ವಿಜಯನಗರ | ಮನರೇಗಾ ಯೋಜನೆ; ಸಮರ್ಪಕ ಅನುಷ್ಠಾನಕ್ಕೆ ‘ಗ್ರಾಕೂಸ’ ಒತ್ತಾಯ

Date:

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯನ್ನು ಸಮರ್ಪಕ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಗ್ರಾಕೂಸ ಮುಖಂಡರು ವಿಜಯನಗರ ಜಿಲ್ಲೆಯ ಮರಬ್ಬಿಹಾಳು, ಮಾಲವಿ, ಬನ್ನಿ ಕಲ್ಲು ಹಾಗೂ ಬಳ್ಳಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

“ಮನರೇಗಾ ಯೋಜನೆಯಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಪರಿಹಾರ ಇಲ್ಲದೆ ಹೈರಾಣಾಗುತ್ತಿದ್ದೇವೆ. ಹಾಗಾಗಿ ಪ್ರತಿ ಸಮಸ್ಯೆಗೂ ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಬಗೆಹರಿಸಬೇಕು. ಇಲ್ಲವೇ ಪರಿಹಾರ ಬಗೆಹರಿಸಲು ಸ್ಥಳೀಯ ಸರ್ಕಾರ ಗ್ರಾಮ ಪಂಚಾಯಿತಿಗೆ ಅಧಿಕಾರ ಕೊಡಬೇಕು” ಎಂದು ಆಗ್ರಹಿಸಿದರು.

“ಹಳೆ ಉದ್ಯೋಗ ಚೀಟಿ(ಜಾಬ್ ಕಾರ್ಡ್) ರದ್ದು ಮಾಡಿ ಹೊಸ ಜಾಬ್ ಕಾರ್ಡ್ ನೀಡುವುದು, ಆಧಾರ್ ಕಾರ್ಡ್ ಲಿಂಕ್ ಮಾಡುವುದು, ಇನ್ನಿತರ ಕೆಲಸಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ಗ್ರಾಕೂಸ ಕಾರ್ಯಕರ್ತೆ ಅಕ್ಕಮ್ಮ ಮರಬ್ಬಿ ಹಾಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮನರೇಗಾ ಬಜೆಟ್ ಅತಿ ಕಡಿಮೆ ಇದೆ. ಕೆಲಸ ಮಾಡಿದ 2 ತಿಂಗಳ ಕೂಲಿ ಹಣದಲ್ಲಿ ಒಂದು ವಾರ ಹಾಗೂ ಎರಡು ವಾರದ ಹಣ ಖಾತೆಗೆ ಜಮಾ ಆಗಿದ್ದು , ಕಾರ್ಮಿಕರಿಗೆ 15 ದಿನಗಳ ಒಳಗಾಗಿ ಹಣ ಪಾವತಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ನಿರಂತರ 100 ದಿನಗಳ ಕೆಲಸಕ್ಕೆ ಸಮಯಕ್ಕೆ ಸರಿಯಾಗಿ ಕೂಲಿ ಪಾವತಿಸುವಂತೆ ಬಜೆಟ್ ಹಣವನ್ನು ಹೆಚ್ಚಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪಂಪ್‌ಸೆಟ್‌ಗಳಿಗೆ ಮೀಟರ್ ಆಳವಡಿಸದಂತೆ ರೈತ ಸಂಘ ಆಗ್ರಹ

“200 ಮಾನವ ದಿನಗಳ ಕೂಲಿ ಕೊಡಬೇಕು. ಕೂಲಿ ₹600ಕ್ಕೆ ಹೆಚ್ಚಳ ಮಾಡಬೇಕು. ಕೂಲಿ ಕೆಲಸ ಮಾಡುವಾಗ ಕಾರ್ಮಿಕರು ಮೃತಪಟ್ಟರೆ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಬೇಕು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...