ವಿಜಯನಗರ | ಅಂಬೇಡ್ಕರ್ ವಿಚಾರಗಳು ಎಲ್ಲರ ಬದುಕಿಗೆ ದಾರಿದೀಪ: ದಾವಲ್ ಸಾಬ್ ಎ ನೀಲಗುಂದ

Date:

ಡಾ. ಬಿ ಆರ್‌ ಅಂಬೇಡ್ಕರ್ ವಿಚಾರಗಳು ಎಲ್ಲರ ಬದುಕಿಗೆ ದಾರಿದೀಪವಾಗಿವೆ ಎಂದು ಮುಖ್ಯಶಿಕ್ಷಕ ದಾವಲ್ ಸಾಬ್ ಎ ನೀಲಗುಂದ ಅಭಿಮತ ವ್ಯಕ್ತಪಡಿಸಿದರು.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಅಡವಿಮಲ್ಲನಕೆರೆ ಎಂಪಿಎಂ ಸರ್ಕಾರಿ ಪ್ರೌಢಶಾಲೆಯಲ್ಲಿ ಬೀಚಿ ಗ್ರಂಥಾಲಯ ಬೆಂಬಲಿಗರ ಬಳಗ ಸಿಂಚನ ಪ್ರಕಾಶನದಿಂದ ಆಯೋಜಿಸಿದ್ದ ಸಂವಿಧಾನ 75 ಓದು ಜನಮೇಜಯ ಅಭಿಯಾನದಲ್ಲಿ ವಾಣಿ ಪೆರಿಯೋಡಿಯವರ ʼಮಕ್ಕಳಿಗಾಗಿ ಸಂವಿಧಾನ ಪುಸ್ತಕ ವಿತರಣೆʼ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಅಂಬೇಡ್ಕರ್ ಪುಸ್ತಕ ಪ್ರೇಮಿಯಾಗಿದ್ದರು. ಅವರಲ್ಲಿ ಇದ್ದಂತಹ ಓದಿನ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಕರ್ತ ವೀರೇಶ್ ಕಲ್ಮಠ ಮಕ್ಕಳಿಗಾಗಿ ಸಂವಿಧಾನ ಪುಸ್ತಕಗಳನ್ನು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿ, “ವಿದ್ಯಾರ್ಥಿಗಳು ಸಂವಿಧಾನದ ಆಶಯಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಅಂಬೇಡ್ಕರ್ ಅವರು ಯಾವುದೇ ಒಂದು ಮತ-ಧರ್ಮಗಳಿಗಾಗಿ ಸಂವಿಧಾನವನ್ನು ರಚಿಸಲಿಲ್ಲ. ಎಲ್ಲ ಜಾತಿ, ಧರ್ಮಗಳನ್ನೊಳಗೊಂಡ ದೇಶದ ಕಟ್ಟ ಕಡೆಯ ವ್ಯಕ್ತಿಗೂ ಹಕ್ಕು, ನ್ಯಾಯ, ಸಮಾನತೆ ಮತ್ತು ಅವಕಾಶಗಳನ್ನು ನೀಡುವಂತಹ ಮಹಾನ್ ಗ್ರಂಥವಾಗಿದೆ. ದೇವಸ್ಥಾನಗಳು ನಮ್ಮಲ್ಲಿ ಮೌಢ್ಯ ಬಿತ್ತುತ್ತಿವೆ. ಅಸಮಾನತೆಯನ್ನು ಹುಟ್ಟುಹಾಕುತ್ತಿವೆ. ಆದರೆ, ಸಂವಿಧಾನ ಎಲ್ಲ ಸಮುದಾಯಗಳಿಗೂ ಸಮಾನ ಹಕ್ಕುಗಳನ್ನು ಕೊಟ್ಟಿದೆ” ಎಂದರು.

ಪತ್ರಕರ್ತ ಎಂ ದಯಾನಂದ ಮಾತನಾಡಿ, “ಡಾ. ಅಂಬೇಡ್ಕರ್ ಅವರು ‘ಮಹಿಳೆಯರು ದೇವಸ್ಥಾನಗಳ ಮುಂದೆ ಸಾಲುಗಟ್ಟಿ ನಿಲ್ಲುವದಕ್ಕಿಂತ ಗ್ರಂಥಾಲಯಗಳ ಮುಂದೆ ಸಾಲು ನಿಲ್ಲಬೇಕು. ಯಾಕೆಂದರೆ, ಮೂಢನಂಬಿಕೆಗಳಿಗೆ ಮಹಿಳೆಯರೇ ಹೆಚ್ಚು ಬಲಿಯಾಗುತ್ತಿದ್ದಾರೆ. ಆದ್ದರಿಂದ, ಅವರು ಶಿಕ್ಷಣವುಳ್ಳವರಾಗಬೇಕು‌ʼ ಎಂದು ಅಭಿಪ್ರಾಯಪಟ್ಟಿದ್ದರು. ಹಾಗಾಗಿ ಕೇವಲ ಮಹಿಳೆಯರಲ್ಲದೆ ಪ್ರಸ್ತುತದಲ್ಲಿ ಪ್ರತಿಯೊಬ್ಬರೂ ಗ್ರಂಥಾಲಯಗಳ ಸದ್ಬಳಕೆ ಮಾಡಿಕೊಂಡು ಉನ್ನತ ಸ್ಥಾನಕ್ಕೆ ಹೋಗುವ ಕನಸು ಕಾಣಬೇಕು” ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯುತ್ ವ್ಯವಸ್ಥೆಯಿಲ್ಲದೆ ಕತ್ತಲಾದ ಪ್ರೌಢಶಾಲೆ; ಮಕ್ಕಳು ಡಿಜಿಟಲ್ ತರಗತಿಗಳಿಂದ ವಂಚಿತ

ಬೀಚಿ ಗ್ರಂಥಾಲಯ ಬೆಂಬಲಿಗರ ಬಳಗದ ಅಧ್ಯಕ್ಷ ಸುರೇಶ ಅಂಗಡಿ ಮಾತನಾಡಿ, “ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಓದುವ ಹವ್ಯಾಸ ಬೆಳೆಸುವ ನಿಟ್ಟಿನಲ್ಲಿ ತಾಲೂಕಿನ ಶಾಲೆಗಳಿಗೆ ಅಂಬೇಡ್ಕರ್ ವಿಚಾರಧಾರೆಗಳನ್ನು ತಲುಪಿಸುವ ಕೆಲಸ ನಿರಂತರವಾಗಿ ಮಾಡಲಾಗುವುದು” ಎಂದರು. ಪ್ರಕಾಶನದ ವತಿಯಿಂದ ಪ್ರೌಢಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗರಾಜ ಮಲ್ಟಿಒಡೆಯರ್, ಎಸ್‌ಡಿಎಂಸಿ ಅಧ್ಯಕ್ಷ ಗಂಗಪ್ಪ ಹುರುಳಿಹಾಳ, ಶಾಲಾ ಶಿಕ್ಷಕರಾದ ಮುಮ್ಹಾಜ್ ಬೇಗಂ, ಬಿ ಕೆ ಗೋಣಿಬಸಪ್ಪ, ತೇಜಸ್ವಿನಿ ಎಚ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...