ವಿಜಯನಗರ | ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ; ವಾರ್ಡನ್‌ ಅಮಾನತು

Date:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ದಿಢೀರ್ ಭೇಟಿ ನೀಡಿದ್ದಾರೆ. ಹಾಸ್ಟೆಲ್‌ನ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಬಂಡೇ ಬಸಾಪುರ ರಸ್ತೆ ತಾಂಡಾ ಬಳಿಯಿರುವ ವಸತಿ ನಿಲಯದಲ್ಲಿ ಮಕ್ಕಳಿಗೆ ಹಾಸಿಗೆ ನೀಡದೆ ಬೆಡ್ ಶೀಟ್ ಮೇಲೆ ಮಲಗಿಸಿರುವುದನ್ನು ಕಂಡು ಸಚಿವರು ಸಿಡಿಮಿಡಿಗೊಂಡರು. ಇದೇ ವೇಳೆ ಹಾಸ್ಟೆಲ್‌ ವಾರ್ಡನ್ ಗುರುರಾಜ್ (ಗುರಪ್ಪ) ಅವರನ್ನು ಸ್ಥಳದಲ್ಲೇ ಅಮಾನತು ಮಾಡಲು ಆದೇಶ ಮಾಡಿದರು.

ಸಚಿವರ ಭೇಟಿ ಸಂದರ್ಭದಲ್ಲಿ ತಾಲೂಕು ವಿಸ್ತರಣಾಧಿಕಾರಿ ಸುದೀಪ್ ಅವರು ಗೈರಾಗಿರುವ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿರುದ್ದವೂ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು. ಸುದೀಪ್ ಅವರಿಗೆ ನೊಟೀಸ್ ಜಾರಿ ಮಾಡುವುದಾಗಿ ಜಿಲ್ಲಾಧಿಕಾರಿ ದಿವಾಕರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮನರೇಗಾದಲ್ಲಿ ಅಕ್ರಮ‌ ಆರೋಪ; ನಿರ್ಲಕ್ಷ್ಯ ಅಧಿಕಾರಿಗಳ ಅಮಾನತಿಗೆ ಆಗ್ರಹ

ಸಚಿವ ಜಮೀರ್ ಅಹಮದ್ ಖಾನ್ ವಸತಿ ನಿಲಯದ ಆಹಾರ ದಾಸ್ತಾನು ಕೊಠಡಿಗೆ ತೆರಳಿ ಪರಿಶೀಲನೆ ನಡೆಸಿ, ವಸತಿ ನಿಲಯದ ವಿದ್ಯಾರ್ಥಿಗಳ ಬಳಿ ಊಟ ತಿಂಡಿ ಇತರೆ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...