ವಿಜಯನಗರ | ಅನುದಾನ,‌ ಅನುದಾನರಹಿತ ಶಾಲೆಗಳಲ್ಲಿ ಡೊನೇಷನ್ ತಡೆಗೆ ಎಸ್‌ಎಫ್ಐ ಆಗ್ರಹ

Date:

ವಿಜಯನಗರ ಜಿಲ್ಲೆಯ ಖಾಸಗಿ, ಅನುದಾನ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಡೊನೇಷನ್ ಹಾವಳಿ ತಡಗಟ್ಟುವಂತೆ‌ ಹಾಗೂ ಶಾಲೆಗಳ ಸೂಚನಾ ಫಲಕದಲ್ಲಿ ಶುಲ್ಕದ ವಿವರ ಪಟ್ಟಿಯನ್ನು ಹಾಕಲು ಒತ್ತಾಯಿಸಿ ಎಸ್ಎಫ್ಐ ಹೊಸಪೇಟೆ ತಾಲೂಕು ಸಮಿತಿಯಿಂದ ಡಿಡಿಪಿಐ ಅವರಿಗೆ ಮನವಿ ಸಲ್ಲಿಸಿದರು.

“ವಿಜಯನಗರ 2025-26ರ ಖಾಸಗಿ ಶಾಲೆಗಳ ಪ್ರವೇಶವನ್ನು ಆರಂಭಿಸಿದ್ದು, ದಾಖಲಾತಿ ನಡೆಯುತ್ತಿದೆ. ಜಿಲ್ಲೆಯ ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗುತ್ತಿದೆ ಹಾಗೂ ಆರ್‌ಟಿಐ ನಿಯಮ ಪಾಲಿಸುವಂತೆ ಸೂಕ್ತ ಕ್ರಮ ವಹಿಸಬೇಕು” ಎಂದು ಆಗ್ರಹಿಸಿದರು.

ಎಸ್‌ಎಫ್ಐನ ತಾಲೂಕು ಅಧ್ಯಕ್ಷೆ ಲಕ್ಷ್ಮಿ ಮಾತನಾಡಿ, “ಬಹುತೇಕ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಮನಬಂದಂತೆ ವಸೂಲಿ ಮಾಡಲು ಖಾಸಗಿ ಶಾಲೆಗಳು ಮುಂದಾಗಿವೆ. ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಡೊನೇಷನ್ ವಸೂಲಿಗೆ ಮುಂದಾದರೂ ಜಿಲ್ಲೆ ಮತ್ತು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮಗೆ ಯಾವುದೇ ಸಂಬಂಧವಿಲ್ಲದಂತೆ ಕಣ್ಣುಮುಚ್ಚಿ ಕುಳಿತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಶಿವಾರೆಡ್ಡಿ ಮಾತನಾಡಿ, “2025-26ನೇ ಸಾಲಿನಲ್ಲಿ ಪ್ರವೇಶ ಶುಲ್ಕ, ಸಮವಸ್ತ್ರ ಶೂ-ಸಾಕ್ಸ್, ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್, ಭೋದನಾ ಶುಲ್ಕ, ಬುಕ್, ನೋಟ್ಸ್ ಸೇರಿದಂತೆ ವಿವಿಧ ಶುಲ್ಕವನ್ನು ಹೆಚ್ಚಳ ಮಾಡಿ ಡೊನೇಷನ್ ಸಹಿತ ಹಣ ವಸೂಲಿ ಮಾಡಲು ಖಾಸಗಿ ಶಾಲೆಗಳು ಮುಂದಾಗಿವೆ. ಸರ್ಕಾರದ 1983 ಶಿಕ್ಷಣ ಕಾಯ್ದೆಯನ್ನು ಉಲ್ಲಂಘನೆ ಮಾಡಿ ತಾಲೂಕಿನ ಬಹುತೇಕ ಶಾಲೆಗಳಲ್ಲಿ ಸಮವಸ್ತ್ರ ಹಾಗೂ ವಿವಿಧ ಪರಿಕರಗಳನ್ನು ಮಾರಾಟ ಮಾಡುತ್ತಿರುವುದು ಕಾನೂನು ಬಾಹಿರ. ಶಿಕ್ಷಣ ಇಲಾಖೆಯ ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡುತ್ತಿರುವ ಶಾಲೆಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಎಸ್‌ಎಫ್ಐ ಜಿಲ್ಲಾಜಂಟಿ ಕಾರ್ಯದರ್ಶಿ ಕೆ ಎ ಪವನ ಕುಮಾರ್ ಮಾತನಾಡಿ, “ಶಿಕ್ಷಣ ಕಾಯಿದೆ ಪ್ರಕಾರ ಎಲ್ಲ ಖಾಸಗಿ ಶಾಲೆಗಳು ಪ್ರವೇಶಾತಿಗೆ ಖಾಲಿ ಇರುವ ಸೀಟುಗಳನ್ನು ತಮ್ಮ ಶಾಲೆಯ ಸೂಚನಾ ಫಲಕದಲ್ಲಿ ಹಾಕಬೇಕು. ರೋಸ್ಟರ್ ನಿಯಮ ಜಾರಿ ಮಾಡಿ, ಶುಲ್ಕವನ್ನು ನಿಗದಿಗೊಳಿಸಿ ಶಾಲೆಯ ಸೂಚನಾ ಫಲಕದಲ್ಲಿ ಹಾಕಬೇಕೆಂದು ನಿಯಮವಿದ್ದರೂ ಜಿಲ್ಲೆಯ ಯಾವ ಶಾಲೆಗಳೂ ಕೂಡ ಈ ನಿಯಮವನ್ನು ಅನುಸರಿಸುತ್ತಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

“ಶಿಕ್ಷಣ ಇಲಾಖೆಯ ಅಧಿಕಾರಿಗಳು ಖಾಸಗಿ ಶಾಲೆಯ ಆಡಳಿತ ಮಂಡಳಿಯ ಜತೆಗೆ ಹೊಂದಾಣಿ ಮಾಡಿಕೊಂಡಿರುವ ಬಗ್ಗೆ ಗುಮಾನಿ ಇದೆ. ಆರ್‌ಟಿ‌ಇ ಅಡಿಯಲ್ಲಿ ಹಿಂದುಳಿದ ಮತ್ತು ದುರ್ಬಲ ಮಕ್ಕಳಿಗೆ ಶೇ.25ರಷ್ಟು ನಿಗದಿ ಮಾಡಿದ್ದರೂ ಖಾಸಗಿ ಶಾಲೆಗಳು ಸರಿಯಾಗಿ ಅನುಸರಿಸುತಿಲ್ಲ. ಇತ್ತೀಚಿನ ದಿನಗಳಲ್ಲಿ ಶಾಲೆಗಳಲ್ಲಿಯೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಶಾಲೆಗಳಲ್ಲಿ ಲೈಂಗಿಕ ದೌರ್ಜನ್ಯ ವಿರೋಧಿ ಸಮಿತಿ ರಚಿಸಿ ಸೂಚನಾ ಫಲಕದಲ್ಲಿ ಅಳವಡಿಸಬೇಕು” ಎಂದು ಆಗ್ರಹಿಸಿದರು.

ಲಕ್ಷ್ಮಿ, ಶಿವರೆಡ್ಡಿ, ಪವನ್ ಕುಮಾರ್, ರಾಜೀವ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...