ವಿಜಯನಗರ | ರೈತರ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ರೈತ ಸಂಘ ಆಗ್ರಹ

Date:

ರೈತರ ಸಮಸ್ಯೆ ಹಾಗೂ ನಾನಾ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ಬಗೆಹರಿಸಬೇಕು ಹಾಗೂ ವಿಜಯನಗರ ತಹಶೀಲ್ದಾರರು ಹಾಗೂ ಜಿಲ್ಲಾ ಎಪಿಎಂಸಿ ಕಾರ್ಯದರ್ಶಿಗಳ ಸಮಕ್ಷಮದಲ್ಲಿ ಸಭೆ ಕರೆಯಬೇಕು ಎಂದು ರಾಜ್ಯ ರೈತ ಸಂಘ ಆಗ್ರಹಿಸಿದೆ.

ಹೂವಿನಹಡಗಲಿ ತಾಲೂಕಿನ ರೈತರ ಸಮಸ್ಯೆಗಳನ್ನು ಚರ್ಚಿಸಲು ತಹಶೀಲ್ದಾರ ಹಾಗೂ ಎಪಿಎಂಸಿ ಕಾರ್ಯದರ್ಶಿ ಸಹಯೋಗದಲ್ಲಿ ಸಬೆ ಕರೆಯಬೇಕೆಂದು ತಾಲೂಕು ದಂಡಾಧಿಕಾರಿ ಸಂತೋಷ ಕುಮಾರ್ ಹಾಗೂ ಎಪಿಎಂಸಿ ಕಾರ್ಯದರ್ಶಿ ತಿಮ್ಮಪ್ಪ ನಾಯಕ್ ಅವರಿಗೆ ಮನವಿ ಸಲ್ಲಿಸಿದರು.

“ಜಿಲ್ಲೆಯಲ್ಲಿ ಖರೀದಿ ಕೇಂದ್ರ ತೆರೆದಿರುವುದಿಲ್ಲ ಯಾಕೆ? ತೆರೆಯಲು ರೈತರು ಯಾರನ್ನು ಸಂಪರ್ಕಿಸಬೇಕು? ಈಗಾಗಲೇ ತಾಲೂಕಿನ ಪ್ರತಿ ಹಳ್ಳಿಗಳಲ್ಲಿ ವರ್ತಕರು ರೂ.1800/-ರಿಂದ ರೂ.1850 ಗಳವರೆಗೆ ಮೆಕ್ಕೆಜೋಳ ಖರೀದಿ ಮಾಡುತ್ತಿದ್ದಾರೆ. ಜೊತೆಗೆ 50 ಕೆಜಿ ಬ್ಯಾಗಿನ ಚೀಲಕ್ಕೆ 52.5 ಗ್ರಾಂ ತೂಕ ಮಾಡಿ 50 ಕೆಜಿ ಮಾತ್ರ ಬಿಲ್ಲು ಮಾಡುತ್ತಾರೆ. ವರ್ತಕರು ಎಪಿಎಂಸಿ ನಿಯಮದಂತೆ ಮಾಡುತ್ತಿಲ್ಲ ಅಥವಾ ನಿಯಮ ಮೀರಿ ಮಾಡುತ್ತಿದ್ದಾರೆಯೆ ಎಂಬುದನ್ನು ನಾವು ಪತ್ತೆಹಚ್ಚಿ ತಮ್ಮ ಗಮನಕ್ಕೆ ತರುತ್ತೇವೆ. ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸಿಕೊಳ್ಳಬೇಕು. ಇದರಿಂದ ರೈತ ವಿರೋಧಿಗಳಿಗೆ ಭಯ ಹುಟ್ಟುತ್ತದೆ. ಎಲ್ಲಾ ರೈತರ ಸಮಸ್ಯೆಗಳಿಗೆ ಉತ್ತರ ನೀಡಲು, ರೈತರಿಗೆ ಸಮಗ್ರ ಮಾಹಿತಿ ನೀಡಲು ಎಪಿಎಂಸಿ, ಡಿ.ಡಿ. ಯವರ ಅಧ್ಯಕ್ಷತೆಯಲ್ಲಿ 08 ದಿನದೊಳಗೆ ತಹಶೀಲ್ದಾರರು ಹಾಗೂ ಎಪಿಎಂಸಿ ಕಾರ್ಯದರ್ಶಿಗಳು ರೈತರ ಸಮ್ಮುಖದಲ್ಲಿ ಸಭೆಯನ್ನು ಕರೆಯಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯನಗರ | ಮುಂದಿನ ಜನಾಂಗಕ್ಕೆ ಕನ್ನಡ ತಲುಪಿಸುವುದೂ ನಮ್ಮ ಜವಾಬ್ದಾರಿ: ಕುಲಪತಿ ಪರಮಶಿವಮೂರ್ತಿ

ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ ಗೋಣಿಬಸಪ್ಪ, ತಾಲ್ಲೂಕು ರೈತ ಸಂಘದ ಅಧ್ಯಕ್ಷರು ಸಿದ್ದಪ್ಪ ಹೊಸಮನಿ, ತಾಲೂಕು ಉಪಾಧ್ಯಕ್ಷರು ವಿಠಲನಾಯ್ಕ ಕೆಕೆ, ತಂಡದ ಗೌರವಾಧ್ಯಕ್ಷ ದೇವೇಂದ್ರಪ್ಪ, ಕಾರ್ಯ ಅಧ್ಯಕ್ಷರು ಮಂಜು ನಾಯಕ್, ಸಂಘಟನಾ ಕಾರ್ಯದರ್ಶಿ ಗಿರೀಶ್ ಕೆಕೆ ತಾಂಡ, ಪ್ರಧಾನ ಕಾರ್ಯದರ್ಶಿ ಶಿವರಾಜ್ ಎಂ ಹೊಳಗುಂದಿ, ಬಸವರಾಜ್ ರಾಜವಾಳ, ದವಲ ಸಾಬ್, ವೆಂಕಟೇಶ್ ನಾಯಕ್, ಕುಬ್ಯ ನಾಯಕ್, ಶೇಖರ್ ನಾಯಕ್, ದುರ್ಗಪ್ಪ, ಕೋಟೆಪ್ಪ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...