ವಿಜಯನಗರ ಜಿಲ್ಲೆ ಹೊಸಪೇಟೆ ಪಟ್ಟಣದ ಪರಿಶಿಷ್ಟ ಪಂಗಡದ(ಎಸ್‌ಟಿ) ಮೆಟ್ರಿಕ್ ಬಾಲಕಿಯರ ವಸತಿನಿಲಯದಲ್ಲಿ ಚಿಕನ್ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದ ಘಟನೆಗೆ ಸಂಬಂಧಿಸಿದ ಅವ್ಯವಸ್ಥೆ ಸರಿಪಡಿಸಬೇಕು ಎಂದು ಭೀಮ್ ಆರ್ಮಿ ರಾಜ್ಯ ಅಧ್ಯಕ್ಷ ರಘು ಸಿ ಅಗ್ರಹಿಸಿದರು.
ಸಂತ್ರಸ್ತ ವಿದ್ಯಾರ್ಥಿಗಳನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಮಾತನಾಡಿದ ಅವರು, “ಹಾಸ್ಟೆಲ್‌ನಲ್ಲಿ ರಾತ್ರಿ ಊಟದಲ್ಲಿ ಚಿಕನ್ ಊಟ ಸೇವಿಸಿದ ವಿದ್ಯಾರ್ಥಿನಿಯರಿಗೆ ಮಧ್ಯರಾತ್ರಿಯಲ್ಲಿ ಹೊಟ್ಟೆ ನೋವು, ವಾಂತಿ ಮತ್ತು ಅತಿಸಾರದ ಲಕ್ಷಣಗಳು ಕಾಣಿಸಿಕೊಂಡಿವೆ. ಬಳಿಕ ವಿದ್ಯಾರ್ಥಿಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಸೂಕ್ತ ಚಿಕಿತ್ಸೆ ನೀಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯನಗರ | ಚಿಕನ್ ಸೇವನೆ; 30ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥ
“ಪರಿಶಿಷ್ಟ ಪಂಗಡ ವಸತಿ ನಿಲಯದ ಅಧಿಕಾರಿ ಶಿವಕುಮಾರ್ ನಾಯ್ಕ ಅವರು ಸಮಸ್ಯೆ ಬಗೆಹರಿಸುವುದಾಗಿ ಸಂಘಟನೆಗೆ ತಿಳಿಸಿದ್ದಾರೆ” ಎಂದರು.
ಈ ಸಂದರ್ಭದಲ್ಲಿ ದಲಿತ ಮತ್ತು ಮೈನಾರಿಟಿ ಸೇನೆಯ ಜಿಲ್ಲಾಧ್ಯಕ್ಷ ಟಿಪ್ಪು ನವಾಜ್ ಇದ್ದರು.




