ಜೋಗ್ ಫಾಲ್ಸ್‌ನ ನಿಷೇಧಿತ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಣ; ಯೂಟ್ಯೂಬರ್, ಗೈಡ್ ವಿರುದ್ಧ ದೂರು

Date:

ವಿಶ್ವವಿಖ್ಯಾತ ಜೋಗ್ ಜಲಪಾತದ ನಿಷೇಧಿತ ಮತ್ತು ಅತ್ಯಂತ ಅಪಾಯಕಾರಿ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಆರೋಪದ ಮೇಲೆ ಯೂಟ್ಯೂಬರ್ ಸೇರಿದಂತೆ ಇಬ್ಬರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಮೂಲದ ಯೂಟ್ಯೂಬರ್ ಗೌತಮ್ ಅರಸು ಮತ್ತು ಅವರಿಗೆ ಮಾರ್ಗದರ್ಶನ ನೀಡಿದ ಸೊರಬ ಮೂಲದ ಗೈಡ್ ಸಿದ್ದರಾಜ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ್ದಾರೆ. ಕಳೆದ ಜುಲೈ 6ರಂದು ಗೌತಮ್ ಅರಸು, ಗೈಡ್ ಸಿದ್ಧರಾಜ್ ಅವರ ಸಹಾಯದಿಂದ ಜೋಗ ಜಲಪಾತ ಬೀಳುವ ಅತ್ಯಂತ ಅಪಾಯಕಾರಿ ರಾಜಾ ಫಾಲ್ಸ್‌ನ ಬಂಡೆಯ ಮೇಲೆ ಹೋಗಿ ವಿಡಿಯೋ ಚಿತ್ರೀಕರಿಸಿದ್ದಾರೆ. ಈ ಪ್ರದೇಶದಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟವಾಗಿ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದ್ದರೂ, ನಿಯಮ ಉಲ್ಲಂಘಿಸಿ ಈ ಕೃತ್ಯ ಎಸಗಿದ್ದಾರೆ.

WhatsApp Image 2025 08 08 at 12.46.33 PM

“ಸ್ಲಿಪ್ ಆದರೆ ಗೋವಿಂದ” ಮತ್ತು “ಸಾಯೋದರೊಳಗೆ ನೋಡು ಒಮ್ಮೆ ಜೋಗದ ಗುಂಡಿ” ಎಂಬಂತಹ ಪ್ರಚೋದನಕಾರಿ ಶೀರ್ಷಿಕೆ ಮತ್ತು ಸಂಭಾಷಣೆಗಳೊಂದಿಗೆ ಈ ವಿಡಿಯೋವನ್ನು ‘Gowtham Naidu’ ಎಂಬ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಇದು ಇತರ ಪ್ರವಾಸಿಗರಿಗೂ ಅಪಾಯಕಾರಿ ಸಾಹಸಗಳಿಗೆ ಪ್ರೇರಣೆ ನೀಡುವ ಸಾಧ್ಯತೆ ಇರುವುದರಿಂದ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಈ ದಿನ ಸಂಪಾದಕೀಯ | ಪಾಠ ಕಲಿಯದ ಪ್ರಜ್ವಲ್‌, ಕಲಿಸಿದ್ದು ಯಾರಿಗೆ?

ನಿನ್ನೆ (ಆ.7) ಸಿದ್ದಾಪುರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಶಾಂತಿನಾಥ ಕೆ. ಪಾಸಾನೆ ಅವರು ಸರ್ಕಾರದ ಪರವಾಗಿ ಯೂಟ್ಯೂಬರ್ ಮತ್ತು ಗೈಡ್ ವಿರುದ್ಧ ದೂರು ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...