ಡಿ.20ರಂದು ವಾರ್ತಾಭಾರತಿ ದಿನಪತ್ರಿಕೆಯ ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ: ಹಲವು ಗಣ್ಯರು ಭಾಗಿ

Date:

‘ಜನದಿನಿಯ ಸಾರಥಿ’ ಎಂಬ ಧ್ಯೇಯವಾಕ್ಯದೊಂದಿಗೆ ಕಳೆದ 23 ವರ್ಷಗಳಿಂದ ಕರ್ನಾಟಕದಲ್ಲಿ ಪ್ರಕಟವಾಗುತ್ತಿರುವ ವಾರ್ತಾಭಾರತಿ ದಿನಪತ್ರಿಕೆಯ ಕಲ್ಯಾಣ ಕರ್ನಾಟಕ ಆವೃತ್ತಿಗೆ ನಾಳೆ(ಡಿ.20) ಚಾಲನೆ ದೊರೆಯಲಿದೆ‌.

ಕಲಬುರಗಿಯ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಡಿ.20ರ ಬೆಳಗ್ಗೆ 10.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಆವೃತ್ತಿಯು ಬಿಡುಗಡೆಯಾಗಲಿದೆ.

ಇದೇ ಸಂದರ್ಭದಲ್ಲಿ 23ನೇ ವಾರ್ಷಿಕ ವಿಶೇಷ ಸಂಚಿಕೆ ಹಾಗೂ ಆಯ್ದ ಸಂಪಾದಕೀಯಗಳ ಸಂಗ್ರಹ ಕೃತಿ ಕೂಡ ಬಿಡುಗಡೆಗೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಮಾರಂಭದಲ್ಲಿ ವಿಧಾನ ಸಭೆಯ ಅಧ್ಯಕ್ಷ ಸ್ಪೀಕರ್ ಯು.ಟಿ.‌ಖಾದರ್, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ, ಅರಣ್ಯ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ, ಸಾಮಾಜಿಕ ಚಿಂತಕ, ಬಹುಭಾಷಾ ನಟ ಪ್ರಕಾಶ್ ರಾಜ್, ದಿ ವೈರ್‌ನ ಸಂಪಾದಕರಾದ ಸಿದ್ದಾರ್ಥ ವರದರಾಜನ್, ಸಚಿವರಾದ ಎನ್.ಎಸ್.‌ಬೋಸರಾಜು, ರಹೀಮ್ ಖಾನ್, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕರಾದ ಬಿ.ಆರ್. ಪಾಟೀಲ್, ಸಂಸದ ಬಿ.‌ಕುಮಾರ್ ನಾಯಕ್, ಕರ್ನಾಟಕ ವಕ್ಫ್ ಮಂಡಳಿಯ ಅಧ್ಯಕ್ಷರಾದ ಹಝ್ರತ್ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ, ಶಾಸಕರಾದ ಅಜಯ್ ಸಿಂಗ್, ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ್, ಮಾಜಿ ಸಚಿವರಾದ ಎಸ್ ಕೆ ಕಾಂತ, ಕೋರಣೇಶ್ವರ ಸ್ವಾಮೀಜಿ, ರಾಬರ್ಟ್ ಮಿರಾಂಡ, ಭಂತೆ ವರಜ್ಯೋತಿ, ಸಾಮಾಜಿಕ ಹೋರಾಟಗಾರ್ತಿ ಕೆ.ನೀಲಾ, ಚಾಮರಸ ಮಾಲಿ ಪಾಟೀಲ್, ಡಿ‌ .ಜಿ. ಸಾಗರ್, ಅಂಬಣ್ಣ ಅರೋಲಿಕರ್, ಉದ್ಯಮಿಗಳಾದ ನಾಸಿರ್ ಸೈಯ್ಯದ್, ಝಕರಿಯಾ ಜೋಕಟ್ಟೆ, ಸೈಯದ್ ಮುಹಮ್ಮದ್ ಬ್ಯಾರಿ ಹಾಗೂ ಎಚ್ ಎಂ ಅಫ್ರೋಝ್ ಅಸ್ಸಾದಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಲಬುರಗಿ ಕಚೇರಿ ಉದ್ಘಾಟನೆ

ವಾರ್ತಾಭಾರತಿ’ ಕನ್ನಡ ದೈನಿಕದ ಕಲ್ಯಾಣ ಕರ್ನಾಟಕ ಆವೃತ್ತಿಯು ಡಿ.20ರಂದು ಲೋಕಾರ್ಪಣೆಯಾಗಲಿರುವ ಮುಂಚಿತವಾಗಿ ಕಲಬುರಗಿ ನಗರದಲ್ಲಿ ‘ವಾರ್ತಾಭಾರತಿ’ಯ ನೂತನ ಕಚೇರಿಯ ಉದ್ಘಾಟನೆಯು ಡಿ.18ರ ಸಂಜೆ ನೆರವೇರಿತು.

ನಗರದ ಸರ್ದಾ‌ರ್ ವಲ್ಲಭ್ ಭಾಯಿ ಪಟೇಲ್ ವೃತ್ತದಿಂದ ಪಿಡಿಎ ಕಾಲೇಜಿಗೆ ಹೋಗುವ ರಸ್ತೆಯಲ್ಲಿರುವ ಮನೋರಮಾ ಎಸ್ ಆರ್ ಎಂಬಸಿ ಕಟ್ಟಡದ ಎರಡನೇ ಮಹಡಿಯಲ್ಲಿ ವಾರ್ತಾಭಾರತಿ ಪತ್ರಿಕೆಯ ಹೊಸ ಕಚೇರಿಯನ್ನು ಕಲಬುರಗಿಯ ಖ್ಯಾತ ಉದ್ಯಮಿ ಅಝೀಝ್ ಶಹನಾ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ್ತಿ ಕೆ.ನೀಲಾ, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಅರ್ಜುನ್ ಭದ್ರೆ, ಸಿಖ್ ಸಮುದಾಯದ ನಾಯಕ ಗುರುಮಿತ್ ಸಿಂಗ್ ಅಹುಜಾ, ಸುಭಾಷ್ ರಾಠೋಡ್, ಭೀಮರಾವ್ ಟಿ.ಟಿ, ವಹಾಜ್ ಬಾಬಾ, ಇಟ್ಬಾಲ್ ಅಲಿ, ನಿವೃತ್ತ ತಹಶೀಲ್ದಾರ್ ನಿಸಾ‌ರ್ ಅಹ್ಮದ್ ವಜೀರ್, ಅಸ್ಕರ್ ಚುಲಬುಲ್‌, ಸಂತಗುರು ಶ್ರೀ ಬುದ್ಧಾನಂದ ಸ್ವಾಮೀಜಿ, ಸುನೀಲ್‌ ಮಾನ್ಪಡೆ, ಅಪ್ಪಲ್ ಮಹಮೂದ್, ಸಂಧ್ಯಾರಾಜ್‌ ಸ್ಯಾಮ್ಯುಯೆಲ್, ಲೂಯಿಸ್ ಕೋರಿ, ಶಿವಾನಂದ ಹೊನಗುಂಟಿ, ಆರ್.ಜೆ ಶೇಟಕಾರ್, ದಿಗಂಬರ ಬೆಳಮಗಿ, ಮಹೇಶ್ ಹುಬ್ಬಳ್ಳಿ, ತಿಪ್ಪಣ್ಣ ಒಡೆಯ‌ರ್, ಮಲ್ಲಿಕಾರ್ಜುನ್ ಬೋವಿ, ಲಕ್ಷ್ಮಣ ಪೂಜಾರಿ, ನಾಗೇಂದ್ರ ಜವಳಿ, ಆಕಾಶ್ ನಂದಾ, ನಂದಕುಮಾ‌ರ್ ಮಾಲಿಪಾಟೀಲ್‌, ಇರ್ಫಾನುಲ್ಲಾ ಶರೀಫ್, ಝೀಶಾನ್‌ ಅಖೀಲ್ ಸಿದ್ದೀಕ್, ನ್ಯಾಯವಾದಿ ಜಬ್ಬಾರ್ ಗೋಲಾ, ಎಸ್‌.ಎಸ್‌.ತಾವಡೆ, ‘ವಾರ್ತಾ ಭಾರತಿ’ ಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ, ಸ್ಥಾಪಕ ನಿರ್ದೇಶಕ ಯಾಸೀನ್ ಮಲ್ಪೆ, ಕಲ್ಯಾಣ ಕರ್ನಾಟಕ ಕೋ ಆರ್ಡಿನೇಟರ್ ಸಾಜಿದ್ ಅಲಿ, ಜಿಲ್ಲಾ ವರದಿಗಾರ ದಸ್ತಗೀರ್ ನದಾಫ್, ಅಂಕಣಕಾರರಾದ ಹೊನಕೆರೆ ನಂಜುಂಡೇಗೌಡ, ರಾಜಶೇಖರ ಹತಗುಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...