ವಿಜಯನಗರ | ಕಲುಷಿತ ನೀರು ಸೇವನೆ; 13ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Date:

ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣವು ಮುಂದುವರಿದಿದ್ದು, ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 13ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ಗ್ರಾಮದಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆದಿರುವ ಸಂಬಂಧ ಕುಡಿಯುವ ನೀರಿನ ಪೈಪುಗಳು ಒಡೆದಿದ್ದು, ಚರಂಡಿ ನೀರು ಮಿಶ್ರಣವಾಗಿರುವ ಪರಿಣಾಮ ಕಲುಷಿತ ನೀರು ಸೇವಿಸಿದ ಗ್ರಾಮಸ್ಥರಿಗೆ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ಕೂಡ್ಲಿಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

“ತಾಲೂಕು ಆಡಳಿತ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ನೀರು ಸರಬರಾಜು  ಮಾಡುವ ಸಿಬ್ಬಂದಿ ಕಾಳಜಿ ವಹಿಸುವುದಿಲ್ಲ. ಗ್ರಾಮಸ್ಥರ ಆರೋಗ್ಯದೊಂದಿಗೆ ಆಟವಾಡುತ್ತಿದ್ದಾರೆ” ಎಂದು ದೊಡ್ಡ ಗೊಲ್ಲರಹಟ್ಟಿ ಗ್ರಾಮಸ್ಥರ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಪ್ಪಿನಕೆರೆ ಗ್ರಾಮದ ಪಕ್ಕದ ರಸ್ತೆಯ ಹಳ್ಳ ಹಾಗೂ ಕಟ್ಟೆ ಬಳಿ ಮೂರ್ನಾಲ್ಕು ಕಡೆ ಪೈಪ್ ಒಡೆದಿದೆ. ಕಳೆದೆರಡು ದಿನದಿಂದ ಬಡೇಲಡಕು ದೊಡ್ಡಗೊಲ್ಲರಹಟ್ಟಿ ಗ್ರಾಮಕ್ಕೆ ಕಲುಷಿ ನೀರು ಸರಬರಾಜು ಆಗಿದ್ದು, ನೀರನ್ನು ಕುಡಿದಿದ್ದ ಗ್ರಾಮಸ್ಥರಲ್ಲಿ ವಾಂತಿಭೇದಿ ಶುರುವಾಗಿದೆ” ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯುವನಿಧಿ | ಕನಿಷ್ಠ 5 ವರ್ಷಗಳ ನಿರುದ್ಯೋಗಿಗಳಿಗೂ ಯೋಜನೆ ಅನ್ವಯಿಸಲು ಒತ್ತಾಯ

ಸದ್ಯ ಕಲುಷಿತ ನೀರಿನ ಮಾದರಿಯನ್ನು ಬಳ್ಳಾರಿ ಪರೀಕ್ಷಾ ಕೇಂದ್ರಕ್ಕೆ ರವಾನೆ ಮಾಡಲಾಗಿದೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರನ್ನು ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...