ವಿಜಯನಗರ | ಪ್ರವಾಸಿ ಮಹಿಳೆಯೊಂದಿಗೆ ಅನುಚಿತ ವರ್ತನೆ; ಅನಧಿಕೃತ ಗೈಡ್‌ ಬಂಧನ

Date:

ಹಂಪಿಯಲ್ಲಿ ಮಹಾರಾಷ್ಟ್ರದ ಪ್ರವಾಸಿ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಅನಧಿಕೃತ ಪ್ರವಾಸಿ ಮಾರ್ಗದರ್ಶಿಯೊಬ್ಬನನ್ನು ಹಂಪಿ ಪ್ರವಾಸೋದ್ಯಮ ಪೊಲೀಸರು ಬಂಧಿಸಿದ್ದಾರೆ. ಮಾರುತಿ ಅಂಜನಿ ಬಂಧಿತ ಆರೋಪಿ.

ಮಹಾರಾಷ್ಟ್ರದ ಮೀರಾನಗರದಿಂದ ಮಹಿಳಾ ಪ್ರವಾಸಿ ಮಾರುತಿ ಎಂಬುವವರ ವಿರುದ್ಧ ದೂರು ನೀಡಿದ್ದಾರೆ. ಆತನೊಂದಿಗೆ ಪ್ರವಾಸೋದ್ಯಮ ಇಲಾಖೆಯ ಕಚೇರಿಗೆ ಬಂದಾಗ, ಅಲ್ಲಿದ್ದ ಸಿಬ್ಬಂದಿ ತಮಗೆ ಬೆಂಬಲ ನೀಡದೆ, ಆರೋಪಿಗೇ ನೆರವಾಗುವ ರೀತಿಯಲ್ಲಿ ವರ್ತಿಸಿದರು. ಹೀಗಾಗಿ ಇಲಾಖೆಯ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಮಹಿಳೆ ದೂರಿದ್ದಾರೆ.

ಮಹಿಳೆ ದೂರು ನೀಡಲು ಬಂದಾಗ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ ಅವರು ಕಚೇರಿಯಲ್ಲಿ ಇರಲಿಲ್ಲ. ಕರ್ನಾಟಕ–50 ವೈಭವ ಕುರಿತಂತೆ ಜಿಲ್ಲಾಧಿಕಾರಿ ಅವರು ಕರೆದಿದ್ದ ಸಿದ್ಧತಾ ಸಭೆಯಲ್ಲಿ ಪಾಲ್ಗೊಳ್ಳಲು ಹೊಸಪೇಟೆಗೆ ಹೋಗಿದ್ದರು. ಅವರು ವಾಪಸ್ ಬಂದಾಗ ವಿಷಯ ಗೊತ್ತಾಗಿದ್ದು, ಬಳಿಕ ಹಂಪಿ ಠಾಣೆಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯ ಹೇಳಿಕೆ ಆಧರಿಸಿ ಅನಧಿಕೃತ ಪ್ರವಾಸಿ ಮಾರ್ಗದರ್ಶಿ ಮಾರುತಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಾರುತಿ ತನ್ನನ್ನು ಪ್ರವಾಸಿ ಮಾರ್ಗದರ್ಶನೆಂದು ಪರಿಚಯಿಸಿಕೊಂಡಿದ್ದ. ಹೀಗಾಗಿ ಅವರ ಸೇವೆಯನ್ನು ಮಹಿಳೆ ಒಪ್ಪಿಕೊಂಡಿದ್ದರು. ಪ್ರವಾಸಿಗರು ಅನಧಿಕೃತ ಪ್ರವಾಸಿ ಮಾರ್ಗದರ್ಶಕರ ಬಗ್ಗೆ ಎಚ್ಚರದಿಂದ ಇರಬೇಕು. ಪ್ರವಾಸಿಗರಿಗೆ ಮಾರ್ಗದರ್ಶಕರ ಸೇವೆಯ ಅಗತ್ಯವಿದ್ದಲ್ಲಿ, ಅವರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಭುಲಿಂಗ ತಳಕೇರಿ ಹೇಳಿದ್ದಾರೆ.

ವ್ಯಕ್ತಿಯ ವಿರುದ್ಧ ವಿರುದ್ಧ ಐಪಿಸಿ ಸೆಕ್ಷನ್ 509ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ. ಅಸಡ್ಡೆಯಿಂದ ವರ್ತಿಸಿದ ಮೂವರು ಸಿಬ್ಬಂದಿಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...