ವಿಜಯನಗರ | ಸೌಜನ್ಯ ಪ್ರಕರಣದ ಪುನರ್‌ ತನಿಖೆಗೆ ಡಿವೈಎಫ್‌ಐ ಆಗ್ರಹ

Date:

ಧರ್ಮಸ್ಥಳದಲ್ಲಿ ನಡೆದ ಸೌಜನ್ಯಳ ಸಾವಿನ ಪ್ರಕರಣ ಪುನರ್‌ ತನಿಖೆಯಾಗಬೇಕು ಹಾಗೂ ರಾಜ್ಯದ ಅಹಸಜ ಸಾವುಗಳು ಬಗ್ಗೆ ಶೀಘ್ರವಾಗಿ ತನಿಖೆಯಾಗಬೇಕು ಎಂದು ಆಗ್ರಹಿಸಿ ಹೊಸಪೇಟೆಯ ಡಿವೈಎಫ್‌ಐ ಹಾಗೂ ಎಸ್‌ಎಫ್‌ಐ ಪ್ರತಿಭಟನೆ ನಡೆಸಿ ಆಗ್ರಹಿಸಿದವು.

ನಗರದ ಪುನೀತ್ ರಾಜಕುಮಾರ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು, “11 ವರ್ಷದ ಹಿಂದೆ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಸಂಬಂಧಿಸಿದಂತೆ ಅಮಾಯಕ ಸಂತೋಷ ಎಂಬ ವ್ಯಕ್ತಿಯನ್ನು ಬಂಧಿಸಿದ್ದರು, ಸಾಕ್ಷಿಗಳ ಕೊರತೆಯಿಂದ‌ ಸಂತೋಷನನ್ನು ನ್ಯಾಯಾಲಯ ಬಿಡುಗಡೆ ಮಾಡಿತು. ಆದರೆ ನಿಜವಾದ ಆರೋಪಿ ಯಾರು ಎಂದು ಇದವರೆಗೂ ಪತ್ತೆ ಹಚ್ಚದೇ ಇರುವುದು ಪೋಲೀಸ್ ಇಲಾಖೆಗೆ ಹಾಗೂ ಸರಕಾರಗಳಿಗೆ ನಾಚಿಗೇಡಿನ ಸಂಗತಿ. ಆಡಳಿತ ಸರ್ಕಾರವು ಈಗಲಾದರೂ ಎಚ್ಚೆತ್ತುಕೊಂಡು ಕೂಡಲೆ ಸೌಜನ್ಯ ಸಾವಿಗೆ ನ್ಯಾಯ ಒದಗಿಸಬೇಕು. ಪದ್ಮಲತಾ, ವೇದಾವತಿ, ಹಾಗೂ ಯಾದಗಿರಿಯಲ್ಲಿ ಪೇಪರ್ ಆಯವಂತ ಇಬ್ಬರು ಬಾಲಕಿಯರ ಪ್ರಕರಣ ಸೇರಿದಂತೆ ರಾಜ್ಯದ ಅಹಸಜ ಸಾವುಗಳ ಪ್ರಕರಣಗಳನ್ನು ಕೂಡಲೇ ತನೆಖೆಗೆ ಒಳಪಡಿಸಬೇಕು. ತ್ವರಿತವಾಗಿ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

WhatsApp Image 2025 03 08 at 8.28.50 AM

ಸೌಜನ್ಯ ಪ್ರಕರಣ ಕುರಿತು ಸವಿವರವಾಗಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಅವರಿಗೆ ‌ಬರುತ್ತಿರುವ ಕಾಣದ ಕೈಗಳ ಬೆದರಿಕೆ ಕರೆಗಳು ನಿಲ್ಲಬೇಕು ಮತ್ತು ಬೆದರಿಕೆ ಹಾಕಿದವರುನ್ನು ಕೂಡಲೆ ಬಂಧಿಸಿಬೇಕು. ಸೌಜನ್ಯ ನ್ಯಾಯಕ್ಕಾಗಿ ಯಾರೆಲ್ಲ ಹೋರಾಟ ಮಾಡುತ್ತಿದ್ದಾರೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಧ್ವನಿ ಎತ್ತುವರಿಗೆಲ್ಲ ಸರ್ಕಾರವು ರಕ್ಷಣೆ ನೀಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯನಗರ | ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದಿಂದ ವಿಚಾರ ಸಂಕಿರಣ

ಡಿವೈಎಫ್‌ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈಡಿಗರ ಮಂಜುನಾಥ, ಎಸ್‌ಎಫ್‌ಐ ಕಾರ್ಯದರ್ಶಿ ಶಿವಾ ರೆಡ್ಡಿ, ಡಿವೈಎಫ್‌ಐ ಅಧ್ಯಕ್ಷ ಸ್ವಾಮಿ, ಎಸ್‌ಎಫ್‌ಐ ಅಧ್ಯಕ್ಷೆ ಲಕ್ಷ್ಮೀ, ಪವನ್, ಅಲ್ತಾಫ್, ಸುಧಾಕರ್, ಲಕ್ಷ್ಮೀ ಎಸ್, ಮಂಜುನಾಥ್ ಹಾಗೂ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...