ಭದ್ರಾವತಿ | ಜನಪ್ರಿಯ ಸಂಸ್ಕೃತಿಯ ವಿವಿಧ ಪ್ರಕಾರಗಳ ಅಧ್ಯಯನ ಈ ಹೊತ್ತಿನ ತುರ್ತು

Date:

ಡಾ.ಜಿ.ಪ್ರಶಾಂತ್ ನಾಯಕ್ ವಿರಚಿತ ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಸಂಸ್ಕೃತಿ ಚಿಂತಕ ಬಸವರಾಜ ಕಲ್ಗುಡಿ ಅಭಿಮತ

ಕನ್ನಡದ ನೆಲೆಗಟ್ಟಿನಲ್ಲಿ ಸಿನಿಮಾ, ಸಮೂಹ ಮಾಧ್ಯಮ, ಸಾಮಾಜಿಕ ಮಾಧ್ಯಮಗಳಂತಹ ಜನಪ್ರಿಯ ಸಂಸ್ಕೃತಿಯ ಆಧುನಿಕ ಪ್ರಕಾರಗಳ ಬಗ್ಗೆ ಗಂಭೀರವಾದ ಅಧ್ಯಯನ ಈ ಹೊತ್ತಿನ ತುರ್ತು ಎಂದು ಸಂಸ್ಕೃತಿ ಚಿಂತಕ ಡಾ.ಬಸವರಾಜ ಕಲ್ಗುಡಿ ಅಭಿಪ್ರಾಯಪಟ್ಟರು.

ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಡಾ.ಜಿ.ಪ್ರಶಾಂತ್ ನಾಯಕ್ ಅವರ ‘ಕನ್ನಡ ಸಿನಿಮಾ ಹಾಡುಗಳು: ಭಾವಾನುಬಂಧ’ ಮತ್ತು ‘ಬುದ್ಧ: ಬೆಳಕು ಮತ್ತು ಎಚ್ಚರ’ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಜನಪ್ರಿಯ ಸಮೂಹ ಮಾಧ್ಯಮಗಳ ಸಂಕೀರ್ಣ ಸಂರಚನೆಯ ಸ್ವರೂಪವನ್ನು ಲೇಖಕರು ಸಶಕ್ತವಾಗಿ ತಮ್ಮ ಕೃತಿಗಳಲ್ಲಿ ಸೆರೆ ಹಿಡಿದಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ, ಜನಮಾನಸದಲ್ಲಿ ಹಾಸುಹೊಕ್ಕಾಗಿರುವ ಪೌರಾಣಿಕ ಕಥಾನಕಗಳು, ಕನ್ನಡ ಸೇರಿದಂತೆ ಭಾರತದ ವಿವಿಧ ಭಾಷೆಗಳ ಚಲನಚಿತ್ರಗಳು ಅದ್ಭುತವಾಗಿ ತೆರೆಯ ಮೇಲೆ ಅನಾವರಣಗೊಳಿಸಿದ್ದು, ಇವು ನಮ್ಮ ಒಟ್ಟಾರೆ ಸಂಸ್ಕೃತಿಯ ಅವಿಭಾಜ್ಯ ಅಂಗ ಎಂದು ಪ್ರತಿಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಎ.ಎಸ್ ಪ್ರಭಾಕರ್ ಮಾತನಾಡಿ, ಬುದ್ಧ ಎಂದರೆ, ಬೆಳಕು ಮತ್ತು ಎಚ್ಚರ. ಬೆಳಕೆನ್ನುವುದು ಕತ್ತಲೆಯ ವಿರುದ್ಧದ ಪದವಲ್ಲ. ಅದು ಒಂದರ ಒಳಗೊಂದು ಬೆಳೆದು ಬಂದ ಸಂಸ್ಕೃತಿ. ಎಚ್ಚರ ಎಂದರೆ, ನಿದ್ರೆಯಿಂದ ಏಳುವುದಲ್ಲಾ ಸದಾ ಜಾಗೃತರಾಗಿರುವುದು ಎಂದು ಹೇಳಿದರು.

ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಮಾತನಾಡಿ, ಸಮಕಾಲೀನ ಸಂದರ್ಭದಲ್ಲಿ ಬುದ್ಧನ ಮೂರ್ತಿಗಳು ಮಾರಾಟದ ಸರಕುಗಳಾಗಿವೆ. ಅವರ ತತ್ವಗಳ ಹಾದಿಯಲ್ಲಿ ಸಾಗುವ ಬದಲು ಪಾರ್ಕ್, ಮನೆಗಳಲ್ಲಿ ಬುದ್ಧನ ಮೂರ್ತಿಯನ್ನು ಅಲಂಕಾರಿಕ ವಸ್ತುಗಳನ್ನಾಗಿ ಬಳಸುತ್ತಿರುವುದು ನಮ್ಮ ದುರದೃಷ್ಟ. ಅಷ್ಟೇ ಅಲ್ಲದೆ ಹಿಂದುತ್ವದ ಹೆಸರಿನಲ್ಲಿ ದ್ವೇಷ ಭಾಷೆಯನ್ನು ಬಳಸಿ ಭಾರತೀಯ ಸಂಸ್ಕೃತಿಗೆ ಅನ್ಯಾಯವೆಸಗಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಪಾಠ ಕಲಿಯದ ‘ರೈಲ್ವೆ ಇಲಾಖೆ’

ಕುಲಸಚಿವ ಎ.ಎಲ್.ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಎಂ.ಗೋಪಿನಾಥ್, ಕನ್ನಡ ಭಾರತಿ ನಿರ್ದೇಶಕ ಪ್ರೊ.ಶಿವಾನಂದ ಕೆಳಗಿನಮನಿ, ಡಾ.ನೆಲ್ಲಿಕಟ್ಟೆ ಎಸ್. ಸಿದ್ದೇಶ್, ಸುವ್ವಿ ಪ್ರಕಾಶನದ ಸುನೀಲ್‌ ಕುಮಾರ್ ಬಿ.ಎನ್, ವಿವಿಧ ವಿಭಾಗಗಳ ಅಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...