ಫೇಸ್‌ಬುಕ್‌ನಲ್ಲಿ ಶಾಸಕ ಅಶೋಕ್ ರೈ, ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

Date:

ಫೇಸ್‌ಬುಕ್ ಖಾತೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಕಮೆಂಟ್ ಹಾಕಿರುವ ಪುತ್ತೂರು ನೆಹರೂ ನಗರದಲ್ಲಿರುವ ಪುತ್ತೂರು ಕನ್‌ಸ್ಟ್ರಕ್ಷನ್‌ ಮಾಲೀಕ ವಸಂತಭಟ್ ತಾನು ಮಾಡಿದ‌ ತಪ್ಪಿಗೆ ಮಂಗಳವಾರ ಕ್ಷಮೆ ಕೇಳಿದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕನ್‌ಸ್ಟ್ರಕ್ಷನ್‌ ಮಾಲೀಕ ವಸಂತಭಟ್‌ ಕಮೆಂಟ್‌ ಹಾಕಿರುವುದನ್ನು ಖಂಡಿಸಿ ಪುತ್ತೂರು ಬ್ಲಾಕ್ ಸೋಶಿಯಲ್ ಮೀಡಿಯಾ ಘಟಕದ ಅಧ್ಯಕ್ಷ ಸುಪ್ರಿತ್ ಕಣ್ಣಾರಾಯ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

ಈ ಸುದ್ದಿ ಓದಿದ್ದೀರಾ? ಕಾರವಾರ | ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ ನೀಡದಿದ್ದರೆ ರಾಜಕೀಯ ನಿವೃತ್ತಿ :ಶಾಸಕ ಸತೀಶ್ ಸೈಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಆರೋಪಿ ವಸಂತಭಟ್ ಮಂಗಳವಾರ ಶಾಸಕರ ನಿವಾಸಕ್ಕೆ ಭೇಟಿ ನೀಡಿದ್ದು, ʼನಾನು ತಪ್ಪು ಮಾಡಿದ್ದೇನೆ, ನನ್ನನ್ನು ಕ್ಷಮಿಸಿ. ಇನ್ನೆಂದೂ ಕೆಟ್ಟ ಕಮೆಂಟ್ ಹಾಕುವುದಿಲ್ಲ, ನನ್ನನ್ನು ಕ್ಷಮಿಸಿ, ನನ್ನನ್ನು ಪೊಲೀಸರು ಹುಡುಕುತ್ತಿದ್ದಾರೆ, ನನ್ನನ್ನು ಬಂಧಿಸದಂತೆ ಪೊಲೀಸರಿಗೆ ಹೇಳಿʼ ಎಂದು ಬೇಡಿಕೊಂಡಿದ್ದಾರೆ. ನೀವು ಕೆಟ್ಟ ಕಮೆಂಟ್ ಯಾಕೆ ಹಾಕುತ್ತೀರಿ? ನಾನು ನಿಮಗೇನಾದರೂ ಅನ್ಯಾಯ ಮಾಡಿದ್ದೇನಾ? ವಿದ್ಯಾವಂತರಿದ್ದೀರಿ, ಸಬ್ಯರಿದ್ದೀರಿ ಯಾಕೆ ಇಂಥ ಕೆಲಸಕ್ಕೆ ಹೋಗುತ್ತೀರಿ ಎಂದು ಕೇಳಿದ ಶಾಸಕರು ಮುಂದೆ ಇಂಥ ನೀಚ ಕೆಲಸಕ್ಕೆ ಹೋಗಬೇಡಿ ಎಂದು ಬುದ್ದಿವಾದ ಹೇಳಿ ಕ್ಷಮಿಸಿ ಕಳುಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...