ವಿಜಯನಗರ | ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆರ್ಥಿಕ ಕೊಡುಗೆ ಅನನ್ಯ: ಸುರೇಶ್ ಅಂಗಡಿ

Date:

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅನನ್ಯ. ಅವರ ಆರ್ಥಿಕ ಕೊಡುಗೆಯನ್ನು ಎಂದಿಗೂ ಮರೆಯುವಂತಿಲ್ಲ. ಅವರು ಪುಸ್ತಕ ಪ್ರೇಮಿಯಾಗಿದ್ದು, ಅಘಾದ ಜ್ಞಾನವನ್ನು ಹೊಂದಿದ್ದರು ಎಂದು ಮುಖ್ಯ ಶಿಕ್ಷಕ ಸುರೇಶ್ ಅಂಗಡಿ‌ ಸ್ಮರಿಸಿದರು.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ಸರ್ಕಾರಿ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಅಲ್ಪಸಂಖ್ಯಾತರ ಸಿಖ್ ಸಮುದಾಯದ ಮನಮೋಹನ್ ಸಿಂಗ್ ಅವರು ಪ್ರಧಾನಿ ಹುದ್ದೆ ಅಲಂಕರಿಸಿದ್ದು ಅವಿಸ್ಮರಣೀಯ. ಅವರು ದೇಶ ಕಂಡ ಅತ್ಯಂತ ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದು, ಅವರು ಪ್ರಧಾನಿಯಾಗಿದ್ದ ಹತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆ ಸುಧಾರಣೆಯಾಗಿ ಜಗತ್ತಿನ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಭಾರತ ಐದನೇ ಸ್ಥಾನದಲ್ಲಿತ್ತು. ಒಂದು ಸಂದರ್ಭದಲ್ಲಿ ಅಮೆರಿಕಾ ಅಧ್ಯಕ್ಷರಾಗಿದ್ದ ಬರಾಕ್ ಒಬಾಮ ಅವರು ಅಮೆರಿಕಾ ಆರ್ಥಿಕ ಸುಧಾರಣೆಗೆ “ಸಿಂಗ್” ಅವರ ಸಲಹೆ ಪಡೆಯುತ್ತಿದ್ದುದ್ದಾಗಿ ಒಬಾಮಾ ಅವರೇ ಹೇಳಿಕೊಂಡಿದ್ದಾರೆ” ಎಂದು ಶಿಕ್ಷಕರು ಗುಣಗಾನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೆಹರು, ಇಂದಿರಾಗಾಂಧಿ, ಅವರಂತೆ ಬಡಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತಂದವರು ಮನಮೋಹನ್‌ ಸಿಂಗ್.‌ ಪ್ರಧಾನಿ ಪಿ ವಿ ನರಸಿಂಹರಾವ್ ಅವಧಿಯಲ್ಲಿ ಹಣಕಾಸು ಸಚಿವರಾಗಿ ದೇಶದ ಆರ್ಥಿಕ ಅಭಿವೃದ್ಧಿಗೆ ಶ್ರಮಿಸಿದ ಮಹಾನ್ ಸಾಧಕರು. ಮನರೇಗಾ(ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ) ಅನುಷ್ಠಾನ, ಆಧಾರ್ ಕಾರ್ಡ್ ಜಾರಿ ಸೇರಿದಂತೆ ವಿವಿಧ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು” ಎಂದು ಸ್ಮರಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಭ್ರೂಣಹತ್ಯೆ ನಡೆಯುತ್ತಿದ್ದರೂ ವೈದ್ಯಾಧಿಕಾರಿಗಳ ನಿರ್ಲಕ್ಷ್ಯ: ಡಿವೈಎಫ್‌ಐ ಅರೋಪ

“ಮನಮೋಹನ್ ಸಿಂಗ್ ಓರ್ವ ಪುಸ್ತಕ ಪ್ರೇಮಿ, ಖಾದ್ಯ ಪ್ರಿಯರು. ಅವರಲ್ಲಿ ಇದ್ದಂತಹ ಸಹನೆ, ತಾಳ್ಮೆ, ಸತತ ದುಡಿಮೆ
ಮೊದಲಾದ ಒಳ್ಳೆಯ ವಿಚಾರಗಳನ್ನು ಮಕ್ಕಳು ಅನುಸರಿಸಬೇಕು” ಎಂದು ಹೇಳಿದರು.

ಶಿಕ್ಷಕರಾದ ಸ್ವಾಮಿನಾಥ ರಾಮಸ್ವಾಮಿ, ಬಸಪ್ಪ ಕೆ ಲಂಬಾಣಿ, ಗಿಡ್ಡನಾಯ್ಕ್ ಪ್ರತಿಮಾ, ಎನ್ ಗೀತಾ, ಪಿ ಎಂ ರೇಖಾ, ಎಸ್ ಸಂಗಮೇಶ, ಸುಂಕದ ಪ್ರಸಾದ್, ಸಂತೋಷ ಕುಮಾರ್ ಎಸ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...