹೈಸ್ಪೀಡ್‌ ರೈಲು ಸೋಮವಾರ ಬೆಳಿಗ್ಗೆ ಪ್ರಾಯೋಗಿಕ ಸಂಚಾರ ಆರಂಭಿಸಿದೆ.

“ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟಿದೆ. 9.58ಕ್ಕೆ ದಾವಣಗೆರೆ, 12.10ಕ್ಕೆ ಹುಬ್ಬಳ್ಳಿಗೆ ಬಂದು 12.40ಕ್ಕೆ ಧಾರವಾಡಕ್ಕೆ ತಲುಪಲಿದೆ. ಮಧ್ಯಾಹ್ನ 1.15ಕ್ಕೆ ಧಾರವಾಡದಿಂದ ಹೊರಡಲಿದೆ. 1.35ಕ್ಕೆ ಹುಬ್ಬಳ್ಳಿಗೆ, 3.48ಕ್ಕೆ ದಾವಣಗೆರೆಗೆ, ರಾತ್ರಿ 7.45ಕ್ಕೆ ಯಶವಂತಪುರಕ್ಕೆ ಬಂದು ರಾತ್ರಿ 8.10ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ತಲುಪಲಿದೆ” ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಜೂನ್‌ 26ರಂದು ರೈಲು ಸಂಚಾರಕ್ಕೆ ಚಾಲನೆ ನೀಡಿದ ಬಳಿಕ ಅಧಿಕೃತವಾಗಿ ಓಡಾಟ ಆರಂಭಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೆರಂಬೂರಿನಲ್ಲಿರುವ ಚೆನ್ನೈ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಈ ರೈಲು ನಿರ್ಮಾಣಗೊಂಡಿದೆ. ಬೆಂಗಳೂರು–ಧಾರವಾಡದ ಅಂತರ 487 ಕಿಲೋಮೀಟರ್‌ ಇದ್ದು, ಸುಮಾರು ಏಳು ಗಂಟೆಗಳಲ್ಲಿ ಕ್ರಮಿಸಲಿದೆ. ಗಂಟೆಗೆ 160 ಕಿಲೋ ಮೀಟರ್‌ ವೇಗದ ಸಾಮರ್ಥ್ಯ ಇದ್ದರೂ ಈ ಮಾರ್ಗದಲ್ಲಿ ಗಂಟೆಗೆ 120 ಕಿಲೋ ಮೀಟರ್‌ ವೇಗದಲ್ಲಿ ಚಲಿಸಲಿದೆ. ತಿರುವುಗಳು ಹೆಚ್ಚಿರುವುದು ವೇಗ ಕಡಿಮೆಯಾಗಲು ಕಾರಣ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ ಎನ್ನುತ್ತಿದ್ದಂತೆಯೇ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ವಿಮಾನ ನಿಲ್ದಾಣದ ಕಂಬಕ್ಕೆ ಶಟಲ್‌ ಬಸ್‌ ಡಿಕ್ಕಿ; ಹತ್ತು ಮಂದಿಗೆ ಗಾಯ

ರಾಜ್ಯದಲ್ಲಿ ‌ವಿಧಾನಸಭಾ ಚುನವಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ರೋಡ್‌ ಶೋ ಮಾಡಿದರೂ ಕೂಡ ಬಿಜೆಪಿ ಪರಾಜಯ ಕಂಡಿದೆ. ಇದೀಗ ನೂತನ ಕಾಂಗ್ರೆಸ್‌ ಸರ್ಕಾರ ರಚನೆಯಾಗಿರುವ ಕಾರಣ ಪ್ರಧಾನಿಯವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...