ಹಗರಿ ಬೊಮ್ಮನಹಳ್ಳಿ | ಪತ್ನಿಯ ಪ್ರಿಯಕರನನ್ನು ಕೊಲೆಗೈದ ಬಳಿಕ ಪೊಲೀಸರಿಗೆ ಶರಣಾದ ಆರೋಪಿ

Date:

ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಹಾಡಹಗಲೇ ಪತ್ನಿಯ ಪ್ರಿಯಕರನನ್ನು ಪತಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಹಗರಿ ಬೊಮ್ಮನಹಳ್ಳಿ ತಾಲೂಕಿನ ಚೀಲಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಯುವಕನನ್ನು ಬಸವರಾಜ್ ಎಂದು ಗುರುತಿಸಲಾಗಿದೆ. ಚಿಲುಗೋಡು ಗ್ರಾಮದ ಬಸರಕೋಡು ಫಕೀರಸ್ವಾಮಿ ಕೊಲೆಗೈದ ಆರೋಪಿ.

ತನ್ನ ಪತ್ನಿಯೊಂದಿಗೆ ಬಸವರಾಜ್ ಅನೈತಿಕ ಸಂಬಂಧ ಹೊಂದಿದ್ದ ಎನ್ನುವ ಕಾರಣಕ್ಕೆ ಕೊಡಲಿಯಿಂದ ಕುತ್ತಿಗೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲೆಗೀಡಾದ ಬಸವರಾಜ್ ಮನೆಯೊಂದರಲ್ಲಿ ಟ್ರ್ಯಾಕ್ಟರ್ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಫಕೀರಸ್ವಾಮಿಯ ಪತ್ನಿಯ ಪರಿಚಯವಾಗಿದೆ. ಈ ಪರಿಚಯವೇ ಪ್ರೀತಿಗೆ ತಿರುಗಿತ್ತು.ಇವರಿಬ್ಬರ ಪ್ರೀತಿಯ ವಿಚಾರ ಕುಟುಂಬದವರಿಗೆ ತಿಳಿದ ಬಳಿಕ, ಇಬ್ಬರನ್ನೂ ಕರೆದು ಬುದ್ಧಿವಾದ ಹೇಳಿದ್ದರು ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಬೀದರ್‌ | ʼವಚನ ದರ್ಶನ’ ಕೃತಿಯಿಂದ ಬಸವಣ್ಣನವರಿಗೆ ಅಪಚಾರ : ಸಾಣೇಹಳ್ಳಿ ಶ್ರೀ

ಈ ನಡುವೆ ಕೆಲವು ದಿನಗಳ ಹಿಂದೆ, ಬಸವರಾಜ್ ಹಾಗೂ ಫಕೀರಸ್ವಾಮಿಯ ಪತ್ನಿ ನಾಪತ್ತೆಯಾಗಿದ್ದರು. ಬಳಿಕ ಅವರನ್ನು ಪತ್ತೆ ಹಚ್ಚಿ, ಊರಿನ ಹಿರಿಯ ಮುಖಂಡರು ಸೇರಿ ಕರೆಸಿ ಸಂಧಾನ ಮಾಡಿದ್ದರು ಎನ್ನಲಾಗಿದೆ. ಆದರೂ ಇವರಿಬ್ಬರೂ ಮತ್ತೆ ಸಂಪರ್ಕವಿಟ್ಟುಕೊಂಡಿದ್ದರಿಂದ ಆಕ್ರೋಶಗೊಂಡ ಮಹಿಳೆಯ ಪತಿ ಫಕೀರಸ್ವಾಮಿ, ಬಸವರಾಜ್‌ನನ್ನು ಕೊಲೆ ಮಾಡಿದ್ದಾನೆ. ಆ ಬಳಿಕ ತಾನೇ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಹಗರಿ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಕೊಲೆಗೈದಿರುವ ಆರೋಪಿಯನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...