ಬೆಂಗಳೂರು: ಶಿಕ್ಷಣ ಇಲಾಖೆಯ ವತಿಯಿಂದ ನಡೆದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಕೆ.ಪಿ.ಎಸ್. ಕೊಕ್ಕರ್ಣೆ (ಪ್ರೌಢ ಶಾಲಾ ವಿಭಾಗ) ತಂಡ ಗಮನಾರ್ಹ ಸಾಧನೆ ಮಾಡಿದೆ. ವಿದ್ಯಾರ್ಥಿಗಳು ಅಭಿನಯಿಸಿದ “ಕ್ಯೂರಿಯಸ್” ನಾಟಕ ದ್ವಿತೀಯ ಅತ್ಯುತ್ತಮ ನಾಟಕ ಪ್ರಶಸ್ತಿ ಪಡೆದು, ಕೋಲ್ಕತ್ತದಲ್ಲಿ ನಡೆಯಲಿರುವ ಅಖಿಲ ಭಾರತ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಗೆ ಆಯ್ಕೆಯಾಗಿದೆ.
ಈ ನಾಟಕದಲ್ಲಿ ಶ್ರೇಷ್ಠ ನಟಿ ಪ್ರಶಸ್ತಿಯನ್ನು 8ನೇ ತರಗತಿಯ ನವಮಿ ಎಂ. ಶೆಟ್ಟಿ ತಮ್ಮ ಅದ್ಭುತ ಅಭಿನಯಕ್ಕಾಗಿ ಗಳಿಸಿದ್ದಾರೆ. ನಾಟಕವನ್ನು ವರದರಾಜ್ ಬಿರ್ತಿ ರಚಿಸಿದ್ದು, ರೋಹಿತ್ ಎಸ್. ಬೈಕಾಡಿ ನಿರ್ದೇಶಿಸಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಶಾಲೆಯ ಹೆಗ್ಗಳಿಕೆಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಎಸ್‌ಡಿಎಂಸಿ, ಶಿಕ್ಷಕರು ಹಾಗೂ ಊರಿನ ಜನರು ಅಭಿನಂದಿಸಿದ್ದಾರೆ.





