ಯಾದಗಿರಿ | ರೈತರ ಸುದೀರ್ಘ ಹೋರಾಟಕ್ಕೆ ಜಯ; ಕಾಲುವೆಗೆ ಹರಿಯಲಿದೆ 2.75 ಟಿಎಂಸಿ ನೀರು

Date:

ಅನಾವೃಷ್ಟಿಯಿಂದ ನೀರಿಲ್ಲದೆ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆ ಬಾಡುತ್ತಿರುವುದನ್ನು ಸಂರಕ್ಷಣೆಗೆ ಜಲಾಶಯದಿಂದ ರೈತರು ಕಾಲುವೆಗೆ ನೀರು ಹರಿಸಬೇಕು ಎಂಬುದಾಗಿ ಪಟ್ಟು ಹಿಡಿದು ಕಳೆದ 22 ದಿನಗಳಿಂದ ಹೋರಾಟ ನಡೆಸಿದ ಅನ್ನದಾತರ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದು 2.75 ಟಿಎಂಸಿ ನೀರು ಬಿಡಲು ಸೂಚಿಸಿದೆ.

ಶಹಾಪುರ ತಾಲೂಕಿನ ಭೀಮರಾಯನ ಗುಡಿ ಕೃಷ್ಣಭಾಗ್ಯ ಜಲ ನಿಗಮದ ಆಡಳಿತ ಕಚೇರಿ ಮುಂದೆ ನಡೆಯುತ್ತಿರುವ ಧರಣಿ ಸ್ಥಳದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಪೊಲೀಸರು, ಮಾಧ್ಯಮ ಮಿತ್ರರಿಗೂ, ರೈತ ಮುಖಂಡರಿಗೂ ಸನ್ಮಾನಿಸಿ, ಸಿಹಿಹಂಚಿ ಸಂಭ್ರಮಿಸಿ ಧರಣಿ ಅಂತ್ಯಗೊಳಿಸಿದರು.

ಸುಮಾರು 20‌ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದು ನಿಂತ ಬೆಳೆಗಳ ರಕ್ಷಣೆಗಾಗಿ ರೈತರು ಕೈಗೊಂಡ ಸುದೀರ್ಘ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ, ಕಾಲುವೆಗೆ ನೀರು ಹರಿಸಲು ಕಾರಣವಾದ ಸರ್ಕಾರ, ಸಚಿವರು, ಶಾಸಕರು, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕೃಷ್ಣ ಭಾಗ್ಯ ಜಲ ನಿಗಮ ಹಾಗೂ ಮಾಧ್ಯಮ ಬಳಗಕ್ಕೂ ರೈತರ ಪರವಾಗಿ ಅನಂತ ಕೃತಜ್ಞತೆ ಎಂದು ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಸತ್ಯಂಪೇಟೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹೋರಾಟ ನಮ್ಮ ಬದುಕಿನ ಪ್ರಶ್ನೆಯಾಗಿರುವುದರಿಂದ ನಾವು ಅನಿವಾರ್ಯವಾಗಿ ಗಟ್ಟಿಯಾಗಿ ಹೋರಾಟ ಮಾಡುವುದು ಅನಿವಾರ್ಯವಾಗಿತ್ತು. ಈ ವೇಳೆ ಸರ್ಕಾರಕ್ಕೂ, ಸಚಿವರಿಗೂ, ಜಿಲ್ಲಾಡಳಿತಕ್ಕೂ, ಪೊಲೀಸರಿಗೂ ಹಾಗೂ ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಸಿಟ್ಟಿನ ಭರಾಟೆಯಲ್ಲಿ ಮಾತನಾಡಿರಬಹುದು. ಧಿಕ್ಕಾರ ಕೂಗಿರಬಹುದು. ಆದರೆ, ಇದು ಯಾವುದೇ ವೈಯಕ್ತಿಕ ದ್ವೇಷದಿಂದಲ್ಲ, ಯಾವ ದ್ವೇಷವೂ ಇಲ್ಲ, ಅಧಿಕಾರಿಗಳು ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳು ನಮ್ಮ ಜೊತೆ ಸಂಯಮದಿಂದ ವರ್ತಿಸಿರುವದನ್ನು ನಾವು ಕೃತಜ್ಞತೆ ಸಲ್ಲಿಸುತ್ತೇವೆ” ಎಂದು ತಿಳಿಸಿದರು.

yadagiri Former protest
ಭೀಮರಾಯನ ಗುಡಿ ಕೃಷ್ಣಭಾಗ್ಯ ಜಲ ನಿಗಮದ ಆಡಳಿತ ಕಚೇರಿ ಮುಂದೆ ನಡೆದ ಧರಣಿ

ಮಳೆ ಕೊರತೆ ಹಾಗೂ ಭೀಕರ ಬರಗಾಲದಿಂದಾಗಿ ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಿದ್ದರೂ, ಡ್ಯಾಮಿನಲ್ಲಿ ನೀರಿನ ಕೊರತೆ ಇದ್ದರೂ ರೈತರ ಹಿತ ಕಾಪಾಡುವ ದೃಷ್ಟಿಯಿಂದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಿಗೆ ಈ ಭಾಗದ ರೈತರ ಸಮಸ್ಯೆ, ಪರಿಸ್ಥಿತಿ, ಅವರ ಸಂಕಷ್ಟದ ಬದುಕಿನ ಬಗ್ಗೆ ವಿವರವಾಗಿ ತಿಳಿಸಿ. ನೀರು ಬಿಟ್ಟರೆ ಈ ಭಾಗದ ರೈತರಿಗೆ ತುಂಬಾ ಅನುಕೂಲವಾಗುತ್ತದೆ ಎಂದು ಮಾಡಿಕೊಂಡಿದ್ದೆವು. ಮನವಿಗೆ ಪುರಸ್ಕರಿಸಿದ ಅವರು ತುರ್ತು ಸಭೆ ನಡೆಸಿ, ರೈತರ ಸಮಸ್ಯೆಗೆ ಸ್ಪಂದಿಸಿ 2.75 ಟಿಎಂಸಿ ನೀರು ಬಿಡಲು ಆದೇಶಿಸಿದ್ದು, ಈ ಭಾಗದ ಸಾವಿರಾರು ರೈತರಿಗೆ ಅನುಕೂಲವಾಗಿದೆ. ಸಮಸ್ಯೆಗೆ ಸ್ಪಂದಿಸಿದ ಸಿಎಂ ಹಾಗೂ ಜಲಸಂಪನ್ಮೂಲ ಸಚಿವರಿಗೂ ಮತ್ತು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಿಗೂ ಮತ್ತು ಶಾಂತಿಯುತವಾಗಿ ಹೋರಾಟ ನಡೆಸಿದ ರೈತರಿಗೂ ಅಭಿನಂದನೆಗಳನ್ನು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಕಳೆದ 21 ದಿನಗಳ ಕಾಲ ಸತತ ಅಹೋರಾತ್ರಿ ಧರಣಿ ನಡೆಸಿ, ಸರ್ಕಾರ ನಮ್ಮ ಮನವಿಗೆ ವಿಳಂಬ ನೀತಿ ಅನುಸರಿಸಿತು. ಕುಣಿತೋಡಿ ಜೀವಂತ ಸಮಾಧಿಯಾಗಲು ಸಿದ್ಧರಾಗಿದ್ದೆವು. ತಪ್ಪಿದ್ದರೆ ವಿಷ ಕುಡಿಯಲಿಕ್ಕೂ ಸಿದ್ದರಾಗಿರುವ ರೈತರ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದು 2.75 ಟಿಎಂಸಿ ನೀರು ಬಿಡಲು ಒಪ್ಪಿ ಆದೇಶಿಸಿದೆ. ರೈತರ ಹೋರಾಟದೊಂದಿಗೆ ಸಹಕರಿಸಿದ ಸಚಿವರಿಗೂ ಜಿಲ್ಲಾಧಿಕಾರಿಯವರಿಗೂ ಶಾಸಕರಿಗೂ ಅಧಿಕಾರಿಗಳಿಗೂ, ಸೂಕ್ತ ರಕ್ಷಣೆ ನೀಡಿದ ಪೊಲೀಸ್ ಇಲಾಖೆಗೂ ಮಾಧ್ಯಮದವರಿಗೂ ರೈತ ಸಂಘ ಕೃತಜ್ಞತೆ ಸಲ್ಲಿಸುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಶರಣು ಮಂದಾರವಾಡ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...