ವಿಜಯನಗರ | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಲಾರಿ ಚಾಲಕನ ಮಗಳು ರಾಜ್ಯಕ್ಕೆ ಪ್ರಥಮ

Date:

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜಯನಗರ ಜಿಲ್ಲೆಯ ವಿದ್ಯಾರ್ಥಿನಿ ಸಂಜನಾಬಾಯಿ ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆ ಹಾಗೂ ಹೊಸಪೇಟೆಗೆ ಗೌರವ ತಂದಿದ್ದಾಳೆ.

ಸಂಜಾನಾ ಹೊಸಪೇಟೆ ತಾಲೂಕಿನ ಗುಂಡಾ ಸ್ಟೇಷನ್ ಎಂಬ ಪುಟ್ಟ ಗ್ರಾಮದ ಲಾರಿ ಚಾಲಕ ಎಲ್ ಕೆ ರಾಮ್ ನಾಯ್ಕ್ ಅವರ ಮಗಳು ಸಂಜನಾ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಾಗಲೂ ಮುಂದಿದ್ದಳು. ಮರಿಯಮ್ಮನಹಳ್ಳಿ ಪ್ರಿಯದರ್ಶಿನಿ ಬಾಲಕಿಯರ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಶೇ.93.5 ಉತ್ತಮ ಅಂಕ ಪಡೆದು ಇಡೀ ಪ್ರೌಢ ಶಾಲೆಗೆ ಉತ್ತಮ ಅಂಕ ಗಳಿಸಿದ್ದಳು.

ಹೊಸಪೇಟೆಯ ಗುಂಡಾ ಸ್ಟೇಷನ್ ‌30 ಮನೆಗಳ ಪುಟ್ಟ ಗ್ರಾಮ. ಈ ಗ್ರಾಮದಲ್ಲಿ ತಂದೆಯ ಬಳಿಯಿದ್ದ ಅಲ್ಪ ಆಸ್ತಿಯನ್ನೂ ಕೂಡಾ ಬಿಎಮ್‌ಎಮ್ ಕಾರ್ಖಾನೆ ಕಬಳಿಸಿದೆ. ಕೂಗಳತೆಯ ದೂರದಲ್ಲಿರುವ ಕಾರ್ಖಾನೆಯ ಕರ್ಕಶ ಶಬ್ದಕ್ಕೆ ಮಗಳಿಗೆ ತೊಂದರೆಯಾಗಬಾರದೆಂದು ಹಾಸ್ಟೆಲ್‌ಗೆ ಸೇರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಓದುವುದರಲ್ಲಿ ಮುಂದಿದ್ದ ಮಗಳನ್ನು ಪ್ರಥಮ ಪಿಯು ವಿದ್ಯಾಭ್ಯಾಸಕ್ಕಾಗಿ ಕೊಟ್ಟುರಿನ ಪದವಿ ಪೂರ್ವ ಕಾಲೇಜಿಗೆ ಸೇರಿಸಿದ್ದರು. ಬಾಲಕಿಯರ ವಸತಿನಿಲಯದಲ್ಲಿದ್ದುಕೊಂಡು ಓದಿದ ವಿದ್ಯಾರ್ಥಿನಿ ಇದೀಗ ಶೇ.99.5ರಷ್ಟು ಅಂಕ ಪಡೆದು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿ ಕಾಲೇಜಿನ ಶುಲ್ಕದಲ್ಲಿ ರಿಯಾಯಿತಿ ಪಡೆದಿದ್ದಾಳೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಗುಡುಗು ಸಹಿತ ಭಾರೀ ಮಳೆ; ನೆಲಕ್ಕರುಳಿದ ತೆಂಗಿನ ಮರ, ವಿದ್ಯುತ್‌ ತಂತಿ

ವಿದ್ಯಾರ್ಥಿನಿ ಎಲ್ ಆರ್ ಸಂಜನಬಾಯಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಮ್ಮ ಮನೆಯ ಆರ್ಥಿಕ ಸ್ಥಿತಿ ಅಷ್ಟೊಂದು ಸರಿಯಿಲ್ಲ. ನಮ್ಮ ಅಪ್ಪ ಒಬ್ಬ ಲಾರಿ ಡ್ರೈವರ್. ಅವರಿಗೆ ಇನ್ನೂ ಹೊರೆಯಾಗಲಾರೆ. ನನ್ನ ಈ ಉತ್ತಮ ಅಂಕದಿಂದ ಒಂದು ಸರ್ಕಾರಿ ಕೆಲಸ ಪಡೆದು ನಮ್ಮನೆ ಆರ್ಥಿಕ ಸ್ಥಿತಿ ಸುಧಾರಿಸುತ್ತೇನೆ. ಅದರ ಜತೆಗೆ ಕೆಎಎಸ್ ಹಾಗೂ ಯುಪಿಎಸ್‌ಸಿ ಕಟ್ಟಿ ಪಾಸ್ ಆಗಿ ಉನ್ನತ ಅಧಿಕಾರಿಯಾಗುವ ಆಸೆಯೂ ಇದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...