ಉಡುಪಿ | ಬಿಜೆಪಿ ನಾಯಕರಿಗೆ ಜನರೇ ಬುದ್ದಿ ಕಲಿಸುವ ದಿನ ದೂರವಿಲ್ಲ – ವೆರೋನಿಲಾ‌ ಕರ್ನೇಲೊಯೋ

Date:

ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ರಾಜ್ಯ ಬಿಜೆಪಿ ನಾಯಕರ ಪ್ರತಿಭಟನೆಗೆ ಕಪಾಳಮೋಕ್ಷ ಮಾಡಿದಂತಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಬೆಲೆ ಏರಿಕೆ ಮಾಡಿರುವುದಾಗಿ ಬಾಯಿ ಬಡಿದುಕೊಳ್ಳುತ್ತಿರುವ ಬಿಜೆಪಿ ನಾಯಕರಿಗೆ ಕೇಂದ್ರದವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸಿರುವುದಕ್ಕೆ ಉತ್ತರವಿದೆಯೇ? ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಇಳಿಯುತ್ತಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಒಂದೇ ಸಮನೆ ಏರಿಸುತ್ತಾ ಹೋಗಲು ಕಾರಣ ಏನು ಎಂಬುದನ್ನು ಬಿಜೆಪಿ ನಾಯಕರು ರಾಜ್ಯದ ಜನರಿಗೆ ತಿಳಿಸಬೇಕಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಪ್ರಧಾನಿ ಮೋದಿಯವರು ತೈಲ ಹಾಗೂ ಅನಿಲ ಬೆಲೆ ಏರಿಕೆ ಮಾಡುವುದರೊಂದಿಗೆ ದೇಶದ ಜನತೆಗೆ ಮೋದಿ ಕೀ ಗ್ಯಾರಂಟಿ ನೀಡಿದ್ದಾರೆ. ಅಕ್ಕಿ, ಬೇಳೆ, ಮೀನು, ಮಾಂಸ, ತರಕಾರಿಯಿಂದ ಹಿಡಿದು ಹೊಟೇಲ್ ತಿಂಡಿ ವರೆಗೆ ಎಲ್ಲದರ ಬೆಲೆ ಏರಿಕೆಗೆ ಮೂಲ ಕಾರಣ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುತ್ತಲೇ ಇರುವ ಕೇಂದ್ರ ಸರ್ಕಾರದ ಜನವಿರೋಧೀ ನೀತಿ ಮತ್ತೊಮ್ಮೆ ಸಾಬೀತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಬೆಲೆ ಏರಿಕೆ ಆಗಿದೆ ಎಂದು ಹೇಳಿಕೊಳ್ಳುವ ಬಿಜೆಪಿಗರಿಗೆ ನಿಜವಾದ ಜನಪರ ಕಾಳಜಿ ಇದ್ದರೆ ಮೊದಲು ಕೇಂದ್ರ ಸರಕಾರದ ಮೇಲೆ ಮೇಲೆ ಒತ್ತಡ ಹೇರಿ ಕೇಂದ್ರ ಸರ್ಕಾರ ಹೆಚ್ಚಿಸಿರುವ ಬೆಲೆಯನ್ನು ಇಳಿಸುವಂತೆ ಮಾಡಲಿ ಇಲ್ಲವಾದಲ್ಲಿ ರಾಜ್ಯದ ಬಿಜೆಪಿ ನಾಯಕರಿಗೆ ಜನರೇ ಬುದ್ದಿ ಕಲಿಸುವ ದಿನ ದೂರವಿಲ್ಲ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...