ವಿಜಯನಗರ | ಜಾತಿಭೇದ ತೊಲಗಬೇಕು, ಅಸ್ಪೃಶ್ಯತೆ ನಿವಾರಣೆ ಆದ್ಯ ಕರ್ತವ್ಯವಾಗಬೇಕು: ಶಾಸಕಿ ಲತಾ ಮಲ್ಲಿಕಾರ್ಜುನ

Date:

ಹರಪನಹಳ್ಳಿಯಲ್ಲಿ ಜಾತಿಭೇದ ತೊಲಗಬೇಕು, ಅಸ್ಪೃಶ್ಯತೆ ನಿವಾರಣೆ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದು ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ ಹೇಳಿದರು.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಬಳಿಯಿರುವ ಗುಳೇದಲಕ್ಕಮ್ಮ ದೇವಸ್ಥಾನದ ಅವರಣದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ/ಪಂಗಡ ದೌರ್ಜನ್ಯ ನಿಯಂತ್ರಣ ತಡೆ ಕಾಯಿದೆಯ ಜಾಗೃತಿ ಮೂಡಿಸುವ ಸಮಾರಂಭದಲ್ಲಿ ಮಾತನಾಡಿದರು.

“ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದವರಿಗೆ ಇರುವ ರಕ್ಷಣೆ ಮತ್ತು ಸರ್ಕಾರದ ಸೌಲಭ್ಯಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಸಾಂವಿಧಾನಿಕ ಮತ್ತು ಕಾನೂನಾತ್ಮಕ ಕ್ರಮಗಳ ಮೂಲಕ ಪ್ರಾಯೋಗಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸುತ್ತಿರುವಾಗ ಅನುಸರಿಸಿದ ಮೂಲ ನೀತಿಯೆಂದರೆ ಅಸ್ಪೃಶ್ಯರು ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕವಾಗಿ‌ ಮುನ್ನಲೆಗೆ ಬರಲು ಸಾಧ್ಯವಾಗುವಷ್ಟು ಪ್ರಗತಿ ಹೊಂದಬೇಕು. ಆಗ ಮಾತ್ರ ಅಸ್ಪೃಶ್ಯತೆ ನಿವಾರಣೆಯಾಗಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಾತಿ ಪದ್ಧತಿ, ಅಸ್ಪೃಶ್ಯತೆ ಜೀವಂತವಾಗಿರುವ ತನಕ ದೇಶದ ಸರ್ವತೋಮುಖ ಬೆಳವಣಿಗೆ ಅಸಾಧ್ಯ. ನಮ್ಮ ಮೈಯಲ್ಲಿ ಹರಿಯುವ ರಕ್ತ, ನಾವು ಕುಡಿಯುವ ನೀರು, ಉಸಿರಾಡುವ ಗಾಳಿ, ಜೀವಿಸುವ ನೆಲ ಎಲ್ಲವೂ ಒಂದೇ ಆಗಿದ್ದಾಗ ಮನುಷ್ಯರನ್ನು ಮಾತ್ರ ಜಾತಿಯ ಹೆಸರಿನಲ್ಲಿ ಪ್ರತ್ಯೇಕಿಸುವುದು ಸರಿಯಲ್ಲ. ಇಂದು ದೇಶದ ಬೆಳವಣಿಗೆಯಲ್ಲಿ ಹೆಚ್ಚಾಗಿ ಶ್ರೆಮ ಹಾಕುತ್ತಿರುವ ಕಾರ್ಮಿಕ ವರ್ಗದವರು ಇಂದು ಅಸ್ಪೃಶ್ಯತೆಯೆಂಬ ಹಣೆಪಟ್ಟಿ ಕಟ್ಟಿಕೊಂಡು ಬದುಕು ಸಾಗಿಸುತ್ತಿದ್ದಾರೆ” ಎಂದರು.

ತಾಲೂಕು ಸಮಾಜ ಕಲ್ಯಾಣಾಧಿಕಾರಿ ಗಂಗಪ್ಪ ಎಸ್ ಆರ್ ಮಾತನಾಡಿ, “ಅಸ್ಪೃಶ್ಯತೆ ನಿವಾರಣೆ ಸೇರಿದಂತೆ ಅಂಬೇಡ್ಕರ್ ಅವರ ವಿಚಾರಧಾರೆಗಳು, ಯೋಚನೆ, ಯೋಜನೆಗಳನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಬಹುದೊಡ್ಡ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ. ಅಸ್ಪೃಶ್ಯತೆ ನಿವಾರಣೆಗಾಗಿ ಹಲವು ಯೋಜನೆಗಳನ್ನು ತರಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಸ್ ನಿಲ್ದಾಣದಲ್ಲಿ ನೀರು ಸಂಗ್ರಹ; ಗಬ್ಬೆದ್ದ ನೀರಿನಿಂದ ಹೆಚ್ಚಿದ ಸೊಳ್ಳೆ ಕಾಟ

ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ‌ ವಿ ಗಿರೀಶ್ ಬಾಬು, ತಾ ಪಂ ಕಾರ್ಯನಿರ್ವಾಹಕ ಚಂದ್ರಶೇಖರ ವೈ ಹೆಚ್ ಪ್ರಕಾಶಗೌಡ, ಹೆಚ್ ಪಾಟೀಲ್, ಕುಬೇಂದ್ರನಾಯ್ಕ್, ಕಿರಣ್ ನಾಯ್ಕ್, ಪಿಎಸ್‌ಐ ರುದ್ರಪ್ಪ, ಉಮೇಶ್, ಬಿಇಒ ಲೇಪಾಕ್ಷಪ್ಪ, ಸಮಾಜ ಕಲ್ಯಾಣಾಧಿಕಾರಿ ಗಂಗಪ್ಪ ಎಸ್ ಆರ್, ಶಿವಕುಮಾರ್, ಬಿಸಿಎಂ ಅಧಿಕಾರಿ ಬೀಮಪ್ಪ, ಇಬ್ರಾಹಿಂ, ಹುಲಿಕಟ್ಟಿ ಚಂದ್ರಪ್ಪ, ಎಲ್ ಲಕ್ಷ್ಮಣನಾಯ್ಕ್, ಹಾಲೇಶ್ ನಾಯ್ಕ್, ಆಗ್ರಹಾರ ಅಶೋಕ, ಯಾಸ್ಮೀನ್ ಬಾನು, ರವಿಗೌಡ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...