ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ : 16 ಮಂದಿ ವಿರುದ್ಧ ಎಫ್​ಐಆರ್; ತಡವಾಗಿ ಬೆಳಕಿಗೆ ಬಂದ ಘಟನೆ

Date:

  • ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಸಂಬಂಧಿಕರಿಂದಲೇ ಅತ್ಯಾಚಾರ : ದೂರು ದಾಖಲು
  • ಪ್ರಕರಣದ್ದೆಂದು ಹೇಳಲಾದ ಕೆಲವೊಂದು ವಿಡಿಯೋಗಳು ವೈರಲ್

ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಮಹಿಳೆಯ ಮೇಲೆ ಸಂಬಂಧಿಕರೇ ಅತ್ಯಾಚಾರ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಘಟನೆಯ ಸಂಬಂಧ 16 ಮಂದಿಯ ವಿರುದ್ಧ ಎಫ್​ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ. ಅಲ್ಲದೇ, ಈ ನಡುವೆ ಪ್ರಕರಣ ಸಂಬಂಧ ಇದೇ ಘಟನೆಯದ್ದೆಂದು ಹೇಳಲಾದ ಕೆಲವು ವಿಡಿಯೋಗಳು ಆಗಸ್ಟ್ 14ರಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ. ಆದರೆ ವಿಡಿಯೋಗಳ ಬಗ್ಗೆ ಪೊಲೀಸರು ಇನ್ನಷ್ಟೇ ತನಿಖೆ ನಡೆಸಬೇಕಿದೆ.

ಪ್ರಕರಣದ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀನಿವಾಸ್ ಸತ್ಯನಾರಾಯಣ್, ರಾಧಾ ಶ್ರೀನಿವಾಸ್, ಪ್ರದೀಪ್ ಶ್ರೀನಿವಾಸ್, ಸುದೀಪ್ ಶ್ರೀನಿವಾಸ್ ಹಾಗೂ ಗೋಪಾಲ್ ರಾವ್ ಪುಲ್ಲಯ್ಯ ಕೊಠಾರಿ, ರಾಮರಾವ್ ವೆಂಕಟ ನಾರಾಯಣ್ ಸೇರಿದಂತೆ 16 ಜನರ ವಿರುದ್ಧ ಎಫ್​​ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಜಮೀನು ವಿಚಾರವಾಗಿ ಕುಟುಂಬದ ಮಧ್ಯೆ ಏಳು ವರ್ಷಗಳಿಂದ ವಿವಾದವಿತ್ತು ಎನ್ನಲಾಗಿದ್ದು, ‘ಕಳೆದ ಜುಲೈ 27ರಂದು ಜಮೀನಿಗೆ ಹೋದಾಗ ತನ್ನನ್ನು ಅತ್ಯಾಚಾರ ಮಾಡಿದ್ದಾರೆಂದು’ ಆರೋಪಿಸಿ ಸಂತ್ರಸ್ತ ಮಹಿಳೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

‘ನಮ್ಮ ಪಾಲಿಗೆ ಬಂದಿದ್ದ ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಭಾವ ಹಾಗೂ ಸಂಬಂಧಿಕರೇ ಅತ್ಯಾಚಾರ ಮಾಡಿದ್ದು, ಪತಿಯ ಮೇಲೂ ಹಲ್ಲೆ ನಡೆಸಿದ್ದಾರೆ’ ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಅನ್ವಯ ಪೊಲೀಸರು, ಕಲಂ 143, 147, 376 (D), 148, 354, 504, 506 ಅಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ, ಪ್ರಕರಣದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ವಿಡಿಯೋ ಸತ್ಯಾಸತ್ಯತೆ ಪರಿಶೀಲನೆ : ಎಸ್‌ಪಿ ಯಶೋಧಾ ವಂಟಗೋಡಿ

ವೈರಲ್ ಆದ ವಿಡಿಯೋಗಳು ಹಳೆಯದ್ದು ಎಂಬ ಅನುಮಾನವಿದೆ. ಈ ನಿಟ್ಟಿನಲ್ಲಿಯೂ ತನಿಖೆ ನಡೆಸುತ್ತಿದ್ದೇವೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಹೇಳಿಕೆ ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದೇವೆ. ವೈರಲಾಗುತ್ತಿರುವ ವಿಡಿಯೋ ಬಗ್ಗೆ ಕೂಡ ಸತ್ಯಾಸತ್ಯತೆ ಪರಿಶೀಲನೆ ನಡೆಸುತ್ತಿದ್ದೇವೆ. 15-20 ವರ್ಷಗಳಿಂದ ಮಧ್ಯೆ ಕೌಟುಂಬಿಕ ಕಲಹವಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆ ದೃಢಪಡುವವರೆಗೂ ಯಾರನ್ನೂ ಬಂಧಿಸುವುದಿಲ್ಲ ಎಂದು ಎಸ್‌ಪಿ ತಿಳಿಸಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...