ವಿಜಯನಗರ | ಬಸ್ ನಿಲ್ದಾಣದಲ್ಲಿ, ದ್ವಿಚಕ್ರ ವಾಹನಗಳದ್ದೇ ಕಾರುಬಾರು; ಸಾರ್ವಜನಿಕರ ಪರದಾಟ!

Date:

ಜಿಲ್ಲೆಯ ಹರಪನಹಳ್ಳಿ ಸರಕಾರಿ ಸಾರಿಗೆ ಬಸ್ ತಂಗುದಾಣದಲ್ಲಿ ಸಾರ್ವಜನಿಕರು ದ್ವಿಚಕ್ರ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದು, ಈ ಕುರಿತು ಹೇಳುವವರಿಲ್ಲ ಕೇಳುವವರಿಲ್ಲ ಎಂಬಂತಾಗಿದೆ. ಸಾರಿಗೆ ವಾಹನಗಳ ಓಡಾಟಕ್ಕೆ ಮತ್ತು ಪ್ರಯಾಣಿಕರು ಬಸ್ ಹತ್ತುವಾಗ, ಇಳಿಯುವಾಗ ದ್ವಿಚಕ್ರವಾಹನಗಳು ಅಡ್ಡಗಾಲು ಹಾಕಿರುತ್ತವೆ. ಇದರಿಂದ ಸಾರ್ವಜನಿಕ ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದ್ದು, ಇಲ್ಲಿ ದ್ವಿಚಕ್ರ ವಾಹನಗಳದ್ದೇ ಕಾರುಬಾರು ಎನ್ನುಂವತಾಗಿದೆ.

ಈ ಬಸ್ ನಿಲ್ದಾಣದಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಇದ್ದರೂ ಸಾರ್ವಜನಿಕರು ಅದರ ಸದುಪಯೋಗ ಪಡಿಸಿಕೊಳ್ಳಲು ಹಿಂಜರಿಕೆಯಲ್ಲಿದ್ದಾರೆ. ದ್ವಿಚಕ್ರ ವಾಹನವನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಾರೆ. ಸಾರಿಗೆ ಬಸ್‌ಗಳು ಹಾಗೂ ಪ್ರಯಾಣಿಕರು ಪ್ರಯಾಸಪಡುವಂತಾಗಿದೆ. ಇದರಿಂದ ಮುಕ್ತಿ ಯಾವಾಗ? ಎಂದು ಪರಸ್ಥಳದ ಪ್ರಯಾಣಿಕರು ಪ್ರಶ್ನಿಸುವಂತಾಗಿದೆ. ಸಾರಿಗೆ ವ್ಯವಸ್ಥೆ ಮತ್ತು ಪಾರ್ಕಿಂಗ್ ವ್ಯವಸ್ಥೆಗೆ ಸಂಬಂಧಿಸಿದವರ ವಿರುದ್ಧ ಜನರು ಆಕ್ರೋಶಗೊಳ್ಳುತ್ತಿದ್ದಾರೆ.

ಈ ಮೊದಲು ಬಳ್ಳಾರಿ ನಂತರ ದಾವಣಗೆರೆ ಪುನಃ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿದ್ದ ಹರಪನಹಳ್ಳಿ ತಾಲೂಕು ಪ್ರಸ್ತುತ ಹೊಸ ಜಿಲ್ಲೆಯಾದ ವಿಜಯನಗರ ಜಿಲ್ಲಾ ವ್ಯಾಪ್ತಿಗೆ ಬರುತ್ತದೆ. ಹರಪನಹಳ್ಳಿ ಪಟ್ಟಣ ಹರಿಹರ ಹಾಗೂ ದಾವಣಗೆರೆಯಿಂದ ಕೇವಲ 40 ಕಿ.ಮೀ ದೂರದಲ್ಲಿದೆ. ಈ ತಾಲೂಕಿನ ಸುತ್ತಲೂ ಐತಿಹಾಸಿಕ ಪ್ರಸಿದ್ಧ ಸ್ಥಳಗಳಿವೆ. ಸುಸಜ್ಜಿತವಾದ ರಸ್ತೆಗಳೂ ಇವೆ. ಆದರೆ ಪ್ರಯಾಣಿಕರಿಗೆ ಈ ಬಸ್ ತಂಗುದಾಣದಷ್ಟು ಕಿರಿಕಿರಿಯಾಗುವ ನಿಲ್ದಾಣ ಮತ್ತೊಂದಿಲ್ಲ ಎಂಬುವುದೂ ಸತ್ಯ. ತಂಗುದಾಣದಿಂದ ಬೇರೆಕಡೆಗೆ ವಾಹನಗಳು ಚಲಿಸಲೂ ಅವಕಾಶವಿಲ್ಲದಷ್ಟು ದ್ವಿಚಕ್ರ ವಾಹನಗಳು ಅಡ್ಡವಾಗಿ ಎಲ್ಲೆಂದರಲ್ಲಿ ನಿಲ್ಲುವ ವಾತಾವರಣ ಸೃಷ್ಟಿಯಾಗಿದೆ. ಸಾರಿಗೆ ಸಿಬ್ಬಂದಿ ಕಣ್ಣಿದ್ದು ಕುರುಡರಂತೆ ಇರುತ್ತಾರೆ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20250417 WA0006

ಸರಕಾರಿ ಸಾರಿಗೆ ವಾಹನ ಹೊರಡುವಾಗ ಅಡ್ಡ ನಿಲ್ಲುವ ಆಟೋ ಹಾಗೂ ಬೈಕ್‌ಗಳಿಗೆ ಜೋರಾಗಿ ಕರ್ಕಶ ಶಬ್ದ ಮಾಡಿದರೂ ತಿರುಗಿಯೂ ನೋಡದೇ ತಮ್ಮ ವಾಹನದ ಮೇಲೆ ಕುಳಿತು ಹರಟೆ ಹೊಡಿಯುತ್ತಾರೆ. ಇದರಿಂದ ಗ್ರಾಮೀಣ ಪ್ರದೇಶ ಪ್ರಯಾಣಿಕರಿಗೆ ಕಿರಕಿರಿವುಂಟಾಗುತ್ತದೆ. ಆದರೆ, ಯಾರೂ ಧ್ವನಿಯೆತ್ತಿ ದುಸರಾ ಮಾತಾಡುವುದಿಲ್ಲ. ಇಂತಹ ಅವ್ಯವಸ್ಥೆ ಸೃಷ್ಟಿಸುವ ದ್ವಿಚಕ್ರ ವಾಹನ ಮಾಲಿಕರಿಗೆ ದಂಡ ವಿಧಿಸುವ ಕ್ರಮವೂ ಜಾರಿಯಲ್ಲಿದೆ. ಕೆಎಸ್‌ಆರ್‌ಟಿಸಿ ಕೌಂಟರ್‌ಲ್ಲಿ ಇರುವ ಅಧಿಕಾರಿಗಳು ಅಡ್ಡಗೊಡೆಯಂತೆ ನಿಲ್ಲುವ ವಾಹನಗಳ ಮೇಲೆ ನಿಗಾ ಇಡುವುದೂ ದೂರದಮಾತು. ಅಡ್ಡ ನಿಲ್ಲಿಸುವ ಬೈಕ್ ಮಾಲೀಕರನ್ನು ಮಾತಾಡಿಸಲು ಭಯವೇನೋ ಎಂಬಂತೆ ಇರುತ್ತಾರೆ.

ಹೂವಿನಹಡಗಲಿ ಕಡೆಗೆ ಪ್ರಯಾಣಿಸುತ್ತಿದ್ದ ಶೇಖರ್ ನಾಯ್ಕ್ ಈದಿನ.ಕಾಂ ಜೊತೆಗೆ ಮಾತನಾಡಿ, ’ಓಡೋಡಿ ಬಂದು ಬಸ್ ಹತ್ತುವುದಕ್ಕೂ ಜಾಗವಿಲ್ಲದ ವಾತಾವರಣ ಇಲ್ಲಿ ಸೃಷ್ಟಿಯಾಗಿದೆ. ಕೆಎಸ್ಆರ್‌ಟಿಸಿ ಸಿಬ್ಬಂದಿಗಳಾದರೂ ಗಾಡಿ ಇಲ್ಲಿ ನಿಲ್ಲಿಸಬೇಡಿ ಅಂತ ಯಾರಿಗೂ ಹೇಳುವುದಿಲ್ಲ. ಇತ್ತ ಜನರೂ ಹಾಗೆಯೇ ಅವರಿಗೂ ಜವಾಬ್ದಾರಿ ಇಲ್ಲದಂತಾಗಿದೆ. ದಿನವೂ ಇದೇ ಕರ್ಮವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿ ಶಂಕರ ಮಾತನಾಡಿ, “ಬಸ್ ನಿಲ್ದಾಣ ನಗರದ ಮಧ್ಯ ಭಾಗದಲ್ಲಿದ್ದು, ಇಲ್ಲಿಗೆ ಮಾರ್ಕೆಟ್ ಸಮೀಪವಾಗುತ್ತದೆ. ವ್ಯಾಪಾರಕ್ಕೆಂದು ಬಂದವರು ಬಸ್ ನಿಲ್ದಾಣದಲ್ಲೇ ಟು-ವ್ಹಿಲರ್ ನಿಲ್ಲಿಸಿ ಹೋಗುತ್ತಾರೆ. ಇನ್ನು ಕಾಲೇಜು ವಿದ್ಯಾರ್ಥಿಗಳು ಬೈಕ್ ನಿಲ್ಲಿಸಿ ಕುಳಿತಿರುತ್ತಾರೆ. ಅವರಿಗೆ ಹೇಳಿದರೂ ಕಷ್ಟ, ಹೇಳದಿದ್ದರೂ ಕಷ್ಟವೆಂಬ ವಾತವಾರಣದಲ್ಲಿ‌ ನಾವು ಬದುಕುತ್ತಿದ್ದೇವೆ ಇದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಗದಗ | ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದು ಅಂಬೇಡ್ಕರ್ ಬರೆದ ಸಂವಿಧಾನ: ಸಚಿವ ಎಚ್ ಕೆ ಪಾಟೀಲ

ಈ ಕುರಿತು ಕೆಎಸ್ಆರ್‌ಟಿಸಿ ಸಿಬ್ಬಂದಿ ಹತ್ತಿರ ವಿಚಾರಿಸಿದಾಗ ನಮ್ಮ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು. ಇನ್ನಾದರೂ ಎಲ್ಲೆಂದರಲ್ಲಿ ನಿಲ್ಲುವ ದ್ವಿಚಕ್ರ ವಾಹನಗಳಿಗೆ ಕಡಿವಾಣ ಬೀಳುವುದೇ? ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವವರೇ? ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವರೇ? ಎಂಬುದು ಸಾರ್ವಜನಿಕರ ನಿರೀಕ್ಷೆ ಆಗಿದೆ.

IMG 20241219 WA0001
ಕೇಶವ ಕಟ್ಟಿಮನಿ
+ posts

ಕೃಷಿ, ಪುಸ್ತಕ ಓದುಗ,

ಫೀಲ್ಡ್ ಕೋರ್ಡಿನೇಟರ್,
ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಪೋಸ್ಟ್ ಹಂಚಿಕೊಳ್ಳಿ:

ಕೇಶವ ಕಟ್ಟಿಮನಿ
ಕೇಶವ ಕಟ್ಟಿಮನಿ
ಕೃಷಿ, ಪುಸ್ತಕ ಓದುಗ, ಫೀಲ್ಡ್ ಕೋರ್ಡಿನೇಟರ್, ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...