ವಿಜಯನಗರ | ಆಟೋ ನಿಲ್ದಾಣ ತೆರವುಗೊಳಿಸದಂತೆ ಚಾಲಕರ ಮನವಿ

Date:

ವಿಜಯನಗರದ ಕೂಡ್ಲಿಗಿ ಪಟ್ಟಣದ ಮದಕರಿ ವೃತ್ತದ ಆಟೋ ನಿಲ್ದಾಣವನ್ನು ಸಾರ್ವಜನಿಕ ಶೌಚಾಲಯ ನಿರ್ಮಿಸಿ ಆಟೋ ಚಾಲಕರನ್ನು ಒಕ್ಕಲಿಸಬಾರದೆಂದು ಫೆಡರೇಶನ್ ಆಫ್ ಕರ್ನಾಟಕ ಆಟೋರಿಕ್ಷಾ ಡ್ರೈವರ್ ಯೂನಿಯನ್ಸ್ ಅಧಿಕಾರಿಗಳಿಗೆ ಮನವಿ ಮಾಡಿತು.

ಈಗಿರುವ ಆಟೋ ನಿಲ್ದಾಣವನ್ನು ಸಂಪೂರ್ಣವಾಗಿ ಸಾರ್ವಜನಿಕರ ಶೌಚಾಲಯಕ್ಕಾಗಿ ತೆಗೆದುಕೊಂಡರೆ ಅದನ್ನೆ ನಂಬಿ ಜೀವನ ನಡೆಸುತ್ತಿರುವವರ ಗತಿ ಏನು ಎನ್ನುವ ಆತಂಕ ಚಾಲಕರಲ್ಲಿ ಎದುರಾಗಿದೆ. ಈ ರೀತಿಯಾದರೆ ನಮಗೆ ಜೀವನ ನಡೆಸಲೂ ಕಷ್ಟವಾಗುತ್ತದೆ ಎಂದು ಅಳಲು ತೋಡಿಕೊಂಡರು.

ಯೂನಿಯನ್ ಅಧ್ಯಕ್ಷ ಮಯೂರ ಮಂಜುನಾಥ ಮಾತನಾಡಿ, ಸುಮಾರು 200 ಕುಟುಂಬಗಳು ಆಟೋ ವೃತ್ತಿಯನ್ನು ನಂಬಿ ಜೀವನ ನಡೆಸುತ್ತಿವೆ. ಈಗ ನಿಲ್ದಾಣ ತೆರವುಗೊಳಿಸಿ ಅವರನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ. ಬಡ ಆಟೋ ಚಾಲಕರಿಗೆ ತೊಂದರೆ ಕೊಡಬೇಡಿ. ಶೌಚಾಲ ನಿರ್ಮಿಸಲು ಬದಲಿ ಸ್ಥಳ ಗುರುತಿಸಿ ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷ ಕಾವಲಿ ಶಿವಪ್ಪ ನಾಯಕ ಹಾಗೂ ಪಟ್ಟಣ ಪಂಚಾಯತಿ ಅಧಿಕಾರಿ ಗಿರೀಶ್‌ ಅವರಿಗೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯನಗರ | ಬಾಬಾ ಸಾಹೇಬರ ‘ಸಂವಿಧಾನ’ವೊಂದು ಮಹಾಕಾವ್ಯ: ಎಲ್ ಎನ್ ಮುಕುಂದರಾಜ್

ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಾವಲಿ ಶಿವಪ್ಪ ನಾಯಕ ಮಾತನಾಡಿ, ಚಾಲಕರಿಗೆ ತೊಂದರೆ ಆಗುವುದರ ಬಗ್ಗೆ ಗಮನಕ್ಕೆ ಬಂದಿದ್ದು,‌ ಕೂಡಲೇ ಕೆಲಸ ಸ್ಥಗಿತಗೊಳಿಸುತ್ತೇವೆ. ಹಾಗೂ ಸರ್ಕಾರದಿಂದ ಮಂಜೂರಾದ ಶೌಚಾಲಯವನ್ನು ಬೇರೆ ಸ್ಥಳ ನಿಗದಿ ಮಾಡಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಿರ್ಮಿಸುತ್ತೇವೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...