ಕಾವೇರಿಗಾಗಿ ಅ.17ರಂದು ವಿಧಾನಸೌಧ ಮುತ್ತಿಗೆ: ವಾಟಾಳ್ ನಾಗರಾಜ್

Date:

“ಕಾವೇರಿ ನೀರಿಗಾಗಿ ಅ.17ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧ ಮುತ್ತಿಗೆ ಹಾಕುತ್ತೇವೆ” ಎಂದು ಕನ್ನಡದ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಅವರು, “ನಮಗೇ ಇಲ್ಲಿ ಕುಡಿಯುವ ನೀರಿಲ್ಲ. ಆದರೂ, ತಮಿಳುನಾಡಿಗೆ ನೀರು ಬಿಡುವಂತಾಗಿದೆ. ಹಾಗಾಗಿ, ನಾವು ಸರ್ಕಾರದ ಮೇಲೆ ಒತ್ತಡ ಹೇರಲು ಅ.17 ರಂದು ವಿಧಾನಸೌಧ ಮುತ್ತಿಗೆ ಹಾಕಲಿದ್ದೇವೆ” ಎಂದು ಹೇಳಿದರು.

“ಕಾವೇರಿ ಪ್ರಾಧಿಕಾರ, ಕಾವೇರಿ ನಿರ್ವಹಣಾ ಸಮಿತಿ ನಮಗೆ ತೀವ್ರವಾಗಿ ಅನ್ಯಾಯ ಮಾಡಿದ್ದಾರೆ. ಕೇಂದ್ರ ಸರ್ಕಾರ ನಮ್ಮನ್ನು ಕಡೆಗಣಿಸಿದೆ. ನಮ್ಮ ಲೋಕಸಭಾ ಸದಸ್ಯರು ಸಂಪೂರ್ಣ ವಿಫಲರಾಗಿದ್ದಾರೆ. ರಾಜ್ಯ ಸರ್ಕಾರ ಯಾವ ಅಡ್ಡಿ ಆತಂಕವಿಲ್ಲದೇ ನೀರನ್ನು ಬಿಡುತ್ತಿದ್ದಾರೆ. ಕರ್ನಾಟಕಕ್ಕೆ, ಕನ್ನಡಿಗರಿಗೆ ಯಾರಿಂದಲೂ ರಕ್ಷಣೆ ಇಲ್ಲ, ಎಲ್ಲವೂ ನಾಟಕೀಯ. ಕನ್ನಡಪರ ಸಂಘಟನೆಗಳು ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. ನಮಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಕೆಆ‌ರ್‌ಎಸ್‌ನಲ್ಲಿ ನೀರಿಲ್ಲ. ಕಬಿನಿ, ಹಾರಂಗಿ, ಹೇಮಾವತಿಯಲ್ಲೂ ನೀರಿಲ್ಲ. ಇದರಿಂದ ಬೆಂಗಳೂರಿಗೆ ಕುಡಿಯುವ ನೀರು ನಿಲ್ಲುವ ಸೂಚನೆಯಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಪೀಡಿಸಿದ ವಿಕೃತ ಪತಿ; ದೂರು ದಾಖಲು

“ಹೀಗೆ ಆದರೆ, ಬೆಂಗಳೂರಿನ ಜನರ ಗತಿ ಏನು? ನೀರಿಲ್ಲದೆ ಒಣಗುತ್ತಿರುವ ನಮ್ಮ ರೈತರ ಗತಿ ಏನು? ಕರ್ನಾಟಕ ರಾಜ್ಯ ಕಗ್ಗತ್ತಲಿನಲ್ಲಿದೆ. ಕರ್ನಾಟಕದಲ್ಲಿ ಬೆಳಕಿದ್ದರೂ ಬೆಳಕಿಲ್ಲ. ಕಾವೇರಿ ನೀರು ತಮಿಳುನಾಡಿಗೆ ಬಿಡಬೇಡಿ” ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...