ವಿಜಯನಗರ | ಎರಡು ಕಡೆ ಕುರಿ ಹಟ್ಟಿಗಳಿಗೆ ಬೆಂಕಿ; 55 ಮೇಕೆ, ಎರಡು ಟಗರು ಸಾವು

Date:

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುರಿ ಹಟ್ಟಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, 55 ಮೇಕೆ, ಎರಡು ಟಗರು ಸುಟ್ಟು ಭಸ್ಮವಾಗಿವೆ.

ಗ್ರಾಮದ ಹೊರವಲಯದಲ್ಲಿ ಮಡಿವಾಳರ ಶೇಖರಪ್ಪ ಮತ್ತು ನಾಯಕರ ಗಿರಿಜಮ್ಮನವರು ಕುರಿಗಳಿಗಾಗಿ ಎರಡು ಪ್ರತ್ಯೇಕ ಹಟ್ಟಿ ಕಟ್ಟಿಕೊಂಡಿದ್ದರು. ಒಂದು ಹಟ್ಟಿಯಲ್ಲಿದ್ದ ಮಡಿವಾಳರ ಶೇಖರಪ್ಪನಿಗೆ ಸೇರಿದ 40 ಮೇಕೆ ಮರಿಗಳು ಹಾಗೂ ಮತ್ತೊಂದು ಹಟ್ಟಿಯಲ್ಲಿದ್ದ ಗಿರಿಜಮ್ಮನಿಗೆ ಸೇರಿದ 15 ಮೇಕೆಮರಿ 2 ಟಗರು ಬೆಂಕಿಯಲ್ಲಿ ಸಜೀವ ದಹನವಾಗಿವೆ ಎಂದು ಗ್ರಾಮದ ಮುಖಂಡರು ತಿಳಿಸಿದರು.

“ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಸಾಧ್ಯತೆ ಇದ್ದು, ಬೆಂಕಿ ಹೊತ್ತಿಕೊಂಡಿರುವ ಕಾರಣ ತಿಳಿಯುವ ಪ್ರಯತ್ನ ನಡೆದಿದೆ” ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಗಳೂರು | ಪಣಂಬೂರು ಪೊಲೀಸ್ ಠಾಣೆಗೆ ಎಆರ್‌ಕೆ ಶಾಲಾ ವಿದ್ಯಾರ್ಥಿಗಳ ಭೇಟಿ: ಪೊಲೀಸ್ ವ್ಯವಸ್ಥೆ ಬಗ್ಗೆ ಪ್ರಾಯೋಗಿಕ ಪಾಠ

ಕೂಡ್ಲಿಗಿ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ತಹಶೀಲ್ದಾರ್ ಎಂ ರೇಣುಕಾ, ಕಾನಹೊಸಹಳ್ಳಿ ಎಎಸ್‌ಐ ಜಿಲಾನ್, ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕ ಡಾ ಲೋಹಿತ್, ಶಾಸಕರ ಆಪ್ತ ಸಹಾಯಕ ಮರುಳಸಿದ್ದಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

ವೈಯಕ್ತಿಕ ಸಹಾಯದ ಜತೆಗೆ ಸರ್ಕಾರದಿಂದ ನೀಡುವಂತಹ ಪರಿಹಾರವನ್ನು ಕೊಡಿಸುವ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...