ವಿಜಯನಗರ | ಅಂಧ ಮಹಿಳೆ ಮೇಲೆ ಅತ್ಯಾಚಾರ; ಸಂತ್ರಸ್ತೆ ಆತ್ಮಹತ್ಯೆ

Date:

ಅಂಧ ಮಹಿಳೆ ಮೇಲೆ ಕಾಮುಖನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಾಪುರ ತಾಂಡದಲ್ಲಿ ನಡೆದಿದೆ. ಸಂತ್ರಸ್ತೆ ಆತ್ಯಹತ್ಯೆಗೆ ಬಲಿಯಾಗಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯ ಮಗಳ ಮದುವೆ ನಿಶ್ಚಯವಾಗಿದ್ದ ಕಾರಣ, ಎಲ್ಲರೂ ಮದುವೆ ಸಿದ್ಧತೆಗಾಗಿ ಊರಿಗೆ ತೆರಳಿದ್ದರು. ಕಣ್ಣು ಕಾಣದ ಕಾರಣ, 58 ವರ್ಷದ ಮಹಿಳೆ ಮನೆಯಲ್ಲಿಯೂ ಉಳಿದಿದ್ದರು. ಈ ವೇಳೆ, ಆಕೆಗೆ ಸಹಾಯ ಮಾಡುವುದಾಗಿ ಬಂದಿದ್ದ ಅದೇ ತಾಂಡಾದ ಲೋಕೇಶ್‌ ಎಂಬ ಕಾಮಪಿಪಾಸು, ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಪರಾರಿಯಾಗಿದ್ದ.

ಕಾಮುಕನ ಕುಕೃತ್ಯದಿಂದ ಗಾಯಗೊಂಡಿದ್ದ ಸಂತ್ರಸ್ತ ವೃದ್ದೆಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದ ಮಹಿಳೆ ಶುಕ್ರವಾರ ಮನೆಗೆ ಮರಳಿದ್ದರು. ಕೃತ್ಯದಿಂದ ಮನನೊಂದಿದ್ದ ಆಕೆ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಿಂದ ಸಿಟ್ಟಾಗಿದ್ದ ಗ್ರಾಮಸ್ಥರು ಹಗರಿಬೊಮ್ಮನಹಳ್ಳಿ ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ತಹಶೀಲ್ದಾರ್‌ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಲೋಕೇಶನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...