ದಾವಣಗೆರೆ | ಕೊಲೆ ಆರೋಪಿ, ನಟ ದರ್ಶನ್‌ಗೆ ಕಠಿಣ ಶಿಕ್ಷೆ ವಿಧಿಸಲು ವೀರಶೈವ ಸಮಾಜ ಆಗ್ರಹ

Date:

ರೇಣುಕಾ ಸ್ವಾಮಿ ಅವರ ಕೊಲೆ ಆರೋಪಿ ನಟ ದರ್ಶನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆತನನ್ನು ಚಿತ್ರರಂಗದಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ವೀರಶೈವ ಸಮಾಜದ ಮುಖಂಡರು  ಪ್ರತಿಭಟನೆ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಅತ್ಯಂತ ಹೀನವಾಗಿ ಕೊಲೆಯಾದ ರೇಣುಕಾ ಸ್ವಾಮಿಯವರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು. ಮೃಗದ ರೀತಿಯಲ್ಲಿ ಆತನ ಮೇಲೆ ಹಲ್ಲೆ ಮಾಡಿ, ಅತ್ಯಂತ ಹೀನ ರೀತಿಯಲ್ಲಿ ಕೊಲೆ ಮಾಡಿರುವ ದರ್ಶನ್ ಮತ್ತು ಅವನ ಗೆಳತಿ ಹಾಗೂ ಸಹಚರರಿಗೆ ಕಾನೂನಿನ ಪ್ರಕಾರ ಶಿಕ್ಷೆ ಕೊಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರವಿ ಬಲ್ಲೂರ್, “ವೀರಶೈವ ಸಮಾಜದ ರೇಣುಕಾ ಸ್ವಾಮಿ ಅತ್ಯಂತ ಮುಗ್ದ ವ್ಯಕ್ತಿಯಾಗಿದ್ದರು. ಆತ ತನ್ನ ಗೆಳತಿಗೆ ಕೆಟ್ಟ ಸಂದೇಶ ಕಳಿಸಿದ ಎನ್ನುವ ಕಾರಣಕ್ಕೆ ಆತನನ್ನು ಅಪಹರಿಸಿ ಗೋಡೌನ್‌ನಲ್ಲಿ ಕೊಡಿ ಹಾಕಿಕೊಂಡು ಹಲ್ಲೆ ಮಾಡಿದ್ದಾರೆ. ಆತನನ್ನು ಕೊಲೆಗೈದಿರುವ ದರ್ಶನ್ ಒಬ್ಬ ಕೊಲೆಗಡುಕ. ಇಂತಹವರಿಂದ ಸಮಾಜಕ್ಕೆ ಯಾವ ಸಂದೇಶ ನೀಡಲು ಸಾಧ್ಯವಿಲ್ಲ. ಆತನನ್ನು ಚಿತ್ರರಂಗ ಉಚ್ಛಾಟಿಸಬೇಕು. ಅವರ ಚಿತ್ರಗಳು ಯಾವ ಚಿತ್ರಮಂದಿರದಲ್ಲೂ ಬಿಡುಗಡೆಯಾಗಬಾರದು. ಚಿತ್ರಮಂದಿರಗಳಲ್ಲಿ ಆತನ ಸಿನಿಮಾ ಪ್ರದರ್ಶಿಸಿದರೆ ಸಮಾಜದಿಂದ ತಕ್ಕ ಶಾಸ್ತಿ ಮಾಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣದಲ್ಲಿ ಸರ್ಕಾರ ಮೌನವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ಮೌನವಾಗಿದ್ದಾರೆ. ಪ್ರಕರಣದಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಂಡು ಆರೋಪಿಗಳಿಗೆ ಶಿಕ್ಷೆ ನೀಡಬೇಕು. ಆರೋಪಿಗಳನ್ನು ಬಚಾವ್ ಮಾಡುವ ಮಾತುಗಳು ಕೇಳಿ ಬರುತ್ತಿವೆ. ಒಂದು ವೇಳೆ, ಆ ರೀತಿ ಅದಲ್ಲಿ ತೀವ್ರ ಹೋರಾಟ ರೂಪಿಸಲಾಗುತ್ತದೆ” ಎಂದರು.

“ಕೊಲೆಯಾದ ರೇಣುಕಾ ಸ್ವಾಮಿ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು. ಆತನ ಪತ್ನಿ ಗರ್ಭಿಣಿಯದ್ದು, ಮುಂದಿನ ಜೀವನಕ್ಕೆ ಅನುಕೂಲವಾಗುವಂತೆ ಸರ್ಕಾರ ಪರಿಹಾರ ನೀಡಬೇಕು. ಉದ್ಯೋಗಕ್ಕೆ ವ್ಯವಸ್ಥೆ ಮಾಡಿಕೊಡಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಿದ್ದಲಿಂಗಯ್ಯ, ವೀರಭದ್ರಯ್ಯ, ಮುಖಂಡರು ಹಾಗೂ ನೂರಾರು ಜನರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...