ಮೈಸೂರು | ವೆನೆಜುವೆಲಾ ಅಧ್ಯಕ್ಷರ ಅಪಹರಣ ಪ್ರಕರಣ; ಎಸ್‌ಯುಸಿಐ(ಸಿ)ನಿಂದ ಪ್ರತಿಭಟನೆ

Date:

ವೆನೆಜುವೆಲಾ ಮೇಲೆ ಮಿಲಿಟರಿ ದಾಳಿ ನಡೆಸಿ, ಚುನಾಯಿತ ಅಧ್ಯಕ್ಷರನ್ನು ಅಪಹರಿಸಿದ ಅಮೆರಿಕಾ ಸಾಮ್ರಾಜ್ಯಶಾಹಿ ಸರ್ಕಾರದ ಯುದ್ಧಕೋರತನದ ನಿಲುವು ಖಂಡಿಸಿ ಎಸ್‌ಯುಸಿಐ(ಸಿ) ಪಕ್ಷದ ಮೈಸೂರು ಜಿಲ್ಲಾ ಸಮಿತಿಯ ಸದಸ್ಯರು ಇಂದು ಮೈಸೂರು ನಗರದ, ಟೌನ್ ಹಾಲ್ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸಿದರು.

ಅಂತಾರಾಷ್ಟ್ರೀಯ ಕಾನೂನು ನೀತಿ ಸಂಹಿತೆಗಳನ್ನು ಮನಬಂದಂತೆ ಧಿಕ್ಕರಿಸಿದ ಅಮೆರಿಕಾದ ಗೂಂಡಾಗಿರಿಯ ವಿರುದ್ಧ, ಎಸ್‌ಯುಸಿಐ(ಸಿ) ಪಕ್ಷದ ಕೇಂದ್ರ ಸಮಿತಿ ಕರೆ ನೀಡಿರುವ ಅಖಿಲ ಭಾರತ ಪ್ರತಿಭಟನಾ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದರು.

ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೋ ಮಾದಕ ದ್ರವ್ಯಗಳ ಕಳ್ಳಸಾಗಣೆ ಮಾಡಿಸುತ್ತಿದ್ದಾರೆ ಎಂದು ಅಮೆರಿಕಾ ಆರೋಪಿಸಿರುವುದು ಕಳ್ಳನಿಗೊಂದು ಪಿಳ್ಳೆ ನನ ಎಂಬಂತೆ ಹಾಸ್ಯಾಸ್ಪದವಾಗಿದೆ. ಇದೇ ಅಮೆರಿಕಾ ಹಿಂದೆ, ಇರಾಕಿನಲ್ಲಿ ಸಮೂಹ ವಿನಾಶದ ಅಸ್ತ್ರಗಳಿವೆ ಎಂದು ಆರೋಪಿಸಿ, ವರ್ಷಗಟ್ಟಲೆ ಯುದ್ಧ ಹೂಡಿ ಅಲ್ಲಿನ ಅಧ್ಯಕ್ಷ ಸದ್ದಾಂ ಹುಸೇನ್ ಅವರನ್ನು ಕೊಲೆ ಮಾಡಿತು. ಆದರೆ, ಇದುವರೆಗೂ ಅಂತಹ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡಲು ಸಾಧ್ಯವಾಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜಾತಂತ್ರದ ಬದಲಿಗೆ ಮತ್ತಷ್ಟು ಅರಾಜಕತೆ, ಇಸ್ಲಾಮಿಕ್ ಮತೀಯವಾದ ಬೆಳೆದಿದೆ. ಅಫ್ಘಾನಿಸ್ಥಾನದಲ್ಲಿ ಭಯೋತ್ಪಾದನೆಯ ವಿರುದ್ಧ ಯುದ್ಧ ಸಾರಿ ಈಗ ತಾಲಿಬಾನ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸರಿಯಾದ ಚುನಾಯಿತ ಸರ್ಕಾರವನ್ನು ಬೀಳಿಸಿ ಐಸಿಸ್ ಕೈಗೆ ಕೊಡಲಾಗಿದೆ. ಇಂತಹ ಅಮೆರಿಕಾ ವೆನೆಜುವೆಲಾದಲ್ಲಿ ಪ್ರಜಾತಾಂತ್ರಿಕ ಸರ್ಕಾರವನ್ನು ತರುವುದೆಂದು ಹೇಳಿದರೆ ನಂಬಲಸಾಧ್ಯ.

ವಾಸ್ತವದಲ್ಲಿ ವೆನೆಜುವೆಲಾ ಜಗತ್ತಿನಲ್ಲೇ ಅತಿ ಹೆಚ್ಚು ಕಚ್ಚಾತೈಲದ ನಿಕ್ಷೇಪಗಳನ್ನು ಹೊಂದಿದೆ. 1998ರಲ್ಲಿ ಅಧಿಕಾರಕ್ಕೆ ಬಂದ ಹೋರಾಟಗಾರ ಹ್ಯೂಗೋ ಚಾವೇಜ್ ಅಮೆರಿಕಾ ಸೇರಿದಂತೆ ಎಲ್ಲಾ ವಿದೇಶ ಕಂಪನಿಗಳನ್ನು ನಿಷೇಧಿಸಿ, ಎಲ್ಲಾ ತೈಲೋದ್ಯಮವನ್ನು ರಾಷ್ಟ್ರೀಕರಣ ಮಾಡಿದರು. ಅವರ ನಂತರ 2013ರಲ್ಲಿ ಅಧಿಕಾರಕ್ಕೆ ಬಂದ ನಿಕೋಲಸ್ ಮಡುರೋ ಅದೇ ನೀತಿಗಳನ್ನು ಮುಂದುವರಿಸಿದ್ದಾರೆ.

ಇದನ್ನೆಲ್ಲಾ ಸಹಿಸದ ಅಮೆರಿಕಾ ರಾಜಕೀಯವಾಗಿ ಸೋಲಿಸಲು ವಿವಿಧ ತಂತ್ರಗಳನ್ನು ಮಾಡಿತು. ಆರ್ಥಿಕ ದಿಗ್ಬಂಧನಗಳನ್ನು ವಿಧಿಸಿತ್ತು. ಆದರೆ, ಅದರಿಂದ ಮಡರೋ ಅಲುಗಾಡಲಿಲ್ಲ. ಆದರೆ, ದೇಶ ಸಾಕಷ್ಟು ಸಂಕಷ್ಟಗಳನ್ನು ಎದುರಿಸಬೇಕಾಯಿತು. ಅವರ ರಾಜಕೀಯ ಎದುರಾಳಿ, ಅಮೆರಿಕಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಯಿತು. ಈಗ ಕೆಲವು ತಿಂಗಳುಗಳಿಂದ ಮಾದಕ ದ್ರವ್ಯಗಳ ಕಳ್ಳಸಾಗಣೆ ತಡೆಯುವ ನೆಪ ನೀಡಿ ಕೆರೆಬಿಯನ್ ಸಮುದ್ರದಲ್ಲಿ ಅಮೆರಿಕಾ ತನ್ನ ಅತಿದೊಡ್ಡ ಯುದ್ಧನೌಕೆಯನ್ನು ತಂದು ನಿಲ್ಲಿಸಿದೆ.

ಇದೀಗ ಜನವರಿ 2ರ ನಡುರಾತ್ರಿ ದರೋಡೆಕೋರರಂತೆ ವೆನೆಜುವೆಲಾದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆಸಿ, ತಾವೇ ಅಲ್ಲಿ ಆಡಳಿತ ನಡೆಸುವುದಾಗಿ ಟ್ರಂಪ್ ಹೇಳಿಕೆ ನೀಡಿದ್ದಾರೆ. ಅಮೆರಿಕಾದ ಇಂತಹ ವಿದೇಶಾಂಗ ನೀತಿಯು ಜಗತ್ತಿನ ಶಾಂತಿ ಕದಡಲು, ಭಯೋಭಾವನೆ ಬೆಳೆಯಲು ಮುಖ್ಯ ಕಾರಣವಾಗಿದೆ. ಆದ್ದರಿಂದ, ಅಮೆರಿಕಾ ವಿಶ್ವದಲ್ಲಿನ ಎಲ್ಲಾ ರಾಷ್ಟ್ರಗಳಿಗಿಂತ ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ತನ್ನ ಬಂಡವಾಳಶಾಹಿ ವ್ಯವಸ್ಥೆಯನ್ನು ಮೇಲೆತ್ತುವುದಕ್ಕಾಗಿ, ಜಗತ್ತಿನ ದುರ್ಬಲ ರಾಷ್ಟ್ರಗಳ ಆರ್ಥಿಕ ವ್ಯವಸ್ಥೆಯನ್ನು ತಡೆಯಲು ಮುಂದಾಗಿದೆ.

ದುರಂತವೆಂದರೆ ಸಾಮ್ರಾಜ್ಯಶಾಹಿ ವಿರೋಧಿ ಸ್ವಾತಂತ್ರ್ಯ ಹೋರಾಟದ ಇತಿಹಾಸ ಇರುವ ಭಾರತದಲ್ಲಿ ಅಧಿಕಾರ ಹಿಡಿದಿರುವ ಕೇಂದ್ರ ಬಿಜೆಪಿ ಸರ್ಕಾರ ಈ ಅಕ್ರಮಣವನ್ನು ಖಂಡಿಸುತ್ತಿಲ್ಲ. ಬದಲಿಗೆ ಭಾರತದೆ ಬಂಡವಾಳಶಾಹಿಗಳಿಗೆ ಇದರಿಂದಾಗುವ ಲಾಭ ನಷ್ಟದ ಲೆಕ್ಕಾಚಾರ ಹಾಕಿ ಆತ್ಮ ವಂಚನೆಯ ಹೇಳಿಕೆ ನೀಡುತ್ತಿದೆ.

ಈ ಸುದ್ದಿ ಓದಿದ್ದೀರಾ? ಎಲ್ಲಾ ಬಗೆಯ ಕೃಷಿಕರ ತವರೂರು ಹಾಸನ: ಶಾಸಕ ಹೆಚ್ ಕೆ ಸುರೇಶ್

ಇಂತಹ ಸಂದರ್ಭದಲ್ಲಿ ಒಂದು ದೇಶದ ಮೇಲೆ ದಾಳಿ ಮಾಡಿದ ಅಮೆರಿಕಾದ ಆಕ್ರಮಣದ ವಿರುದ್ಧ ಜಗತ್ತಿನ ಶಾಂತಿಪ್ರಿಯ ಜನತೆ ತೀವ್ರವಾಗಿ ಹೋರಾಡಲು ಮುಂದಾಗಬೇಕು. ವೆನೆಜುವೆಲಾದ ಅಧ್ಯಕ್ಷರನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಭಾರತ ಸರ್ಕಾರವು ಹಿಂದಿನಂತೆ ತನ್ನ ಸಾಮ್ರಾಜ್ಯಶಾಹಿ ವಿರೋಧಿ, ಶಾಂತಿಪರ ನೀತಿಯನ್ನು ಪಾಲಿಸಿ, ಅಮೆರಿಕಾದ ವಿರುದ್ಧ ಜಾಗತಿಕ ಅಭಿಪ್ರಾಯ ಮೂಡಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಲೈವ್ ವೀಕ್ಷಿಸಿ:https://www.youtube.com/live/M6qJwMD3s0g?si=96sN77LlSDa87kon

ಪ್ರತಿಭಟನೆಯಲ್ಲಿ ಎಸ್‌ಯುಸಿಐ(ಸಿ) ಜಿಲ್ಲಾ ಕಾರ್ಯದರ್ಶಿ ಬಿ. ರವಿ, ಸದಸ್ಯರಾದ ಎಂ. ಉಮಾದೇವಿ, ಯಶೋಧ‌ರ್, ಸಂಧ್ಯಾ ಪಿ.ಎಸ್, ಹರೀಶ್, ಸುಮಾ, ಮುದ್ದುಕೃಷ್ಣ, ಆಸಿಯಾ ಬೇಗಂ, ನೀತುಶ್ರೀ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...