ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಡಾ. ನಾಗೇಂದ್ರ ಮಾರ್ಗದರ್ಶನದಲ್ಲಿ ʼಕರ್ನಾಟಕದಲ್ಲಿ ಕನ್ನಡದ ಮೊದಲನೇ ಸೈಬರ್ ಅಪರಾಧಗಳ ಜಾಗೃತಿ, ತನಿಖಾ ಮಹಾಪ್ರಬಂಧʼಕ್ಕೆ ಗಿರೀಶ್ ಕುಮಾರ್ ಜಿ ಪಿಎಚ್‌ಡಿ ಪಡೆದುಕೊಂಡಿದ್ದಾರೆ.
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ನಂಬರ್1 ಇಟಿಗಿ ಗ್ರಾಮದ, ನಿವೃತ್ತ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಗೌಡ್ರು ದೊಡ್ಡ ಹನುಮಂತಪ್ಪ ಮತ್ತು ನಾಗರತ್ನ ದಂಪತಿಗಳ ಮಗನಾದ ಗಿರೀಶ್ ಕುಮಾರ್ ಜಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ನೀಡಲಾಯಿತು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸರ್ಕಾರಿ ವಿಜ್ಞಾನ ಕಾಲೇಜು ಉಳಿಸಿ: ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
“ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ತುಮಕೂರಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ನಾಗೇಂದ್ರ ಅವರ ಮಾರ್ಗದರ್ಶನದಲ್ಲಿ ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್ ಅಪರಾಧಗಳ ಪ್ರತಿನೀಧಿಕರಣ(ಬಳ್ಳಾರಿ ಜಿಲ್ಲೆಯ ಅನುಲಕ್ಷಿಸಿ) ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಲಾಗಿದೆ ” ಎಂದು ಕನ್ನಡ ವಿಶ್ವವಿದ್ಯಾಲಯ ಕುಲಸಚಿವ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಅಧಿಸೂಚನೆ ಹೊರಡಿಸಿದ್ದಾರೆ.





